ವಾಣಿಜ್ಯ

ರಿಲಯನ್ಸ್ ನಿಂದ ಪಶ್ಚಿಮ ಬಂಗಾಳದಲ್ಲಿ 20,000 ಕೋಟಿ ಹೂಡಿಕೆ

ಕೊಲ್ಕತ್ತಾ : ರಿಲಯನ್ಸ್ ಕಂಪನಿ ಪಶ್ಚಿಮ ಬಂಗಾಳದಲ್ಲಿ 20.000 ಕೋಟಿ ಹೂಡಿಕೆ ಮಾಡುವುದಾಗಿ ಕಂಪನಿಯ ಅಧ್ಯಕ್ಷ ಮುಕೇಶ್ ಅಂಬಾನಿ ತಿಳಿಸಿದ್ದಾರೆ.

ಕೊಲ್ಕತ್ತಾದಲ್ಲಿ ನಡೆದ 7ನೇ ಬೆಂಗಾಲ್ ಗ್ಲೋಬಲ್ ಉದ್ಯಮ ಸಮಾವೇಶದಲ್ಲಿ ಮಾತನಾಡಿದ ಮುಕೇಶ್ ಅಂಬಾನಿಯವರು, ರಿಲಯನ್ಸ್ ಇದುವರೆಗೂ ಪಶ್ಚಿಮ ಬಂಗಾಳದಲ್ಲಿ 45,000 ಕೋಟಿ ಬಂಡವಾಳವನ್ನು ಹೂಡಿಕೆ ಮಾಡಿದೆ.

ಮುಂದಿನ ಮೂರು ವರ್ಷಗಳಲ್ಲಿ ಹೆಚ್ಚುವರಿಯಾಗಿ 20 ಸಾವಿರ ಕೋಟಿ ರೂ. ಬಂಡವಾಳವನ್ನು ಹೆಚ್ಚುವರಿಯಾಗಿ ಹೂಡಿಕೆ ಮಾಡಲಿದ್ದೇವೆ ಎಂದು ಹೇಳಿದ್ದಾರೆ.

ನಾವು ಜಿಯೋ ಮೂಲಕ ದೇಶದ ಮೂಲೆ ಮೂಲೆಗಳಿಗೆ 5G ತಂತ್ರಜ್ಞಾನವನ್ನು ಒದಗಿಸುತ್ತಿದ್ದೇವೆ. ಈಗ ಹೂಡಿಕೆ ಮಾಡಲು ಸಿದ್ಧವಾಗಿರುವ 20 ಸಾವಿರ ಕೋಟಿ ರೂ ಹಣವನ್ನು ಟೆಲಿಕಾಂ, ಜೈವಿಕ ಇಂಧನ ಮತ್ತು ರಿಟೇಲ್ ಗೆ ವ್ಯಯಿಸಲಾಗುವುದು ಎಂದು ತಿಳಿಸಿದ್ದಾರೆ.

ಅತ್ಯಂತ ಕಡಿಮೆ ಬೆಲೆಯಲ್ಲಿ ಲ್ಯಾಪ್‌ಟಾಪ್ : ರಿಲಯನ್ಸ್ ಮುಖ್ಯಸ್ಥ ಮುಖೇಶ್‌ ಅಂಬಾನಿ ಈಗಾಗಲೇ ಮಾರುಕಟ್ಟೆಯಲ್ಲಿ ಕಡಿಮೆ ಬೆಲೆಯ ಎಲೆಕ್ಟ್ರಾನಿಕ್‌ ವಸ್ತುಗಳು ಹಾಗೂ ಇಂಟರ್ನೆಟ್‌ ನೀಡುವ ಮೂಲಕ ಗ್ರಾಹಕರನ್ನು ತನ್ನತ್ತ ಸೆಳೆದುಕೊಂಡಿದ್ದಾರೆ. ಇದೀಗ ಮಾರುಕಟ್ಟೆಗೆ ಅತ್ಯಂತ ಕಡಿಮೆ ಬೆಲೆಯಲ್ಲಿ ಲ್ಯಾಪ್‌ಟಾಪ್ ಬಿಡುಗಡೆ ಮಾಡಲು ಚಿಂತನೆ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ.

ಮುಖೇಶ್‌ ಅಂಬಾನಿ ಅವರು ವಾರ್ಷಿಕವಾಗಿ ಸುಮಾರು 70,000 ಕೋಟಿ ರೂ.ಆದಾಯದ ಅವಕಾಶವನ್ನು ಬೆನ್ನಟ್ಟುತ್ತಿದ್ದಾರೆ. ಇನ್ನು ಅದಕ್ಕೆ ಹತ್ತಿರವಾಗುವ ಸಲುವಾಗಿ ಭಾರತದಲ್ಲಿ ಅತೀ ಕಡಿಮೆ ಬೆಲೆಯಲ್ಲಿ ಲ್ಯಾಪ್‌ಟಾಪ್ ಅನ್ನು ಬಿಡುಗಡೆ ಮಾಡಲು ಚಿಂತನೆ ನಡೆಸುತ್ತಿದ್ದಾರೆ.ಕೇವಲ 15.000 ಸಾವಿರ ರೂ. ಗೆ ರಿಲಯನ್ಸ್ ಕಂಪನಿಯ ಜಿಯೋ ಲ್ಯಾಪ್‌ಟಾಪ್ ಮಾರುಕಟ್ಟೆಯಲ್ಲಿ ಲಭ್ಯವಾಗಲಿದೆ ಎಂದು ಹೇಳಲಾಗುತ್ತಿದೆ.

ಜಿಯೋ ಕಂಪನಿ ತನ್ನ ಹೊಸ ಲ್ಯಾಪ್‌ಟಾಪ್ ಬಿಡುಗಡೆಯ ಕುರಿತಂತೆ ಈವರೆಗೆ ಅಧಿಕೃತವಾಗಿ ಯಾವುದೇ ವಿವರಗಳನ್ನು ನೀಡಿಲ್ಲ. ಸಧ್ಯ ಜಿಯೋ ಬುಕ್‌ ಬಿಡುಗಡೆ ಜೊತೆಗೆ ಈ ವಿಭಾಗವೂ ಕೂಡ ತೆಗೆದುಕೊಳ್ಳುವ ಉದ್ದೇಶ ಸ್ಪಷ್ಟವಾಗಿದೆ. ರಿಲಯನ್ಸ್‌ ಜಿಯೋ ಕಂಪನಿಯು ಲ್ಯಾಪ್‌ಟಾಪ್‌ ಖರೀದಿಯ ಜೊತೆಗೆ ಗ್ರಾಹಕರಿಗೆ 100 GB ಉಚಿತ ಕ್ಲೌಡ್‌ ಸ್ಟೋರೆಜ್‌ ನೀಡಲಿದೆ.

lokesh

Share
Published by
lokesh

Recent Posts

ಅಮಾನತಾದ ಬಳಿಕ ಅಬ್ದುಲ್‌ ಜಬ್ಬಾರ್‌ ಮೊದಲ ಪ್ರತಿಕ್ರಿಯೆ

ಬೆಂಗಳೂರು: ನಾವು ಮುಂಚೂಣಿ ನಾಯಕರಾಗಿದ್ದೆವು. ಈಗ ಬೇರೆ ಕುದುರೆಗಳು ಬಂದಿವೆ. ಇದೊಂದು ರೇಸ್.‌ ಈಗ ಅವರ ಕುದುರೆಗಳು ಮುಂದೆ ಇವೆ…

5 hours ago

ಸೋಮವಾರಪೇಟೆ: ಹಿರಿಕರ ಗ್ರಾಮದಲ್ಲಿ ಮಳೆಗಾಗಿ ದೇವರ ಮೊರೆ

ಸೋಮವಾರಪೇಟೆ: ವಿಪರೀತ ಬಿಸಿಲಿನಿಂದ ಕಂಗೆಟ್ಟಿರುವ ತಾಲ್ಲೂಕಿನ ಗ್ರಾಮೀಣ ಜನರು ಮಳೆಗಾಗಿ ದೇವರ ಮೊರೆ ಹೋಗುತ್ತಿದ್ದಾರೆ. ಹಿರಿಕರ ಗ್ರಾಮದ ಕೃಷಿಕರು, ಗ್ರಾಮದ…

5 hours ago

ರಾಜ್ಯದಲ್ಲೇ ಕಲಬುರ್ಗಿಯಲ್ಲಿ ಗರಿಷ್ಠ ತಾಪಮಾನ ದಾಖಲು

ಕಲಬುರ್ಗಿ: ಇಂದು(ಏಪ್ರಿಲ್.‌15, 2026) ರಾಜ್ಯದಲ್ಲಿಯೇ ಅತೀ ಹೆಚ್ಚು ಉಷ್ಣಾಂಶ ಕಲಬುರ್ಗಿ ಜಿಲ್ಲೆಯಲ್ಲಿ ದಾಖಲಾಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಕಲಬುರ್ಗಿ ಜಿಲ್ಲೆಯ ನಾಲ್ಕು…

5 hours ago

ಅಯೋಧ್ಯೆ ಶ್ರೀರಾಮನ ದರ್ಶನ ಪಡೆದ ರಾಜ್ಯದ ಕಾಂಗ್ರೆಸ್‌ ಶಾಸಕರು

ಲಕ್ನೋ: ಕರ್ನಾಟಕ ಕಾಂಗ್ರೆಸ್‌ನ ಹಿರಿಯ ಶಾಸಕರು ಅಯೋಧ್ಯೆ ರಾಮಮಂದಿರಕ್ಕೆ ತೆರಳಿ ರಾಮಲಲ್ಲಾನ ದರ್ಶನ ಪಡೆದರು. 12 ಮಂದಿ ಶಾಸಕರು ಇಂದು…

5 hours ago

ಯೋಗೇಶ್‌ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್‌ ಕುಲಕರ್ಣಿ ಅಪರಾಧಿ ಎಂದು ತೀರ್ಪು

ಯೋಗೇಶ್‌ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್‌ ಕುಲಕರ್ಣಿ ಅಪರಾಧಿ ಎಂದು ತೀರ್ಪು ಬೆಂಗಳೂರು: ಧಾರವಾಡ ಜಿಲ್ಲಾ ಪಂಚಾಯತ್‌ ಮಾಜಿ…

6 hours ago

ಪ್ರಧಾನಿ ನರೇಂದ್ರ ಮೋದಿಗೆ ಮನವಿ ಪತ್ರ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮಂಡ್ಯಕ್ಕೆ ಆಗಮಿಸಲು ಬೆಂಗಳೂರಿಗೆ ಬಂದಿಳಿದಿದ್ದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಿಎಂ ಸಿದ್ದರಾಮಯ್ಯ ಮನವಿ ಪತ್ರ ಸಲ್ಲಿಸಿದ್ದಾರೆ. ಇಂದು…

6 hours ago