ವಾಣಿಜ್ಯ

ಡಿಸೆಂಬರ್‌ 4ಕ್ಕೆ ಬಿಡುಗಡೆಯಾಗುತ್ತಿದೆ ಒನ್‌ಪ್ಲಸ್‌ 12

ಮೊಬೈಲ್‌ ಪ್ರಿಯರು ಬಹುದಿನಗಳಿಂದ ಕಾಯುತ್ತಿದ್ದ ಬಹುನಿರೀಕ್ಷಿತ ಒನ್‌ಪ್ಲಸ್ 12 ಸ್ಮಾರ್ಟ್‌ ಫೋನ್‌ ಬಿಡುಗಡೆಗೆ ದಿನಾಂಕ ನಿಗಧಿಯಾಗಿದೆ. ಇದೇ ಡಿಸೆಂಬರ್‌ 4 ರಂದು ಕಂಪನಿಯು ತನ್ನ 10 ನೇ ವರ್ಷದ ವಾರ್ಷಿಕೋತ್ಸವವನ್ನು ಆಚರಿಸಿಕೊಳ್ಳುತ್ತಿದೆ. ಅದೇ ದಿನದಂದು ಒನ್‌ಪ್ಲಸ್ 12 ಸ್ಮಾರ್ಟ್‌ ಫೋನ್‌ ಅನ್ನೂ ಕೂಡ ಬಿಡುಗಡೆ ಮಾಡಲು ಕಂಪನಿ ಸಿದ್ಧತೆ ಮಾಡಿಕೊಂಡಿದೆ.

ಬಿಡುಗಡೆಗೂ ಮುನ್ನವೇ ಒನ್‌ಪ್ಲಸ್‌ 12 ನ ಕೆಲವು ಫೀಚರ್ಸ್ ಗಳು ಮೊಬೈಲ್‌ ಪ್ರಿಯರನ್ನು ಸೆಳೆಯುತ್ತಿವೆ. ಅಧಿಕೃತವಾಗಿ ಈ ಫೋನಿನ ಫೀಚರ್ಸ್‌ ನ ಬಗೆಗಿನ ಮಾಹಿತಿ ತಿಳಿದುಬಂದಿಲ್ಲವಾದರೂ ಕೆಲವು ಟಿಪ್‌ಸ್ಟರ್ ಗಳು ಈ ಫೋನಿನ ರಿವ್ಯೂ ನೀಡಿದ್ದಾರೆ.

ರಿವ್ಯೂ ಪ್ರಕಾರ ಈ ಮೊಬೈಲ್‌ ಪೇಲ್‌ ಗ್ರೀನ್‌, ರಾಕ್‌ ಬ್ಲ್ಯಾಕ್‌ ಮತ್ತು ವೈಟ್‌, ಮೂರು ಬಣ್ಣಗಳಲ್ಲಿ ಲಭ್ಯವಿರಲಿದ್ದು, ನಯವಾದ ವಿನ್ಯಾಸದೊಂದಿಗೆ ಟ್ರಿಪಲ್‌ ಕ್ಯಾಮೆರಾ ಸೆಟಪ್‌ ಅನ್ನು ಹೋಂದಿರಲಿದೆ, ಪೆರಿಸ್ಕೋಪ್‌ ಜೂಮ್‌ ಲೆನ್ಸ್‌ ಹೊಂದಿರುವ ಈ ಮೋಬೈಲ್‌ ನಲ್ಲಿ ಟೆಲಿಫೋಟೊ ಲೆನ್ಸ್‌ ಅಳವಡಿಸಲಾಗಿದೆ. ಇದರಿಂದ ಅತ್ಯುತ್ತಮವಾದ ಫೋಟೋಗಳನ್ನು ಸೆರೆಹಿಡಿಯಲು ಅನುಕೂಲವಾಗುತ್ತದೆ.

ಆರಂಭದಲ್ಲಿ ಈ ಒನ್‌ಪ್ಲಸ್ 12 ಸ್ಮಾರ್ಟ್‌ ಫೋನ್‌ ಚೀನಾದಲ್ಲಿ ಬಿಡುಗಡೆಯಾಗಲಿದೆ. ನಂತರ ಜನವರಿಯ ಬಳಿಕ ಗ್ಲೋಬಲ್‌ ಮಾರ್ಕೆಟ್‌ ಗೆ ಲಗ್ಗೆ ಇಡಲಿದೆ.

ಕಳೆದ ವರ್ಷ ಭಾರತದಲ್ಲಿ ಒನ್‌ಪ್ಲಸ್ 11 ಸ್ಮಾರ್ಟ್‌ ಫೋನ್‌ ಅನ್ನು ಬಿಡುಗಡೆ ಮಾಡಲಾಗಿತ್ತು. ಇದೀಗ ಕಂಪನಿಯು ಒನ್‌ಪ್ಲಸ್ 12 ಬಿಡುಗಡೆಗೆ ಸಜ್ಜಾಗಿದ್ದು, ಭಾರತದಲ್ಲಿ ಯಾವಾಗ ಬಿಡುಗಡೆಯಾಗಲಿದೆ ಎಂಬುದು ಇನ್ನೂ ಕೂಡ ತಿಳಿದುಬಂದಿಲ್ಲ.

lokesh

Share
Published by
lokesh

Recent Posts

ಚಿರತೆ ಸೆರೆ | ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

ಗುಂಡ್ಲುಪೇಟೆ : ತಾಲ್ಲೂಕಿನ ಬರಗಿ ಗ್ರಾಮದ ಜಮೀನುಗಳಲ್ಲಿ ಜಾನುವಾರುಗಳ ಮೇಲೆ ದಾಳಿ ನಡೆಸಿ ಕೊಂದುಹಾಕಿದ್ದ ವಿಚಾರವಾಗಿ ಅರಣ್ಯ ಇಲಾಖೆ ಚಿರತೆ…

37 mins ago

ಮೈಸೂರಲ್ಲಿ ಡ್ರಗ್ಸ್‌ ಉತ್ಪಾದನೆ ಶಂಕೆ : ಓರ್ವನ ಬಂಧನ

ಮೈಸೂರು : ಬುಧವಾರವಷ್ಟೇ ಹೆಬ್ಬಾಳ್‌ನಲ್ಲಿ ಶೆಡ್‌ವೊಂದರ ಮೇಲೆ ದಾಳಿ ನಡೆಸಿದ್ದ ಎನ್‌ಸಿಬಿ ಪೊಲೀಸರು, ಮಾದಕ ವಸ್ತು ಮಾರಾಟ ಆರೋಪ ಪ್ರಕರಣದಲ್ಲಿ…

52 mins ago

ತೇಗದ ಮರ ಅಕ್ರಮ ಕಟಾವು : ಓರ್ವ ಬಂಧನ

ಹನೂರು : ತಾಲ್ಲೂಕಿನ ಬಿ.ಆರ್.ಟಿ ಹುಲಿ ಸಂರಕ್ಷಿತ ಪ್ರದೇಶದ ಬೈಲೂರು ವನ್ಯಜೀವಿ ವಲಯ ವ್ಯಾಪ್ತಿಯಲ್ಲಿ ಅಕ್ರಮವಾಗಿ ತೇಗದ ಮರಗಳನ್ನು ಕಟಾವು…

1 hour ago

ಮೈಸೂರು ವಿ.ವಿ | ಯುಜಿಸಿ ಉದ್ದೇಶಿತ ಹೊಸ ನಿಯಾಮವಳಿ ಜಾರಿಗೆ ಒತ್ತಾಯ

ಮೈಸೂರು : ವಿಶ್ವವಿದ್ಯಾನಿಲಯಗಳ ಕ್ಯಾಂಪಸ್‌ನಲ್ಲಿ ಜಾತಿ, ಧರ್ಮ,ಲಿಂಗ ಆಧಾರಿತ ಶೋಷಣೆಯನ್ನು ತಡೆಗಟ್ಟಲು ಯುಜಿಸಿಯ ಉದ್ದೇಶಿತ ಹೊಸ ನಿಯಮಾವಳಿಗಳ ಜಾರಿಗೆ ಒತ್ತಾಯಿಸಿ…

2 hours ago

ಸರ್ಕಾರಿ ನೌಕರರಿಗೆ ತಿಂಗಳಿಗೊಮ್ಮೆ ಖಾದಿ ಧಿರಿಸು ಕಡ್ಡಾಯ

ಬೆಂಗಳೂರು : ರಾಜ್ಯ ಸರ್ಕಾರಿ ನೌಕರರಿಗೆ ಖಾದಿ ಬಟ್ಟೆ ಬಳಕೆ ಕಡ್ಡಾಯಗೊಳಿಸಲಾಗಿದೆ. ಪ್ರತಿ ತಿಂಗಳ ಮೊದಲ ಶನಿವಾರ ಖಾದಿ ಬಟ್ಟೆ…

3 hours ago

ಕ್ಯಾಂಪಸ್‌ಗಳಲ್ಲಿ ಜಾತಿ ತಾರತಮ್ಯ : ಯುಜಿಸಿ ನಿಯಮಾವಳಿಗೆ ʻಸುಪ್ರೀಂʼ ತಡೆ

ಹೊಸದಿಲ್ಲಿ : ಮಹತ್ವದ ಬೆಳವಣಿಗೆಯಲ್ಲಿ ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ಹೊಸ ನಿಯಮಗಳಿಗೆ ಸರ್ವೋಚ್ಚ ನ್ಯಾಯಾಲಯ ತಡೆ ನೀಡಿದೆ. ವಿಶ್ವವಿದ್ಯಾಲಯ…

3 hours ago