ವಾಣಿಜ್ಯ

ಡಾಲರ್‌ ಎದುರು 26 ಪೈಸೆ ವೃದ್ಧಿಯಾದ ರೂಪಾಯಿ ಮೌಲ್ಯ

ಮುಂಬೈ: ಕಳೆದ ಕೆಲವು ದಿನಗಳಿಂದ ಸತತ ಕುಸಿತ ಕಂಡಿದ್ದ ರೂಪಾಯಿ ಮೌಲ್ಯ ಮಂಗಳವಾರ ತುಸು ವೃದ್ಧಿಯಾಗಿದ್ದು ಭರವಸೆ ಮೂಡಿಸಿದೆ. ದೇಶೀಯ ಷೇರುಮಾರುಕಟ್ಟೆಯಲ್ಲಿ ಭರವಸೆಯ ವಹಿವಾಟು ದಾಲಾಗಿರುವುದು ರೂಪಾಯಿ ಮೌಲ್ಯ ವೃದ್ಧಿಗೆ ಪೂರಕವಾಗಿದೆ. ವಿದೇಶಿ ವಿನಿಮಯ ಮಾರುಕಟ್ಟೆಯಲ್ಲಿ 82.71ರಲ್ಲಿ ವಹಿವಾಟು ಆರಂಭಿಸಿದ್ದ ರೂಪಾಯಿ, ಬೆಳಿಗ್ಗೆ 10 ಗಂಟೆ ವೇಳೆಗೆ 26 ಪೈಸೆ ವೃದ್ಧಿಯಾಗಿ 82.62 ರಲ್ಲಿ ವಹಿವಾಟು ನಡೆಸಿತು.

ಈ ಹಿಂದಿನ ವಹಿವಾಟಿನ ಅವಧಿಯಲ್ಲಿ ಶುಕ್ರವಾರ 9 ಪೈಸೆ ಕುಸಿತ ದಾಖಲಿಸಿ ಡಾಲರ್ ವಿರುದ್ಧ 82.88 ರಲ್ಲಿ ವಹಿವಾಟು ಮುಗಿಸಿತ್ತು. ಸೋಮವಾರ ದೀಪಾವಳಿ ಪ್ರಯುಕ್ತ ವಿದೇಶಿ ವಿನಿಮಯ ಮಾರುಕಟ್ಟೆ ಕಾರ್ಯನಿರ್ವಹಿಸಿರಲಿಲ್ಲ.

ಕಳೆದ ಕೆಲವು ದಿನಗಳಿಂದ ಪ್ರಮುಖ ಆರು ಕರೆನ್ಸಿಗಳ ಎದುರು ವೃದ್ಧಿಯಾಗುತ್ತಾ ಸಾಗಿದ್ದ ಡಾಲರ್ ಮೌಲ್ಯ ಇಂದು ಶೇಕಡಾ 0.12ರಷ್ಟು ಕುಸಿದು 111.85ರಲ್ಲಿ ವಹಿವಾಟು ನಡೆಸಿದೆ. ಬ್ರೆಂಟ್ ಕಚ್ಚಾ ತೈಲ ಬೆಲೆ ಶೇಕಡಾ 0.28 ಏರಿಕೆಯಾಗಿ ಬ್ಯಾರೆಲ್​ಗೆ 93.52 ಡಾಲರ್ ಆಗಿದೆ.

andolana

Share
Published by
andolana

Recent Posts

ಓದುಗರ ಪತ್ರ: ಸಾಧಕರಿಗೆ ಸಂದ ಗೌರವ

ಮೈಸೂರು ವಿಶ್ವವಿದ್ಯಾನಿಲಯಕ್ಕೆ ರಾಷ್ಟ್ರಕವಿ ಕುವೆಂಪು ಅವರು ನೀಡಿರುವ ಅಪಾರ ಕೊಡುಗೆಯ ಸ್ಮರಣಾರ್ಥ ಹಾಗೂ ಅವರ ಪರಿಕಲ್ಪನೆಯ ಮಾನಸಗಂಗೋತ್ರಿಯಲ್ಲಿ ಇರುವ ಬಯಲು…

2 hours ago

ಓದುಗರ ಪತ್ರ: ನದಿಗಳ ಜೋಡಣೆಗೆ ಕೇಂದ್ರ ಸರ್ಕಾರ ಮುಂದಾಗಲಿ

ಕಾವೇರಿ ನದಿ ನೀರಿನ ಹಂಚಿಕೆಯ ವಿಷಯದಲ್ಲಿ ತಮಿಳುನಾಡು ಸರ್ಕಾರವು ಪದೇ ಪದೇ ಕರ್ನಾಟಕದ ಮೇಲೆ ಒತ್ತಡ ಹೇರುವುದು ಹಾಗೂ ಇದರಿಂದಾಗಿ…

2 hours ago

ಓದುಗರ ಪತ್ರ: ಡಿಜಿಟಲ್ ಲಗೇಜ್ ಲಾಕರ್ ಎಲ್ಲೆಡೆ ವಿಸ್ತರಿಸಲಿ

ರಾಜ್ಯದ ಪ್ರಮುಖ ಬಸ್ ನಿಲ್ದಾಣಗಳಲ್ಲಿ ಅತ್ಯಾಧುನಿಕ ಡಿಜಿಟಲ್ ಲಗೇಜ್ ಲಾಕರ್ ವ್ಯವಸ್ಥೆ ಆರಂಭಿಸಿರುವುದು ಶ್ಲಾಘನೀಯ ಹೆಜ್ಜೆಯಾಗಿದೆ. ಪ್ರತಿದಿನ ರಾಜದಾದ್ಯಂತ ಹೆಚ್ಚಿನ…

3 hours ago

ಮಗನ ನೆನಪಲ್ಲಿ ಪೋಷಕರ ಮಾದರಿ ಕಾರ್ಯ

ಪ್ರೊ. ಬಿ. ಜಯಪ್ರಕಾಶಗೌಡ, ಅಧ್ಯಕ್ಷರು, ಕರ್ನಾಟಕ ಸಂಘ, ಮಂಡ್ಯ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ನಗದು ಪಶಸ್ತಿ ಪ್ರೋತ್ಸಾಹ ಮಂಡ್ಯದ ಕರ್ನಾಟಕ…

3 hours ago

ಭತ್ತದ ಬೆಳೆಗೆ ಎಲೆ ಸುರುಳಿ-ಬೆಂಕಿ ರೋಗದ ಬಾಧೆ

ಸಿಂಗಿ ಸತೀಶ್ ತಾಕುಗಳನ್ನು ಪರಿಶೀಲಿಸಿದ ಕೃಷಿ ವಿಜ್ಞಾನಗಳು; ಮುನ್ನೆಚ್ಚರಿಕೆ ವಹಿಸಲು ಗೋಣಿಕೊಪ್ಪ ಕೃಷಿ ವಿಜ್ಞಾನ ಕೇಂದ್ರ ಸಲಹೆ  ಗೋಣಿಕೊಪ್ಪ: ಕೊಡಗಿನಲ್ಲಿ ಭತ್ತ…

3 hours ago

ಸಕ್ಕರೆ ನಾಡಿನಲ್ಲಿ ಬರದಿಂದ ಕಂಗಾಲಾದ ರೈತರು

ಹೇಮಂತ್‌ಕುಮಾರ್ ಮಂಡ್ಯ ಜಿಲ್ಲೆಯಲ್ಲಿ ೪೮,೫೯೧ ಹೆ. ಬೆಳೆ ಹಾನಿ ೫೪.೫೩ ಕೋಟಿ ರೂ. ನಷ್ಟದ ಅಂದಾಜು ಮಂಡ್ಯ: ಜಿಲ್ಲೆಯಲ್ಲಿ ಕಳೆದ…

3 hours ago