ನವದೆಹಲಿ: ನೂತನ ಸಂಸತ್ ಭವನ ನಿರ್ಮಾಣ ಯೋಜನೆ ಸೆಂಟ್ರಲ್ ವಿಸ್ತಾದಡಿ ಪ್ರಧಾನಮಂತ್ರಿಗಳ ಕಾರ್ಯಾಲಯ, ಕ್ಯಾಬಿನೆಟ್ ಸೆಕ್ರೆಟರಿಯೇಟ್ ಮತ್ತು ಇತರ ಪ್ರಮುಖ ಕಚೇರಿಗಳ ಸಂಕೀರ್ಣದ ನಿರ್ಮಾಣ ಗುತ್ತಿಗೆಯನ್ನು ನಿರ್ಮಾಣ ಮತ್ತು ಎಂಜಿನಿಯರಿಂಗ್ ಕಂಪನಿ ಎಲ್&ಟಿಗೆ ನೀಡಲಾಗಿದೆ. ಸಂಕೀರ್ಣವನ್ನು 1,189 ಕೋಟಿ ರೂ. ಮೊತ್ತದಲ್ಲಿ ನಿರ್ಮಾಣ ಮಾಡಲಾಗುತ್ತದೆ ಎಂದು ಕೇಂದ್ರ ಲೋಕೋಪಯೋಗಿ ತಿಳಿಸಿದೆ.
ನಿರ್ಮಾಣ ಗುತ್ತಿಗೆಯನ್ನು ಎಲ್&ಟಿಗೆ ನೀಡಿರುವ ಬಗ್ಗೆ ಕೇಂದ್ರ ಲೋಕೋಪಯೋಗಿ ಇಲಾಖೆ ಗುರುವಾರ ಟ್ವೀಟ್ ಮೂಲಕ ಮಾಹಿತಿ ನೀಡಿದೆ. ಪ್ರಧಾನಿ ಕಾರ್ಯಾಲಯ ಸೇರಿ ಪ್ರಮುಖ ಕಚೇರಿಗಳ ಸಂಕೀರ್ಣದ ನಿರ್ಮಾಣ ಗುತ್ತಿಗೆಯನ್ನು ಎಲ್&ಟಿಗೆ ನೀಡಲಾಗಿದೆ. ಅಂದಾಜು ವೆಚ್ಚಕ್ಕಿಂತ ಶೇಕಡಾ 10.44ರಷ್ಟು ಕಡಿಮೆ ಮೊತ್ತಕ್ಕೆ, ಅಂದರೆ 1,189 ಕೋಟಿ ರೂ.ಗೆ ನವೆಂಬರ್ 15ರಂದು ಗುತ್ತಿಗೆ ನೀಡಲಾಗಿದೆ. ಎರಡು ವರ್ಷಗಳ ಒಳಗಾಗಿ ಕಾಮಗಾರಿ ಮುಕ್ತಾಯಗೊಳಿಸಬೇಕಿದೆ ಎಂದು ಟ್ವೀಟ್ನಲ್ಲಿ ಉಲ್ಲೇಖಿಸಲಾಗಿದೆ.
ಮುಂಬೈ: ಬಾಲಿವುಡ್‌ನ ಭಾಯಿಜಾನ್ ಸಲ್ಮಾನ್ ಖಾನ್ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…
ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…
ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…
ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…
ಮೈಸೂರು: ಬಡವರ ಮಕ್ಕಳೇ ಸರ್ಕಾರಿ ಶಾಲೆಗಳಲ್ಲಿ ಹೆಚ್ಚಾಗಿ ವ್ಯಾಸಂಗ ಮಾಡುವ ಕಾರಣ ಶಾಲೆಗಳ ಅಭಿವೃದ್ಧಿ ಶಿಕ್ಷಕರ ಮೇಲಿದೆ. ಕ್ಷೇತ್ರದಲ್ಲಿ ಬರುವ…
ಪಶ್ಚಿಮಘಟ್ಟ ಕುರಿತ ಕಸ್ತೂರಿ ರಂಗನ್ ವರದಿ ಬಗ್ಗೆ ಬಾಧ್ಯಸ್ಥರ ಸಭೆ ಬೆಂಗಳೂರು: ರಾಜ್ಯದ ವಿವಿಧ ಅರಣ್ಯ ಮತ್ತು ವನ್ಯಜೀವಿ ತಾಣಗಳ ಸುತ್ತ…