ವಾಣಿಜ್ಯ

ಜನವರಿಯಲ್ಲಿ 1.55 ಲಕ್ಷ ಕೋಟಿ ರೂ. ದಾಟಿದ ಜಿಎಸ್‌ಟಿ ಸಂಗ್ರಹ

ಹೊಸದಿಲ್ಲಿ: ಜನವರಿ ತಿಂಗಳಲ್ಲಿ 1.55 ಲಕ್ಷ ಕೋಟಿ ರೂ. ಸರಕು ಮತ್ತು ಸೇವಾ ತೆರಿಗೆ (GST) ಸಂಗ್ರಹವಾಗಿದೆ ಎಂದು ಹಣಕಾಸು ಸಚಿವಾಲಯ ತಿಳಿಸಿದೆ. ಪ್ರಸಕ್ತ ಹಣಕಾಸು ವರ್ಷದಲ್ಲಿ ತಿಂಗಳೊಂದರಲ್ಲಿ ಸಂಗ್ರಹವಾದ ಎರಡನೇ ಅತಿಹೆಚ್ಚಿನ ಜಿಎಸ್ಟಿ ಸಂಗ್ರಹ ಇದಾಗಿದೆ. ಈ ಹಿಂದೆ 2022ರ ಏಪ್ರಿಲ್​​ನಲ್ಲಿ 1.68 ಲಕ್ಷ ಕೋಟಿ ರೂ. ಜಿಎಸ್​ಟಿ ಸಂಗ್ರಹವಾಗಿತ್ತು. ಜನವರಿ 31ರ ಸಂಜೆ 5 ಗಂಟೆ ವೇಳೆಗೆ ತಿಂಗಳ ಜಿಎಸ್​ಟಿ ಸಂಗ್ರಹ 1,55,922 ಕೋಟಿ ರೂ. ಆಗಿದೆ. ಈ ಪೈಕಿ 28,963 ಕೋಟಿ ರೂ. ಕೇಂದ್ರ ಜಿಎಸ್​​ಟಿ, 36,730 ಕೋಟಿ ರೂ. ರಾಜ್ಯ ಜಿಎಸ್​​ಟಿ, 79,599 ಕೋಟಿ ರೂ. ಐಜಿಎಸ್​ಟಿ (ಆಮದು ಸರಕುಗಳಿಂದ ಸಂಗ್ರಹಿಸಿದ 37,118 ಕೋಟಿ ರೂ. ಸೇರಿ) ಹಾಗೂ 10,630 ಕೋಟಿ ರೂ. ಸೆಸ್ (ಆಮದು ಸರಕುಗಳಿಂದ ಸಂಗ್ರಹಿಸಿರುವ 768 ಕೋಟಿ ರೂ. ಸೇರಿ) ಒಳಗೊಂಡಿದೆ ಎಂದು ಸಚಿವಾಲಯ ಮಾಹಿತಿ ನೀಡಿದೆ.

ಕಳೆದ ಹಣಕಾಸು ವರ್ಷದ ಜನವರಿ ವರೆಗಿನ ಅವಧಿಗೆ ಹೋಲಿಸಿದರೆ ಪ್ರಸಕ್ತ ಹಣಕಾಸು ವರ್ಷದಲ್ಲಿ 2023ರ ಜನವರಿ ವರೆಗೆ ಜಿಎಸ್​ಟಿ ಆದಾಯ ಶೇ 24ರಷ್ಟು ಹೆಚ್ಚಳವಾಗಿದೆ. ಪ್ರಸಕ್ತ ಹಣಕಾಸು ವರ್ಷದಲ್ಲಿ ಜಿಎಸ್​ಟಿ ಸಂಗ್ರಹ 1.50 ಲಕ್ಷ ಕೋಟಿ ದಾಟಿರುವುದು ಇದೇ ಮೂರನೇ ಬಾರಿ ಎಂದು ಸಚಿವಾಲಯ ಹೇಳಿದೆ.

‘ಕಳೆದ ಒಂದು ವರ್ಷದಲ್ಲಿ ತೆರಿಗೆ ಮೂಲಗಳನ್ನು ಹೆಚ್ಚಿಸಲು ಮತ್ತು ಸಹಕಾರ ಹೆಚ್ಚಿಸಲು ವಿವಿಧ ಕ್ರಮಗಳನ್ನು ಕೈಗೊಳ್ಳಲಾಗಿದೆ. ಜಿಎಸ್​ಟಿ ರಿಟರ್ನ್ಸ್ ಫೈಲ್ ಮಾಡುವವರ ಸಂಖ್ಯೆ ಗಣನೀಯವಾಗಿ ಹೆಚ್ಚಳವಾಗಿದೆ’ ಎಂದು ಸಚಿವಾಲಯ ಹೇಳಿದೆ.

2022ರ ಅಕ್ಟೋಬರ್ – ಡಿಸೆಂಬರ್ ತ್ರೈಮಾಸಿಕದಲ್ಲಿ ಒಟ್ಟು 2.42 ಕೋಟಿ ಜಿಎಸ್​ಟಿ ರಿಟರ್ನ್ಸ್ ಫೈಲ್ ಮಾಡಲಾಗಿದೆ. ಅದಕ್ಕೂ ಹಿಂದಿನ ವರ್ಷದ ಅಕ್ಟೋಬರ್ – ಡಿಸೆಂಬರ್ ತ್ರೈಮಾಸಿಕದಲ್ಲಿ 2.19 ಕೋಟಿ ಜಿಎಸ್​ಟಿ ರಿಟರ್ನ್ಸ್ ಫೈಲ್ ಮಾಡಲಾಗಿತ್ತು. ಇದು ತೆರಿಗೆ ಮೂಲಗಳನ್ನು ಹೆಚ್ಚಿಸಲು ಮತ್ತು ಸಹಕಾರ ಹೆಚ್ಚಿಸಲು ಕೈಗೊಂಡಿರುವ ಹಲವು ಕ್ರಮಗಳ ಪರಿಣಾಮವಾಗಿದೆ ಎಂದೂ ಸಚಿವಾಲಯ ತಿಳಿಸಿದೆ.

lokesh

Recent Posts

ಸಮಾಜ ಬದಲಾವಣೆಗೆ ಶಿಕ್ಷಣ ಅಗತ್ಯ : ಸಿಎಂ ಪ್ರತಿಪಾದನೆ

ಮೈಸೂರು : ಶಿಕ್ಷಣವಿಲ್ಲದಿದ್ದರೆ ಮನುಷ್ಯರಾಗಿ, ಸ್ವಾಭಿಮಾನಿಗಳಾಗಿ ಬದುಕಲು ಸಾಧ್ಯವಿಲ್ಲ. ಸಮಾಜದಲ್ಲಿ ಬದಲಾವಣೆ ತರಬೇಕಾದರೆ ವಿದ್ಯಾವಂತರಾಗಲೇಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.…

33 mins ago

ದಾಖಲೆಗಳು ಮುರಿಯಲೆಂದೇ ನಿರ್ಮಾಣವಾಗುತ್ತವೆ : ಸಿ.ಎಂ.ಸಿದ್ದರಾಮಯ್ಯ

ಮೈಸೂರು : ಮಾಜಿ ಸಿ.ಎಂ ದಿವಂಗತ ದೇವರಾಜ್ ಅರಸ್ ಅವರ ಮುಖ್ಯಮಂತ್ರಿಯ ಸುದೀರ್ಘ ಅವಧಿಯ ದಾಖಲೆ ಮುರಿದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ…

42 mins ago

ಹನೂರು: ಕಾಡಾನೆ ದಾಳಿಗೆ ಸಿಲುಕಿ ರೈತನ ಕಾಲು ಮುರಿತ

ಮಹಾದೇಶ್‌ ಎಂ ಗೌಡ ಹನೂರು: ತನ್ನ ಜಮೀನಿನಲ್ಲಿ ಬೆಳೆಯಲಾಗಿದ್ದ ಜೋಳದ ಫಸಲು ಕಾಯುತ್ತಿದ್ದ ರೈತನ ಮೇಲೆ ಕಾಡಾನೆ ದಾಳಿ ನಡೆಸಿದ…

4 hours ago

ಮೊದಲು ನಮ್ಮ ಕನ್ನಡಿಗರಿಗೆ ನಿವೇಶನ ಸಿಗಬೇಕು: ಬಿ.ವೈ.ವಿಜಯೇಂದ್ರ

ಬೆಂಗಳೂರು: ಯಾವುದೇ ಕಾರಣಕ್ಕೂ ರಾಜ್ಯದಲ್ಲಿ ನೆಲೆಸಿರುವ ಅಕ್ರಮ ವಲಸಿಗರಿಗೆ ಸರ್ಕಾರದ ವತಿಯಿಂದ ಮನೆ ನಿರ್ಮಾಣ ಮಾಡಿಕೊಡಲು ಅವಕಾಶ ಕೊಡುವುದಿಲ್ಲ. ಎಲ್ಲಾ…

4 hours ago

ಅನಧಿಕೃತವಾಗಿ ಮನೆ ನಿರ್ಮಾಣ ಆಗಿದ್ದು ನಿಜ: ಸಚಿವ ಕೃಷ್ಣಭೈರೇಗೌಡ

ಬೆಂಗಳೂರು: ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ ವಾಕ್ಸಮರಕ್ಕೆ ಕಾರಣವಾಗಿರುವ ನಗರದ ಕೋಗಿಲು ಲೇಔಟ್‍ನಲ್ಲಿ ವಲಸಿಗರು ಅನಧಿಕೃತವಾಗಿ ಮನೆ ನಿರ್ಮಾಣ…

4 hours ago

ಅರಣ್ಯ ಪ್ರದೇಶದ ಹೊರಗಡೆ ವನ್ಯಜೀವಿಗಳು ಕಂಡರೆ ಕೂಡಲೇ ಈ ಸಂಖ್ಯೆಗೆ ಕರೆ ಮಾಡಿ

ಬೆಂಗಳೂರು: ಅರಣ್ಯ ಪ್ರದೇಶದ ಹೊರಗೆ ವನ್ಯಜೀವಿಗಳು ಕಂಡ ಕೂಡಲೇ ಈ ಸಂಖ್ಯೆಗೆ ಕರೆ ಮಾಡಿ ಎಂದು ರಾಜ್ಯ ಸರ್ಕಾರ ಸಾರ್ವಜನಿಕರಿಗೆ…

4 hours ago