ಎಲೆಕ್ಟ್ರಾನಿಕ್ ದೈತ್ಯ ಸ್ಯಾಮ್‌ಸಂಗ್ ಕಂಪನಿಯು ವಿಶ್ವದಲ್ಲಿಯೇ ಮೊದಲ ಬಾರಿಗೆ ಕೃತಕ ಬುದ್ದಿಮತ್ತೆ ಲ್ಯಾಪ್‌ಟಾಪ್ ಅನ್ನು ಪರಿಚಯಿಸಲಿದೆ.
ಈ ಕೃತಕ ಬುದ್ದಿಮತ್ತೆ ಲ್ಯಾಪ್‌ಟಾಪ್ ಶೀಘ್ರದಲ್ಲಿಯೇ ಗ್ಯಾಲಕ್ಸಿ ಬುಕ್ 4 ಹೆಸರಿನಲ್ಲಿ ಮಾರುಕಟ್ಟೆಗೆ ಲಗ್ಗೆ ಇಡಲಿದೆ.
ಸ್ಯಾಮ್‌ಸಂಗ್ ಕಂಪನಿಯು ಗ್ಯಾಲಕ್ಸಿ ಬುಕ್ 4 ಲ್ಯಾಪ್‌ಟಾಪ್ ಅನ್ನು ಇದೇ ಡಿಸೆಂಬರ್ 15 ರಂದು ವಿಶ್ವ ಮಾರುಕಟ್ಟೆಯಲ್ಲಿ ಬಿಡುಗಡೆ ಮಾಡಲಿದೆ. ಆದರೆ ಭಾರತೀಯ ಮಾರುಕಟ್ಟೆಯಲ್ಲಿ ಯಾವಾಗ ಬಿಡುಗಡೆಯಾಗಲಿದೆ ಎಂಬುದರ ಕುರಿತಾದ ಯಾವುದೇ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ.
ಈ ಗ್ಯಾಲಕ್ಸಿ ಬುಕ್ 4 ಲ್ಯಾಪ್‌ಟಾಪ್ ಇಂಟೆಲ್ ಕೋರ್ ಅಲ್ಟ್ರಾ 7155H ಚಿಪ್‌ಸೆಟ್ ಪ್ರೊಸೆಸರ್ ಹೊಂದಿದೆ. ಇದು ಅತ್ಯಂತ ವೇಗದ ಕಾರ್ಯಕ್ಷಮತೆಯೊಂದಿಗೆ ಕಾರ್ಯ ನಿರ್ವಹಿಸುತ್ತದೆ. ಈ ಲ್ಯಾಪ್‌ಟಾಪ್ ನಲ್ಲಿ ಇಂಟರ್ನೆಟ್ ಸಂಪರ್ಕ ಇಲ್ಲದೇ ಅನೇಕ ಕೆಲಸಗಳನ್ನು ಮಾಡಬಹುದಾಗಿದೆ.
ಇದು ಸ್ಯಾಮ್‌ಸಂಗ್ ಗೊಸ್ ಎಂಬ ಕೃತಕ ಬುದ್ದಿಮತ್ತೆಯಿಂದ ಕಾರ್ಯನಿರ್ವಹಿಸಲಿದೆ. ಇದರಲ್ಲಿನ ಸಿಪಿಯುನಲ್ಲಿ ಸಂಸ್ಕರಣಾ ಘಟಕಗಳನ್ನು ಸ್ಥಾಪಿಸಲಾಗಿದೆ. ಇದರ ಸಹಾಯದಿಂದ ಎಐ ವೇಗವಾಗಿ ಕೆಲಸ ನಿರ್ವಹಿಸುತ್ತದೆ.
ಈ ಗ್ಯಾಲಕ್ಸಿ ಬುಕ್ 4 ಲ್ಯಾಪ್‌ಟಾಪ್ 32 GB ರ್ಯಾಮ್ ಹಾಗೂ 1T B ವರೆಗೆ ಆನ್ ಬೋರ್ಡ್ ಸಂಗ್ರಹಣೆಯನ್ನು ಹೊಂದಿರುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.
ಮೈಸೂರು: ಮೊದಲ ಬಾರಿ ಗೆದ್ದವರು ಸಚಿವ ಸ್ಥಾನ ಕೇಳುವುದರಲ್ಲಿ ತಪ್ಪಿಲ್ಲ ಎಂದು ಶಾಸಕ ಕೆ.ಹರೀಶ್ ಗೌಡ ಹೇಳಿದ್ದಾರೆ. ಈ ಕುರಿತು…
ಮೈಸೂರು: ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸುವಲ್ಲಿ ವಿಫಲರಾಗಿದ್ದೇವೆ ಎಂದು ಶಾಸಕ ತನ್ವೀರ್ ಸೇಠ್ ಹೇಳಿದ್ದಾರೆ. ಈ ಕುರಿತು ಮಾತನಾಡಿದ ಅವರು, ಗ್ಯಾರಂಟಿ…
ಮೈಸೂರು: ಅಧಿಕಾರ ಹಸ್ತಾಂತರ ವಿಚಾರದಲ್ಲಿ ರಾಜ್ಯದಲ್ಲಿ ಗೊಂದಲವಿದೆ ಎಂದು ಶಾಸಕ ತನ್ವೀರ್ ಸೇಠ್ ಹೇಳಿದ್ದಾರೆ. ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ…
ಯಾದಗಿರಿ: ಪೋಕ್ಸೋ ಪ್ರಕರಣ ದಾಖಲಾಗುತ್ತಿದ್ದಂತೆ ನಾಪತ್ತೆಯಾಗಿರುವ ಸ್ವಯಂ ಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ಅಜ್ಞಾತ ಸ್ಥಳದಿಂದ ವಿಡಿಯೋ ಹೇಳಿಕೆ ಬಿಡುಗಡೆ…
ಟಿ.ನರಸೀಪುರ: ತಾಲ್ಲೂಕಿನಲ್ಲಿ ಚಿರತೆಗಳ ಹಾವಳಿ ಮಿತಿಮೀರಿದ್ದು, ಜನತೆ ಭಯಭೀತರಾಗಿದ್ದಾರೆ. ತಾಲ್ಲೂಕಿನ ಎಸ್.ಕೆಬ್ಬೆಹುಂಡಿ, ಕನ್ನಾಯಕನಹಳ್ಳಿ ಗ್ರಾಮದ ಮಧ್ಯೆ ಚಿರತೆ ಪ್ರತ್ಯಕ್ಷವಾಗಿದ್ದು, ಈ…
ಬೆಂಗಳೂರು: ರಾಷ್ಟ್ರ ರಾಜಧಾನಿ ದೆಹಲಿಯಂತೆ ಬೆಂಗಳೂರು ಸಹ ಮತ್ತೊಂದು ಗ್ಯಾಸ್ ಛೇಂಬರ್ ಆಗದಂತೆ ಕ್ರಮ ವಹಿಸಲು ಶೀಘ್ರವೇ ನಗರದ ಎಲ್ಲ…