ಶುಕ್ರವಾರದ ಸೆಷನ್‌ನಲ್ಲಿ ರೂಪಾಯಿ ಕೇವಲ ಒಂದು ಪೈಸೆಯಷ್ಟು ಇಳಿಕೆ ಕಂಡು, ಡಾಲರ್ ಎದುರು 81.71 ಕ್ಕೆ ತಲುಪಿತ್ತು.
ಮುಂಬೈ: ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಸೋಮವಾರದ ಆರಂಭಿಕ ವಹಿವಾಟಿನಲ್ಲಿ ಅಮೆರಿಕನ್ ಡಾಲರ್ ವಿರುದ್ಧ ಭಾರತದ ರೂಪಾಯಿ ಮೌಲ್ಯ 6 ಪೈಸೆ ಕುಸಿತ ಕಂಡಿದ್ದು, ರೂಪಾಯಿ ಮೌಲ್ಯ 81.77 ಕ್ಕೆ ತಲುಪಿದೆ.
ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲದ ಬೆಲೆ ಕಡಿಮೆಯಾಗಿರುವುದು ಮತ್ತು ತಾಜಾ ವಿದೇಶಿ ನಿಧಿಯ ಒಳಹರಿವು ರೂಪಾಯಿ ಮೌಲ್ಯ ಕುಸಿತದ ಮೇಲೆ ಪರಿಣಾಮ ಬೀರಿದೆ ಎಂದು ಫಾರೆಕ್ಸ್ ಡೀಲರ್‌ಗಳು ತಿಳಿಸಿದ್ದಾರೆ.ಅಂತರಬ್ಯಾಂಕ್ ವಿದೇಶಿ ವಿನಿಮಯದಲ್ಲಿ, ದೇಶೀಯ ಘಟಕವು ಡಾಲರ್ ವಿರುದ್ಧ 81.81 ರೂಪಾಯಿ ಮೌಲ್ಯದೊಂದಿಗೆ ದುರ್ಬಲವಾಗಿ ಇಂದಿನ ವಹಿವಾಟು ಆರಂಭಿಸಿ, 6 ಪೈಸೆ ಕುಸಿತ ಕಂಡು 81.77 ರ ಮಟ್ಟವನ್ನು ತಲುಪಿತು. ಶುಕ್ರವಾರದ ಸೆಷನ್‌ನಲ್ಲಿ ರೂಪಾಯಿ ಕೇವಲ ಒಂದು ಪೈಸೆಯಷ್ಟು ಇಳಿಕೆ ಕಂಡು, ಡಾಲರ್ ಎದುರು 81.71 ಕ್ಕೆ ತಲುಪಿತ್ತು.
ಆರು ಕರೆನ್ಸಿಗಳ ವಿರುದ್ಧ ಗ್ರೀನ್‌ಬ್ಯಾಕ್‌ನ ಬಲವನ್ನು ಅಳೆಯುವ ಡಾಲರ್ ಸೂಚ್ಯಂಕವು ಶೇಕಡಾ 0.41 ರಷ್ಟು ಏರಿಕೆಯಾಗಿ 106.39 ಕ್ಕೆ ತಲುಪಿದೆ. ಜಾಗತಿಕ ತೈಲ ಮಾನದಂಡವಾದ ಬ್ರೆಂಟ್ ಕ್ರೂಡ್ ಫ್ಯೂಚರ್ಸ್ ಪ್ರತಿ ಬ್ಯಾರೆಲ್‌ಗೆ ಶೇಕಡಾ 2.58 ರಷ್ಟು ಕುಸಿದು USD 81.47 ಕ್ಕೆ ತಲುಪಿದೆ
ಮೈಸೂರು : ಜಿಲ್ಲೆಯ ಟಿ.ನರಸೀಪುರ ಪಟ್ಟಣದಲ್ಲಿ ಬೆಳ್ಳಂಬೆಳಿಗ್ಗೆಯೇ ಮಚ್ಚು ಲಾಂಗುಗಳಿಂದ ದುಷ್ಕರ್ಮಿಗಳು ಹಲ್ಲೆ ನಡೆಸಿ ವ್ಯಕ್ತಿಯೋರ್ವನನ್ನು ಹತ್ಯೆ ಮಾಡಿರುವ ಘಟನೆ…
ಕೋಲ್ಕತ್ತಾ : ಇಲ್ಲಿನ ವಿಮಾನ ನಿಲ್ದಾಣದಲ್ಲಿ ಫುಟ್ಬಾಲ್ ಮಾಂತ್ರಿಕ ಲಿಯೋನೆಲ್ ಮೆಸ್ಸಿ ಅವರನ್ನು ನೋಡಲು ಅಭಿಮಾನಿಗಳು ಅಪಾರ ಸಂಖ್ಯೆಯಲ್ಲಿ ಸೇರಿದ್ದರು.…
ನ್ಯೂಯಾರ್ಕ್ : ಭಾರತದ ಮೇಲೆ ಡೊನಾಲ್ಡ್ ಟ್ರಂಪ್ ಹೇರಿರುವ ಶೇ.50 ಪ್ರತಿಸುಂಕವನ್ನು ಅಂತ್ಯಗೊಳಿಸಲು ಅಮೆರಿಕದ ಮೂವರು ಸಂಸದರು ನಿಲುವಳಿ ಮಂಡಿಸಿದ್ದಾರೆ.…
ಹಾಸನ : ಕರ್ತವ್ಯದ ವೇಳೆ ಲಾರಿ ಡಿಕ್ಕಿಯಾಗಿ KSRTC ಬಸ್‌ನ ಚೆಕ್ಕಿಂಗ್ ಇನ್ಸ್ಪೆಕ್ಟರ್ ಮೃತಪಟ್ಟಿರುವ ಘಟನೆ ಹಾಸನ ಜಿಲ್ಲೆಯ ಆಲೂರು…
ಶೇ.30ರಷ್ಟು ಉತ್ಪಾದನೆ ಕುಸಿತ ; ಉತ್ತರ ಕೊಡಗಿನ ಭಾಗದಲ್ಲಿ ಹೆಚ್ಚಿನ ಬೆಳೆ ನಷ್ಟ ನವೀನ್ ಡಿಸೋಜ ಮಡಿಕೇರಿ: ಈ ಬಾರಿಯ…
ಭೇರ್ಯ ಮಹೇಶ್ ಕೆ.ಆರ್.ನಗರ : ಭತ್ತದ ನಾಡು ಎಂದೇ ಪ್ರಖ್ಯಾತಿ ಹೊಂದಿರುವ ಕೆ.ಆರ್.ನಗರ ಮತ್ತು ಸಾಲಿಗ್ರಾಮ ತಾಲ್ಲೂಕುಗಳಲ್ಲಿ ಇದೀಗ ಭತ್ತದ…