ಮುಂಬೈ: ಕಳೆದ ಕೆಲವು ದಿನಗಳಿಂದ ಸತತ ಕುಸಿತ ಕಂಡಿದ್ದ ರೂಪಾಯಿ ಮೌಲ್ಯ ಮಂಗಳವಾರ ತುಸು ವೃದ್ಧಿಯಾಗಿದ್ದು ಭರವಸೆ ಮೂಡಿಸಿದೆ. ದೇಶೀಯ ಷೇರುಮಾರುಕಟ್ಟೆಯಲ್ಲಿ ಭರವಸೆಯ ವಹಿವಾಟು ದಾಲಾಗಿರುವುದು ರೂಪಾಯಿ ಮೌಲ್ಯ ವೃದ್ಧಿಗೆ ಪೂರಕವಾಗಿದೆ. ವಿದೇಶಿ ವಿನಿಮಯ ಮಾರುಕಟ್ಟೆಯಲ್ಲಿ 82.71ರಲ್ಲಿ ವಹಿವಾಟು ಆರಂಭಿಸಿದ್ದ ರೂಪಾಯಿ, ಬೆಳಿಗ್ಗೆ 10 ಗಂಟೆ ವೇಳೆಗೆ 26 ಪೈಸೆ ವೃದ್ಧಿಯಾಗಿ 82.62 ರಲ್ಲಿ ವಹಿವಾಟು ನಡೆಸಿತು.
ಈ ಹಿಂದಿನ ವಹಿವಾಟಿನ ಅವಧಿಯಲ್ಲಿ ಶುಕ್ರವಾರ 9 ಪೈಸೆ ಕುಸಿತ ದಾಖಲಿಸಿ ಡಾಲರ್ ವಿರುದ್ಧ 82.88 ರಲ್ಲಿ ವಹಿವಾಟು ಮುಗಿಸಿತ್ತು. ಸೋಮವಾರ ದೀಪಾವಳಿ ಪ್ರಯುಕ್ತ ವಿದೇಶಿ ವಿನಿಮಯ ಮಾರುಕಟ್ಟೆ ಕಾರ್ಯನಿರ್ವಹಿಸಿರಲಿಲ್ಲ.
ಕಳೆದ ಕೆಲವು ದಿನಗಳಿಂದ ಪ್ರಮುಖ ಆರು ಕರೆನ್ಸಿಗಳ ಎದುರು ವೃದ್ಧಿಯಾಗುತ್ತಾ ಸಾಗಿದ್ದ ಡಾಲರ್ ಮೌಲ್ಯ ಇಂದು ಶೇಕಡಾ 0.12ರಷ್ಟು ಕುಸಿದು 111.85ರಲ್ಲಿ ವಹಿವಾಟು ನಡೆಸಿದೆ. ಬ್ರೆಂಟ್ ಕಚ್ಚಾ ತೈಲ ಬೆಲೆ ಶೇಕಡಾ 0.28 ಏರಿಕೆಯಾಗಿ ಬ್ಯಾರೆಲ್ಗೆ 93.52 ಡಾಲರ್ ಆಗಿದೆ.
ಚೆನ್ನೈ : ತಮಿಳುನಾಡು ರಾಜಕಾರಣದಲ್ಲಿ ತಮ್ಮದೇ ಆದ ಕ್ರೇಜ್ ಸೃಷ್ಟಿಸಿಕೊಂಡಿರುವ ಟಿವಿಕೆ ಪಕ್ಷದ ಅಧ್ಯಕ್ಷ, ನಟ ʼದಳಪತಿʼ ವಿಜಯ್ ಅವರನ್ನು…
ಮೈಸೂರು : ಜನರು ವಿಪರೀತ ಸೆಕೆಯಿಂದಾಗಿ ತತ್ತರಿಸಿ ಹೋಗಿರುವ ನಡುವೆ ಕೆಲ ಜಿಲ್ಲೆಗಳಲ್ಲಿ ಇಂದು(ಮಾರ್ಚ್.15) ಸಂಜೆ ಅಕಾಲಿಕವಾಗಿ ಮಳೆ ಸುರಿದು…
ಮಂಡ್ಯ : ಮಂಡ್ಯ ವಿಧಾನಸಭಾ ಕ್ಷೇತ್ರ ಅಭಿವೃದ್ಧಿಗೆ ಸಮಗ್ರ ಯೋಜನೆ ರೂಪಿಸಲಾಗಿದ್ದು, ಬಸರಾಳು ಭಾಗದ ಹೇಮಾವತಿ ನಾಲೆ ಅಭಿವೃದ್ಧಿಗೆ 350…
ಮಂಡ್ಯ : ನಾನು ಯಾವಾಗ ಮಾತನಾಡಿದರೂ ವಿವಾದ ಆಗುತ್ತೆ. ನನ್ನ ಮಾತಿನಿಂದ ನೋವಾಗಿದ್ದರೆ, ಡಾ.ನಿರ್ಮಲಾನಂದನಾಥ ಸ್ವಾಮೀಜಿ ಅವರ ಕ್ಷಮೆ ಯಾಚಿಸುತ್ತೇನೆ…
ಎಚ್.ಡಿ.ಕೋಟೆ : ಎರಡು ಬೈಕುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಸಾವಿಗೀಡಾಗಿರುವ ಘಟನೆ ತಾಲ್ಲೂಕಿನಲ್ಲಿ ನಡೆದಿದೆ. ತಾಲ್ಲೂಕಿನ ಹೆರಿಗೆ…
ಚಿತ್ರದುರ್ಗ : ಚಳ್ಳಕೆರೆ ಸಮೀಪದ ಹೆಗ್ಗೆರೆ ಗೇಟ್ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಪೊಲೀಸ್ ಅಧಿಕಾರಿಗಳು ಮೃತಪಟ್ಟಿದ್ದಾರೆ. ಇಬ್ಬರು…