ಭವಿಷ್ಯದ ಬದುಕಿಗಾಗಿ ಪರಿಸರ ಸಂರಕ್ಷಿಸಿ: ವಿಶ್ವಸಂಸ್ಥೆ

ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಮೈಸೂರಿನಲ್ಲಿ ಫ್ರೂಟ್ ಪಾರ್ಕ್‌ಗೆ ಚಾಲನೆ

ವಿಶ್ವ ಪರಿಸರ ದಿನವನ್ನು 1974 ರಲ್ಲಿ ವಿಶ್ವಸಂಸ್ಥೆಯ ಅನುಮೋದನೆಯೊಂದಿಗೆ ಆರಂಭಿಸಲಾಯಿತು. ಈ ಕುರಿತು 1972 ರಲ್ಲಿಯೇ ಚರ್ಚೆಗಳು ಆರಂಭವಾಗಿತ್ತು. ಆದರೆ ಎರಡು ವರ್ಷಗಳ ಕಾಲ ಈ ಚರ್ಚೆ ನಡೆಸಿ, 1974 ಜೂನ್ 5 ರಂದು ಮೊದಲು ವಿಶ್ವ ಪರಿಸರ ದಿನವನ್ನು ಆಚರಿಸಲಾಯಿತು. ಅಂದಿನಿಂದ ಪ್ರತಿ ವರ್ಷ ವಿಶ್ವ ಪರಿಸರ ದಿನವನ್ನು ಒಂದು ಧ್ಯೇಯವಾಕ್ಯದೊಂದಿಗೆ ಆಚರಿಸಲಾಗುತ್ತದೆ.

ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಮೈಸೂರಿನಲ್ಲಿ ನವ ಭಾರತ ನಿರ್ಮಾಣ್ ಸೇವಾ ಟ್ರಸ್ಟ್ ಹಾಗೂ ಅನಿಕೇತನ ಸೇವಾ ಟ್ರಸ್ಟ್ ವತಿಯಿಂದ ‘ಪ್ರೋಟ್ ಪಾರ್ಕ್’ ನಿರ್ಮಾಣಕ್ಕೆ ಚಾಲನೆ ನೀಡುವ ಮೂಲಕ ವಿಶಿಷ್ಠ ಕಾರ್ಯಕ್ರಮಕ್ಕೆ ಮುನ್ನುಡಿ ಬರೆಯಲಾಯಿತು.

ಇದು ನಗರಪಾಲಿಕೆ ಸದಸ್ಯ ಕೆ.ವಿ.ಶ್ರೀಧರ್ ಅವರ ಆಸಕ್ತಿಯಿಂದ ರೂಪುಗೊಂಡ ಕಾರ್ಯಕ್ರಮ. ಅವರ ವಾರ್ಡ್ ವ್ಯಾಪ್ತಿಯ ಮಹದೇಶ್ವರ ಬಡಾವಣೆಯಲ್ಲಿ ಏರ್ಪಡಿಸಲಾಗಿದ್ದ ಸರಳ ಸಮಾರಂಭದಲ್ಲಿ ಅಂತರಾಷ್ಟ್ರೀಯ ಕ್ರಿಕೆಟ್ ಪಟು ಜಾವಗಲ್ ಶ್ರೀನಾಥ್ ಹಣ್ಣಿನ ಗಿಡ ನೆಡುವ ಮೂಲಕ ‘ಪ್ರೋಟ್ ಪಾರ್ಕ್’ಗೆ ಚಾಲನೆ ನೀಡಿದರು.

ಈ ವೇಳೆ ಮಾತನಾಡಿದ ಅವರು, ಇತ್ತೀಚಿನ ದಿನಗಳಲ್ಲಿ ಪರಿಸರದ ಮಹತ್ವವನ್ನು ಅರ್ಥಮಾಡಿಕೊಳ್ಳದೆ ಮಾನವರು ಅದನ್ನು ನಾಶಪಡಿಸುತ್ತಿದ್ದಾರೆ. ಈಗ ಮಾನವ ಅತಿಯಾದ ಚಟುವಟಿಕೆಗಳಿಂದಾಗಿ ಗಾಳಿ, ನೀರು, ಮಣ್ಣು ಮುಂತಾದ ಪರಿಸರದ ಪ್ರತಿಯೊಂದು ಅಂಶವೂ ಕಲುಷಿತಗೊಂಡಿದೆ. ನಮ್ಮ ಅಭಿವೃದ್ಧಿ ಹಾಗೂ ಸ್ವಾರ್ಥಕ್ಕಾಗಿ ನಾವು ಅತ್ಯಮೂಲ್ಯ ಪರಿಸರವನ್ನು ಹಾಳುಗೆಡವುತ್ತಿದ್ದೇವೆ ಎಂದು ಹೇಳಿದರು.

ಪರಿಸರ ಮಾಲಿನ್ಯವು ಜೀವಿಗಳಿಗೆ ನೇರವಾಗಿ ಹಾನಿ ಮಾಡುವುದರಿಂದ ನಾವು ನಮ್ಮ ಪರಿಸರವನ್ನು ರಕ್ಷಿಸಲು ವಿಶೇಷ ಗಮನ ಹರಿಸಬೇಕು. ನಮ್ಮ ಪರಿಸರದ ರಕ್ಷಣೆ ನಮ್ಮ ಕೈಯಲ್ಲಿಯೇ ಇರುವುದರಿಂದ ಅದರ ರಕ್ಷಣೆಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಯಧುವೀರ ಕೃಷ್ಣದತ್ತ ಚಾಮರಾಜ ಒಡೆಯರ್, ಪರಿಸರವನ್ನು ಹೆಚ್ಚು ಆರೋಗ್ಯಕರವಾಗಿಸಲು ನಾವು ಗಿಡಗಳನ್ನು ನೆಡುವುದನ್ನು ಅಭ್ಯಾಸ ಮಾಡಿಕೊಳ್ಳಬೇಕು. ಆದಷ್ಟೂ ಪ್ಲಾಸ್ಟಿಕ್ ಬಳಕೆಯನ್ನು ಕಡಿಮೆ ಮಾಡಬೇಕು. ಅದಕ್ಕೆ ಪರ್ಯಾಯವಾಗಿ ಪೇಪರ್ ಬ್ಯಾಗ್ ಬಳಸಬೇಕು ಎಂದು ನುಡಿದರು.

ಜಿಎಸ್‌ಎಸ್ ಸಮೂಹ ಸಂಸ್ಥೆಯ ಶ್ರೀಹರಿ, ನಿವೃತ್ತ ಅರಣ್ಯಾಧಿಕಾರಿ ಶ್ರೀನಿವಾಸ್, ಚಾಆಯಾಗ್ರಾಹಕ ಲೋಕೆಶ್ ಮೊಸಳೆ, ವೈ.ರಮೇಶ್, ಎಂ.ಕಲ್ಪನಾ ಕುಟ್ಟಪ್ಪ, ನಗರಪಾಲಿಕೆ ಮಾಜಿ ಸದಸ್ಯ ಕೆ.ವಿ.ಮಲ್ಲೇಶ್ ಮುಂತಾದವರು ಹಾಜರಿದ್ದರು.

 

ವಿಶ್ವ ಪರಿಸರ ದಿನದ ಇತಿಹಾಸ

ಮಾನವ ಪರಿಸರ ಕುರಿತ ಸ್ಟಾಕ್‌ಹೋಮ್ ಸಮ್ಮೇಳನದ ಮೊದಲ ದಿನದಂದು ವಿಶ್ವಸಂಸ್ಥೆಯು 1972 ರಲ್ಲಿ ವಿಶ್ವ ಪರಿಸರ ದಿನವನ್ನು ಸ್ಥಾಪಿಸಿತು, ಇದರ ಪರಿಣಾಮವಾಗಿ ಮಾನವ ಸಂವಹನ ಮತ್ತು ಪರಿಸರದ ಏಕೀಕರಣ ಕುರಿತು ಚರ್ಚೆಗಳು ನಡೆದವು. ಎರಡು ವರ್ಷಗಳ ನಂತರ, 1974 ರಲ್ಲಿ ಮೊದಲ ವಿಶ್ವ ಪರಿಸರ ದಿನವನ್ನು ‘ಕೇವಲ ಒಂದು ಭೂಮಿ‘ ಎಂಬ ವಿಷಯದೊಂದಿಗೆ ನಡೆಸಲಾಯಿತು. 1974 ರಿಂದ ವಾರ್ಷಿಕವಾಗಿ ವಿಶ್ವ ಪರಿಸರ ದಿನಾಚರಣೆಯನ್ನು ನಡೆಸಲಾಗಿದ್ದರೂ, 1987 ರಲ್ಲಿ ವಿವಿಧ ಆತಿಥೇಯ ರಾಷ್ಟ್ರಗಳನ್ನು ಆ್ಂಕೆು ಮಾಡುವ ಮೂಲಕ ಈ ಚಟುವಟಿಕೆಗಳ ಕೇಂದ್ರವನ್ನು ಎಲ್ಲಾ ಕಡೆ ಹರಡುವ ಆಲೋಚನೆ ಪ್ರಾರಂಭವಾಯಿತು.

ವಿಶ್ವ ಪರಿಸರ ದಿನವನ್ನು ಪ್ರತಿವರ್ಷ ಜೂನ್ ೫ ರಂದು ಆಚರಿಸಲಾಗುತ್ತದೆ. ಈ ದಿನದ ಉದ್ದೇಶ ಪರಿಸರ ಸಂರಕ್ಷಣೆಗಾಗಿ ಜಾಗೃತಿ ಮೂಡಿಸುವುದು, ಉತ್ತೇಜಿಸುವ ವಿಶ್ವಸಂಸ್ಥೆಯ ಪ್ರಮುಖ ವಾಹನವಾಗಿದೆ. 1974 ರಲ್ಲಿ ಮೊದಲ ಬಾರಿಗೆ ನಡೆದ ಇದು ಸಮುದ್ರ ಮಾಲಿನ್ಯ, ಮಾನವ ಜನಸಂಖ್ಯೆ, ಜಾಗತಿಕ ತಾಪಮಾನ ಏರಿಕೆಯಿಂದ ಹೊರಹೊಮ್ಮುವ ಪರಿಸರ ಸಮಸ್ಯೆಗಳ ಬಗ್ಗೆ ಸುಸ್ಥಿರ ಬಳಕೆ ಮತ್ತು ವನ್ಯಜೀವಿ ಅಪರಾಧಗಳ ಬಗ್ಗೆ ಜಾಗೃತಿ ಮೂಡಿಸುವ ಪ್ರಮುಖ ಅಭಿಯಾನವಾಗಿದೆ. ವಿಶ್ವ ಪರಿಸರ ದಿನವು ಸಾರ್ವಜನಿಕವಾಗಿ ತಲುಪಲು ಜಾಗತಿಕ ವೇದಿಕೆಯಾಗಿ ಬೆಳೆದಿದೆ. ವಾರ್ಷಿಕವಾಗಿ ೧೪೩ಕ್ಕೂ ಹೆಚ್ಚು ದೇಶಗಳ ಭಾಗವಹಿಸುವಿಕೆ. ಪ್ರತಿ ವರ್ಷ, ವಿಶ್ವ ಪರಿಸರ ದಿನವು ಹೊಸ ವಿಷಯಗಳು ಒದಗಿಸಿದ್ದು, ಪ್ರಮುಖ ಸಂಸ್ಥೆಗಳು, ಎನ್‌ಜಿಒಗಳು, ಸಮುದಾಯಗಳು, ಸರ್ಕಾರಗಳು ಮತ್ತು ವಿಶ್ವಾದ್ಯಂತದ ಎಲ್ಲ ಪ್ರಸಿದ್ಧ ವ್ಯಕ್ತಿಗಳು ಪರಿಸರ ಕಾರಣಗಳನ್ನು ಪ್ರತಿಪಾದಿಸಲು ಅಳವಡಿಸಿಕೊಂಡಿದ್ದಾರೆ.

andolana

Recent Posts

ಮುಡಾಗೆ ಆರ್ಥಿಕ ಸಂಕಷ್ಟ; 20 ಕೋಟಿ ರೂ ನಷ್ಟ

ಮೈಸೂರು: ಬದಲಿ ನಿವೇಶನ ಹಂಚಿಕೆ, ೫೦:೫೦ ಅನುಪಾತದಲ್ಲಿ ನಿವೇಶನ ಅಕ್ರಮ ಹಂಚಿಕೆ ಹಗರಣದಿಂದಾಗಿ ಇಡೀ ರಾಜ್ಯದ ಗಮನ ಸೆಳೆದಿರುವ ಮೈಸೂರು…

50 mins ago

ಆಂದೋಲನ ಫಲಶ್ರುತಿ: ಕೊನೆಗೂ ತೆರವಾಯ್ತು ಬೃಹತ್‌ ಮರದ ಕಾಂಡ

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಜುಂಬೂ ಸವಾರಿ ಸಾಗುವ ಮಾರ್ಗದಲ್ಲಿ ಕಳೆದ ಎರಡೂ ವರ್ಷಗಳಿಂದ ಬಿದ್ದಿದ್ದ ಬೃಹತ್ ಮರದ ಕಾಂಡವನ್ನು…

60 mins ago

ಜಂಬೂ ಸವಾರಿ ಮಾರ್ಗದಲ್ಲಿ ಸಣ್ಣ ಬದಲಾವಣೆ

ಮೈಸೂರು: ಈ ಬಾರಿಯ ದಸರಾ ಮಹೋತ್ಸವದ ಜಂಬೂ ಸವಾರಿಯನ್ನು ವೀಕ್ಷಿಸಲು ಆಗಮಿಸಿದ ಎಲ್ಲರಿಗೂ ಚಿನ್ನದ ಅಂಬಾರಿ ನೋಡುವ ಅವಕಾಶ ಸಿಗಬೇಕು…

1 hour ago

ಪೈಲ್ವಾನರ ಕಸರತ್ತಿಗೆ ಗರಡಿ ಮನೆಗಳು ಸಜ್ಜು

ಮೈಸೂರು: ಸಾಂಸ್ಕೃತಿಕ ರಾಜಧಾನಿ, ಅರಮನೆಗಳ ನಗರಿ ಎಂದು ಕರೆಯುವ ಮೈಸೂರನ್ನು ಗರಡಿ ಮನೆಗಳ ನಗರಿ ಎಂದೂ ಇತ್ತೀಚಿನ ವರ್ಷಗಳಲ್ಲಿ ಕರೆಯುವುದು…

1 hour ago

ತಿ.‌ ನರಸೀಪುರ: ಬೈಕ್ ಡಿಕ್ಕಿ ಚಿರತೆ ಸಾವು

ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…

9 hours ago

ತಿರುಪತಿ ಲಡ್ಡು: ತುಪ್ಪದಲ್ಲಿ ಪ್ರಾಣಿ ಕೊಬ್ಬು ಬಳಕೆ

ಅಮರಾವತಿ: ಜಗತ್‌ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…

11 hours ago