ಹೊಸದಿಲ್ಲಿ: ಜನವರಿ ತಿಂಗಳಲ್ಲಿ 1.55 ಲಕ್ಷ ಕೋಟಿ ರೂ. ಸರಕು ಮತ್ತು ಸೇವಾ ತೆರಿಗೆ (GST) ಸಂಗ್ರಹವಾಗಿದೆ ಎಂದು ಹಣಕಾಸು ಸಚಿವಾಲಯ ತಿಳಿಸಿದೆ. ಪ್ರಸಕ್ತ ಹಣಕಾಸು ವರ್ಷದಲ್ಲಿ ತಿಂಗಳೊಂದರಲ್ಲಿ ಸಂಗ್ರಹವಾದ ಎರಡನೇ ಅತಿಹೆಚ್ಚಿನ ಜಿಎಸ್ಟಿ ಸಂಗ್ರಹ ಇದಾಗಿದೆ. ಈ ಹಿಂದೆ 2022ರ ಏಪ್ರಿಲ್ನಲ್ಲಿ 1.68 ಲಕ್ಷ ಕೋಟಿ ರೂ. ಜಿಎಸ್ಟಿ ಸಂಗ್ರಹವಾಗಿತ್ತು. ಜನವರಿ 31ರ ಸಂಜೆ 5 ಗಂಟೆ ವೇಳೆಗೆ ತಿಂಗಳ ಜಿಎಸ್ಟಿ ಸಂಗ್ರಹ 1,55,922 ಕೋಟಿ ರೂ. ಆಗಿದೆ. ಈ ಪೈಕಿ 28,963 ಕೋಟಿ ರೂ. ಕೇಂದ್ರ ಜಿಎಸ್ಟಿ, 36,730 ಕೋಟಿ ರೂ. ರಾಜ್ಯ ಜಿಎಸ್ಟಿ, 79,599 ಕೋಟಿ ರೂ. ಐಜಿಎಸ್ಟಿ (ಆಮದು ಸರಕುಗಳಿಂದ ಸಂಗ್ರಹಿಸಿದ 37,118 ಕೋಟಿ ರೂ. ಸೇರಿ) ಹಾಗೂ 10,630 ಕೋಟಿ ರೂ. ಸೆಸ್ (ಆಮದು ಸರಕುಗಳಿಂದ ಸಂಗ್ರಹಿಸಿರುವ 768 ಕೋಟಿ ರೂ. ಸೇರಿ) ಒಳಗೊಂಡಿದೆ ಎಂದು ಸಚಿವಾಲಯ ಮಾಹಿತಿ ನೀಡಿದೆ.
ಕಳೆದ ಹಣಕಾಸು ವರ್ಷದ ಜನವರಿ ವರೆಗಿನ ಅವಧಿಗೆ ಹೋಲಿಸಿದರೆ ಪ್ರಸಕ್ತ ಹಣಕಾಸು ವರ್ಷದಲ್ಲಿ 2023ರ ಜನವರಿ ವರೆಗೆ ಜಿಎಸ್ಟಿ ಆದಾಯ ಶೇ 24ರಷ್ಟು ಹೆಚ್ಚಳವಾಗಿದೆ. ಪ್ರಸಕ್ತ ಹಣಕಾಸು ವರ್ಷದಲ್ಲಿ ಜಿಎಸ್ಟಿ ಸಂಗ್ರಹ 1.50 ಲಕ್ಷ ಕೋಟಿ ದಾಟಿರುವುದು ಇದೇ ಮೂರನೇ ಬಾರಿ ಎಂದು ಸಚಿವಾಲಯ ಹೇಳಿದೆ.
‘ಕಳೆದ ಒಂದು ವರ್ಷದಲ್ಲಿ ತೆರಿಗೆ ಮೂಲಗಳನ್ನು ಹೆಚ್ಚಿಸಲು ಮತ್ತು ಸಹಕಾರ ಹೆಚ್ಚಿಸಲು ವಿವಿಧ ಕ್ರಮಗಳನ್ನು ಕೈಗೊಳ್ಳಲಾಗಿದೆ. ಜಿಎಸ್ಟಿ ರಿಟರ್ನ್ಸ್ ಫೈಲ್ ಮಾಡುವವರ ಸಂಖ್ಯೆ ಗಣನೀಯವಾಗಿ ಹೆಚ್ಚಳವಾಗಿದೆ’ ಎಂದು ಸಚಿವಾಲಯ ಹೇಳಿದೆ.
2022ರ ಅಕ್ಟೋಬರ್ – ಡಿಸೆಂಬರ್ ತ್ರೈಮಾಸಿಕದಲ್ಲಿ ಒಟ್ಟು 2.42 ಕೋಟಿ ಜಿಎಸ್ಟಿ ರಿಟರ್ನ್ಸ್ ಫೈಲ್ ಮಾಡಲಾಗಿದೆ. ಅದಕ್ಕೂ ಹಿಂದಿನ ವರ್ಷದ ಅಕ್ಟೋಬರ್ – ಡಿಸೆಂಬರ್ ತ್ರೈಮಾಸಿಕದಲ್ಲಿ 2.19 ಕೋಟಿ ಜಿಎಸ್ಟಿ ರಿಟರ್ನ್ಸ್ ಫೈಲ್ ಮಾಡಲಾಗಿತ್ತು. ಇದು ತೆರಿಗೆ ಮೂಲಗಳನ್ನು ಹೆಚ್ಚಿಸಲು ಮತ್ತು ಸಹಕಾರ ಹೆಚ್ಚಿಸಲು ಕೈಗೊಂಡಿರುವ ಹಲವು ಕ್ರಮಗಳ ಪರಿಣಾಮವಾಗಿದೆ ಎಂದೂ ಸಚಿವಾಲಯ ತಿಳಿಸಿದೆ.
ಬೆಂಗಳೂರು: ಕೆಪಿಎಸ್‌ಸಿಯಲ್ಲಿ ಹಗರಣಗಳು ಹೆಚ್ಚಿವೆ. ಇದನ್ನು ಕಾನೂನು ಚೌಕಟ್ಟಿನಲ್ಲಿ ಮುಚ್ಚುವ ಬಗ್ಗೆ ತಜ್ಞರ ಜೊತೆ ಚರ್ಚೆ ಮಾಡುತ್ತಿದ್ದೇನೆ ಎಂದು ಸಿಎಂ…
ನಂಜನಗೂಡು: ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನ ಚುಂಚನಹಳ್ಳಿ ಗ್ರಾಮದ ಬಳಿ ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ ಚಿರತೆ ಸೆರೆಯಾಗಿದೆ. ಸುಮಾರು…
ಬೆಂಗಳೂರು: ಸರ್ಕಾರಿ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಮೊದಲ ಎರಡು ಚರಣಗಳನ್ನು ಮಾತ್ರ ಹಾಡುವಂತೆ ರಾಜ್ಯ ಸರ್ಕಾರ ಹೊರಡಿಸಿರುವ ಆದೇಶಕ್ಕೆ…
ಮದ್ದೂರು: ಮದ್ದೂರಿನಲ್ಲಿ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ನಿವೃತ್ತ ಹಾಸ್ಟೆಲ್…
ಮಂಡ್ಯ: ನಗರದ ಗಾಂಧಿನಗರದಲ್ಲಿ ವ್ಯಕ್ತಿಯೊಬ್ಬರನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ನಡೆದಿದೆ. ಗಾಂಧಿನಗರ ನಿವಾಸಿ 47 ವರ್ಷದ ಪುರುಷೋತ್ತಮ್…
ಮೈಸೂರು ನಗರದಲ್ಲಿ ಸ್ವಚ್ಛತಾ ಕಾರ್ಯ ನಿರ್ವಹಿಸುತ್ತಿರುವ ಸ್ವಚ್ಛತೆಯ ಜೀವನಾಡಿಗಳಾಗಿರುವ ಪೌರಕಾರ್ಮಿಕರಿಗೆ, ಮೈಸೂರು ಮಹಾನಗರ ಪಾಲಿಕೆ ವತಿಯಿಂದ ಮಣಿಪಾಲ್ ಆಸ್ಪತ್ರೆಯಲ್ಲಿ ಆಯೋಜಿಸಿದ್ದ…