ನವದೆಹಲಿ : ದೇಶದ ಅತ್ಯಂತ ಶ್ರೀಮಂತ ಉದ್ಯಮಿ ಮುಖೇಶ್ ಅಂಬಾನಿ ಈಗಾಗಲೇ ಮಾರುಕಟ್ಟೆಯಲ್ಲಿ ಕಡಿಮೆ ಬೆಲೆಯ ಎಲೆಕ್ಟ್ರಾನಿಕ್ ವಸ್ತುಗಳು ಹಾಗೂ ಇಂಟರ್ನೆಟ್ ನೀಡುವ ಮೂಲಕ ಗ್ರಾಹಕರನ್ನು ತನ್ನತ್ತ ಸೆಳೆದುಕೊಂಡಿದ್ದಾರೆ. ಇದೀಗ ಮಾರುಕಟ್ಟೆಗೆ ಅತ್ಯಂತ ಕಡಿಮೆ ಬೆಲೆಯಲ್ಲಿ ಲ್ಯಾಪ್‌ಟಾಪ್ ಬಿಡುಗಡೆ ಮಾಡಲು ಚಿಂತನೆ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ.
ಮುಖೇಶ್ ಅಂಬಾನಿ ಅವರು ವಾರ್ಷಿಕವಾಗಿ ಸುಮಾರು 70,000 ಕೋಟಿ ಆದಾಯದ ಅವಕಾಶವನ್ನು ಬೆನ್ನಟ್ಟುತ್ತಿದ್ದಾರೆ. ಇನ್ನು ಅದಕ್ಕೆ ಹತ್ತಿರವಾಗುವ ಸಲುವಾಗಿ ಭಾರತದಲ್ಲಿ ಅತೀ ಕಡಿಮೆ ಬೆಲೆಯಲ್ಲಿ ಲ್ಯಾಪ್‌ಟಾಪ್ ಅನ್ನು ಬಿಡುಗಡೆ ಮಾಡಲು ಚಿಂತನೆ ನಡೆಸುತ್ತಿದ್ದಾರೆ.
ಕೇವಲ 15.000 ಸಾವಿರ ರೂ.ಗೆ ರಿಲಯನ್ಸ್ ಕಂಪನಿಯ ಜಿಯೋ ಲ್ಯಾಪ್‌ಟಾಪ್ ಮಾರುಕಟ್ಟೆಯಲ್ಲಿ ಲಭ್ಯವಾಗಲಿದೆ.
ಮುಂಬರುವ ದಿನಗಳಲ್ಲಿ ಈ ಹೊಸ ಸಾಧನವನವನ್ನು ಪ್ರಾರಂಭಿಸಲು ಕಂಪನಿಯು ಪ್ರಸಿದ್ಧ ಲ್ಯಾಪ್‌ಟಾಪ್ ತಯಾರಕ ಕಂಪನಿಗಳಾದ HP,Acer,Lenovo ಜೋತೆ ಮಾತು ಕಥೆ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ.
ಜಿಯೋ ಕಂಪನಿ ತನ್ನ ಹೊಸ ಲ್ಯಾಪ್‌ಟಾಪ್ ಬಿಡುಗಡೆಯ ಕುರಿತಂತೆ ಅಧಿಕೃತವಾಗಿ ಈವರೆಗೆ ಯಾವುದೇ ವಿವರಗಳನ್ನು ನೀಡಿಲ್ಲ. ಸಧ್ಯ ಜಿಯೋ ಬುಕ್ ಬಿಡುಗಡೆ ಜೊತೆಗೆ ಈ ವಿಭಾಗವೂ ಕೂಡ ತೆಗೆದುಕೊಳ್ಳುವ ಉದ್ದೇಶ ಸ್ಪಷ್ಟವಾಗಿದೆ. ರಿಲಯನ್ಸ್ ಜಿಯೋ ಕಂಪನಿಯು ಲ್ಯಾಪ್‌ಟಾಪ್ ಖರೀದಿಯ ಜೊತೆಗೆ ಗ್ರಾಹಕರಿಗೆ 100 GB ಉಚಿತ ಕ್ಲೌಡ್ ಸ್ಟೋರೆಜ್ ನೀಡಲಿದೆ.
ಜಿಯೋ ಕಂಪನಿಯು ಭಾರತ ದೇಶದ ಅತಿ ದೊಡ್ಡ ಹಾಗೂ ಸುಪ್ರಸಿದ್ಧ ಮೊಬೈಲ್ ನೆಟ್ವರ್ಕ್ ಕಂಪನಿಯಾಗಿದೆ. ಜಿಯೋ ರಿಲಯನ್ಸ್ ಕಂಪನಿಯ ಒಂದು ಅಂಗ ಸಂಸ್ಥೆಯಾಗಿದೆ. ಇದು ದೇಶದ 22 ಟೆಲಿಕಾಂ ವಲಯಗಳಲ್ಲಿಯೂ ಕೂಡ ಉತ್ತಮ ಇಂಟರ್ನೆಟ್ ಸೇವೆ ಒದಗಿಸುತ್ತಿದೆ. ಜಿಯೋ ಕಂಪನಿಯೂ ದೇಶದಲ್ಲೇ ಅತಿ ವೇಗದ ಇಂಟರ್ನೆಟ್ ಪೂರೈಸುವ ನಂ.ಒನ್ ಕಂಪನಿ ಎಂಬ ಹೆಗ್ಗಳಿಕೆಗೂ ಕೂಡ ಪಾತ್ರವಾಗಿದೆ.
ಚಾಮರಾಜನಗರ: ಚಾ.ನಗರ-ನಂಜನಗೂಡು ಹೆದ್ದಾರಿಯಲ್ಲಿರುವ ಪಣ್ಯದಹುಂಡಿ ಬಳಿ ರೈಲ್ವೆ ಮೇಲ್ಸೇತುವೆ ನಿರ್ಮಾಣಕ್ಕೆ ಸ್ವಾಧಿನಪಡಿಸಿಕೊಂಡಿರುವ ಭೂಮಿಯ ದರ ನಿಗದಿ ಕಗ್ಗಂಟಿನ ವಿಚಾರ ಅಂತಿಮ…
ಮೈಸೂರು: ಪ್ರಸಿದ್ಧ ಯಾತ್ರಾ ಸ್ಥಳ ಚಾಮುಂಡಿ ಬೆಟ್ಟದ ಸಮಗ್ರ ಅಭಿವೃದ್ಧಿ ಕಾಮಗಾರಿಯು ಕೇಂದ್ರ ಸರ್ಕಾರದ ಪ್ರಸಾದ ಯೋಜನೆಯಡಿ ಜನವರಿ ಮೊದಲ…
ಗಿರೀಶ್ ಹುಣಸೂರು ಬಿಡಿ ಮೊಟ್ಟೆಗೆ ೭.೫೦ ರೂ.; ರಫ್ತು ಹೆಚ್ಚಳದಿಂದ ಭಾರೀ ಹೊಡೆತ ಮೈಸೂರು: ಮಾಗಿ ಚಳಿಗಾಲ ಆರಂಭ, ಚಂಡಮಾರುತದಿಂದ ಹವಾಮಾನ…
ಕೊಳ್ಳೇಗಾಲ: ಹಣ ದ್ವಿಗುಣಗೊಳಿಸಿಕೊಡುವುದಾಗಿ ಆಮಿಷ ಒಡ್ಡಿ, ಒಟ್ಟು ೨೮.೮೮ ಲಕ್ಷ ರೂ.ಗಳನ್ನು ವಂಚಿಸಿರುವ ಬಗ್ಗೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಮಮತಾ…
ಯಳಂದೂರು:ತಾಲ್ಲೂಕಿನ ಅಂಬಳೆ ಗ್ರಾಮದಲ್ಲಿರುವ ಸುವರ್ಣಾವತಿ ನದಿ ದಡಲ್ಲಿರುವ ಐತಿಹಾಸಿಕ ಚಾಮುಂಡೇಶ್ವರಿ ದೇಗುದಲ್ಲಿ ಗುರುವಾರ ರಾತ್ರಿ ಕಳ್ಳತನ ನಡೆದಿದ್ದು, ಲಕ್ಷಾಂತರ ರೂ.…