ಬೆಂಗಳೂರು : ಚಿತ್ರರಂಗದ ಹಲವು ನಟಿಮಣಿಯರನ್ನು ಕಾಡಿದ್ದ ಡೀಪ್ ಫೇಕ್ ಸಂಕಷ್ಟ ಇದೀಗ ಇನ್ಫೋಸಿಸ್ ಸಹ ಸಂಸ್ಥಾಪಕ ನಾರಾಯಣ ಮೂರ್ತಿಯವರಿಗೂ ಎದುರಾಗಿದೆ.
ನಾರಾಯಣ ಮೂರ್ತಿಯವರು ತಮ್ಮ ಹಾಗೂ ಇಲಾನ್ ಮಸ್ಕ್ ಅವರ ತಂಡಗಳು ವಿಶ್ವದ ಮೊದಲ ಕ್ವಾಂಟಮ್ ಕಂಪ್ಯೂಟರಿಂಗ್ ಸಾಫ್ಟ್ ವೇರ್ ಅಭಿವೃದ್ಧಿ ಪಡಿಸಿವೆ. ಕ್ವಾಂಟಮ್ ಎಐನಲ್ಲಿ ನೀವು ಮೊದಲ ದಿನವೇ 3000 ಡಾಲರ್ ವರೆಗೆ ಹಣ ಸಂಪಾದನೆ ಮಾಡಬಹುದು ಎಂದು ಹೇಳಿರುವ ಡೀಪ್ ಫೇಕ್ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ.
ವೈರಲ್ ಆಗಿರುವ ವಿಡಿಯೋಗಳನ್ನು ಡೀಪ್ ಫೇಕ್ ತಂತ್ರಜ್ಞಾನ ಬಳಸಿ ಎಡಿಟ್ ಮಾಡಲಾಗಿದೆ ಎಂದು ತಿಳಿದುಬಂದಿದೆ.
ನಟಿಮಣಿಯರನ್ನು ಟಾರ್ಗೆಟ್ ಮಾಡಿದ್ದ ಡೀಪ್ ಫೇಕ್ ತಂತ್ರಜ್ಞಾನ ಇದೀಗ ತಂತ್ರಜ್ಞಾನದ ಮುಖಂಡರನ್ನೇ ಟಾರ್ಗೆಟ್ ಮಾಡಿದೆ.
ಇದೀಗ ವೈರಲ್ ಆಗಿದ್ದ ನಾರಾಯಣಮೂರ್ತಿಯವರ ಡೀಪ್ ಫೇಕ್ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಿಂದ ಡಿಲಿಟ್ ಮಾಡಲಾಗಿದೆ.
ವೈರಲ್ ವಿಡಿಯೋದಲ್ಲಿ ಕ್ವಾಂಟಮ್ ಎಐಗೆ ಕೆಲಸಕ್ಕೆ ಸೇರಿ ಎಂದಿರುವ ನಾರಾಯಣ ಮೂರ್ತಿಯವರು ಇಲ್ಲಿ ಮೊದಲನೇ ದಿನವೇ 3000 ರೂ ವರೆಗೆ ಸಂಪಾದನೆ ಮಾಡಬಹುದಾಗಿದೆ ಎಂದಿದ್ದಾರೆ.
ಅಸಲಿಗೆ ನಾರಾಯಣ ಮೂರ್ತಿ ಅವರು ಬ್ಯುಸಿನೆಸ್ ಟುಡೆ ತಾಣಗಳೊಂದಿಗಿನ ಸಂದರ್ಶನದ ವಿಡಿಯೋಗಳನ್ನು ಬಳಸಿಕೊಂಡು ಈ ಫೇಕ್ ವಿಡಿಯೋಗಳನ್ನು ಎಡಿಟ್ ಮಾಡಲಾಗದೆ.
ನಂಜನಗೂಡು: ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆಯಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗಳು ರಕ್ಷಿಸಿ ಸುರಕ್ಷಿತ ಪ್ರದೇಶಕ್ಕೆ ಬಿಟ್ಟಿದ್ದಾರೆ. ಜಿಲ್ಲೆಯ ನಂಜನಗೂಡು…
ಮಂಡ್ಯ: ಸುಮಾರು 15 ತಿಂಗಳಿನಿಂದ ವೇತನ ಸಿಗದೇ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದ ಮಂಡ್ಯದ ಮೈಶುಗರ್ ಶಾಲೆಯ ಶಿಕ್ಷಕರ ಬಾಕಿ ವೇತನಕ್ಕಾಗಿ…
ಹಾಸನ: ಗ್ಯಾರಂಟಿಗೆ ಕೋಟಿಗಟ್ಟಲೇ ಹಣ ಖರ್ಚು ಮಾಡ್ತಿರೋದು ಸಮಾನತೆ ತರಲು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಕುರಿತು ಹಾಸನದಲ್ಲಿ…
ಬಳ್ಳಾರಿ: ಹೊಸಪೇಟೆ ಹೊರವಲಯದಲ್ಲಿರುವ ತುಂಗಭದ್ರಾ ಜಲಾಶಯದ ಕ್ರಸ್ಟ್ ಗೇಟ್ ಅಳವಡಿಕೆ ಕಾರ್ಯಕ್ಕೆ ಚಾಲನೆ ಸಿಕ್ಕಿದೆ. ಜಲಾಶಯದ ಮೇಲ್ಬಾಗದಲ್ಲಿ ಗೇಟ್ ಮುಂದೆ…
ಮೈಸೂರು: ಮದುವೆ ಆಗುವುದಾಗಿ ನಂಬಿಸಿ ಮಹಿಳಾ ವಕೀಲೆಯೊಬ್ಬರೊಂದಿಗೆ ದೈಹಿಕ ಸಂಪರ್ಕ ಬೆಳೆಸಿ ನಂತರ ಮೋಸ ಮಾಡಿರುವ ಆರೋಪದ ಹಿನ್ನೆಲೆಯಲ್ಲಿ ವಕೀಲ…
ಬೆಂಗಳೂರು: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ನೊಟೀಸ್ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಪ್ರತಿಕ್ರಿಯೆ…