Mysore
18
broken clouds

Social Media

ಭಾನುವಾರ, 07 ಡಿಸೆಂಬರ್ 2025
Light
Dark

ಮುಂದಿನ ತಿಂಗಳು ನಡೆಯಬೇಕಿದ್ದ ಬ್ಯಾಂಕ್‌ ನೌಕರರ ಮುಷ್ಕರ ಮುಂದೂಡಿಕೆ

 

ನವದೆಹಲಿ : ವಿವಿಧ ಬೇಡಿಕೆಗಳನ್ನು ಈಡೇರುವಂತೆ ಒತ್ತಾಯಿಸಿ ಮುಂದಿನ ತಿಂಗಳು ( ಡಿಸೆಂಬರ್‌ 24 ) ಹಾಗೂ ಜನವರಿ 2 ರಿಂದ 6 ರವರರೆಗೆ ನಡೆಸಲು ತೀರ್ಮಾನಿಸಿದ್ದ ಅಖಿಲ ಭಾರತ ಬ್ಯಾಂಕ್‌ ನೌಕರರ ಮುಷ್ಕರವನ್ನು ಸದ್ಯಕ್ಕೆ ಮುಂದೂಡಲಾಗಿದೆ ಎಂದು ಸಂಘವು ತಿಳಿಸಿದೆ.

ನಮ್ಮ ಬೇಡಿಕೆಗಳಿಗೆ ಭಾರತೀಯ ಬ್ಯಾಂಕ್‌ ಸಂಘಟನೆಯು ಸ್ಪಂದಿಸಿದೆ. ಹಾಗಾಗಿ ಸದ್ಯಕ್ಕೆ ಈ ಮುಷ್ಕರ ನಡೆಸುವುದಿಲ್ಲ ಎಂದು ಅಖಿಲ ಭಾರತ ಬ್ಯಾಂಕ್‌ ನೌಕರರ ಸಂಘವು ಮಾಹಿತಿ ನೀಡಿದೆ.

ಜನವರಿ 18 ರೊಳಗೆ ನೌಕರರ ಬೇಡಿಕೆಗಳನ್ನು ಈಡೇರಿಸದೇ ಹೋದಲ್ಲಿ ಜನವರಿ 19 ಹಾಗೂ 20 ರಂದು ಅಖಿಲ ಭಾರತ ಮಟ್ಟದಲ್ಲಿ ಮುಷ್ಕರ ನಡೆಸಲಾಗುತ್ತದೆ ಎಂದು ಅಖಿಲ ಭಾರತ ಬ್ಯಾಂಕ್‌ ನೌಕರರ ಸಂಘವು ಎಚ್ಚರಿಕೆ ನೀಡಿದೆ.

ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾ, ಸೆಂಟ್ರಲ್‌ ಬ್ಯಾಂಕ್‌ ಆಫ್‌ ಇಂಡಿಯಾ, ( ಎಸ್‌ಬಿಐ ) ಕೆನರಾ ಬ್ಯಾಂಕ್‌, ಬ್ಯಾಂಕ್‌ ಆಫ್‌ ಇಂಡಿಯಾ, ಬ್ಯಾಂಕ್‌ ಆಫ್‌ ಬರೋಡಾ, ಪಂಜಾಬ್‌ ಮತ್ತು ಸಿಂಧ್‌ ಬ್ಯಾಂಕ್‌, ಪಂಜಾಬ್‌ ನ್ಯಾಷನಲ್‌ ಬ್ಯಾಂಕ್‌, ( ಪಿಎನ್‌ ಬಿ) ಯೂನಿಯನ್‌ ಬ್ಯಾಂಕ್‌ ಆಫ್‌ ಇಂಡಿಯಾ ಹಾಗೂ ಬ್ಯಾಂಕ್‌ ಆಫ್‌ ಮಹಾರಾಷ್ಟ್ರ ಸೇರದಂತೆ ಇನ್ನೂ ಹಲವಾರು ಬ್ಯಾಂಕ್‌ ನ ನೌಕರರು ಜನವರಿ 18 ರಂದು ನಡೆಸಲು ತೀರ್ಮಾನಿಸಿರುವ ಮುಷ್ಕರದಲ್ಲಿ ಭಾಗಿಯಾಗಲಿದ್ದಾರೆ.

ಬ್ಯಾಂಕ್‌ ಗಳಲ್ಲಿ ಖಾಯಂ ಉದ್ಯೋಗಗಳ ಬದಲಿಗೆ ಹೊರಗುತ್ತಿಗೆ ಪದ್ದತಿಯನ್ನು ಅನುಸರಿಸಲಾಗುತ್ತಿದೆ. ಸರಿಯಾಗಿ ನೇಮಕಾತಿಗಳು ಆಗುತ್ತಿಲ್ಲ. ಅಷ್ಟೇ ಅಲ್ಲದೇ ಬ್ಯಾಂಕ್‌ ಗಳಲ್ಲಿ ಹುದ್ದೆಗಳನ್ನು ಕಡಿತಗೊಳಿಸಲಾಗಿದೆ. ಇದರಿಂದ ನೌಕರರ ಮೇಲೆ ಒತ್ತಡ ಹೆಚ್ಚಾಗಿದೆ ಎಂದು ಆರೋಪಿಸಿ ಬ್ಯಾಂಕ್‌ ನೌಕರರು ಮುಷ್ಕರಕ್ಕೆ ಕರೆ ನೀಡಿದ್ದಾರೆ ಎಂದು ಅಖಿಲ ಭಾರತ ಬ್ಯಾಂಕ್‌ ನೌಕರರ ಸಂಘದ ಪ್ರಧಾನ ಕಾರ್ಯದರ್ಶಿ ವೆಂಕಟಾಚಲಂ ತಿಳಿಸಿದ್ದಾರೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!