ವಾಣಿಜ್ಯ

ಪ್ರಯಾಣಿಕ ವಾಹನಗಳ ಮೇಲೆ ದರ ಹೆಚ್ಚಿಸಿದ ಟಾಟಾ ಮೋಟಾರ್ಸ್‌

ನವದೆಹಲಿ: ಪ್ರಯಾಣಿಕ ವಾಹನಗಳ ದರ ಹೆಚ್ಚಳ ಮಾಡಲಾಗಿದ್ದು, ನವೆಂಬರ್ 7ರಿಂದ ಜಾರಿಗೆ ಬರಲಿದೆ ಎಂದು ಟಾಟಾ ಮೋಟಾರ್ಸ್  ಶನಿವಾರ ತಿಳಿಸಿದೆ. ಸರಾಸರಿ ಶೇಕಡಾ 0.9ರಷ್ಟು ದರ ಏರಿಕೆ ಮಾಡಲಾಗಿದೆ. ವಾಹನದ ವೇರಿಯೆಂಟ್, ಮಾದರಿಗಳ ಆಧಾರದಲ್ಲಿ ದರ ವ್ಯತ್ಯಾಸವಾಗಲಿದೆ ಎಂದು ಕಂಪನಿ ತಿಳಿಸಿದೆ.

ಇತ್ತೀಚಿನ ದಿನಗಳಲ್ಲಿ ವೆಚ್ಚದಲ್ಲಿ ಗಮನಾರ್ಹ ಹೆಚ್ಚಳವಾಗಿದೆ. ಒಟ್ಟಾರೆ ಇನ್‌ಪುಟ್ ವೆಚ್ಚದಲ್ಲಿನ ಅತಿಯಾದ ಹೆಚ್ಚಳವನ್ನು ಸರಿದೂಗಿಸಲು ಕನಿಷ್ಠ ಬೆಲೆ ಏರಿಕೆಯ ಮೂಲಕ ಪ್ರಯತ್ನಿಸುತ್ತಿದ್ದೇವೆ ಎಂದು ಕಂಪನಿ ಹೇಳಿದೆ. ಟಿಯಾಗೊ, ಪಂಚ್, ನೆಕ್ಸಾನ್, ಹ್ಯಾರಿಯರ್, ಸಫಾರಿ ಸೇರಿದಂತೆ ವಿವಿಧ ಬ್ರ್ಯಾಂಡ್​​ನ ಕಾರು / ವಾಹನಗಳನ್ನು ಕಂಪನಿ ಮಾರಾಟ ಮಾಡುತ್ತಿದೆ.

ಭಾರತದಲ್ಲಿ ಎಲೆಕ್ಟ್ರಿಕ್ ಕಾರು ಮಾರಾಟವು ನಿರಂತರವಾಗಿ ಹೆಚ್ಚುತ್ತಿದ್ದು, ಟಾಟಾ ಮೋಟಾರ್ಸ್ ಈ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿ ಗುರುತಿಸಿಕೊಂಡಿದೆ. ಸೆಪ್ಟೆಂಬರ್ ಅವಧಿಯಲ್ಲಿ ದೇಶದಲ್ಲಿ ಎಲೆಕ್ಟ್ರಿಕ್ ಕಾರು ಮಾರಾಟದಲ್ಲಿ ಟಾಟಾ ಮೋಟಾರ್ಸ್ ಅಗ್ರ ಸ್ಥಾನ ಕಾಯ್ದುಕೊಂಡಿತ್ತು. ಟಾಟಾದ ಟಿಗೋರ್ ಇವಿ ಮತ್ತು ನೆಕ್ಸಾನ್ ಇವಿ ಕಾರುಗಳು ಅಗ್ರಸ್ಥಾನದಲ್ಲಿದ್ದು, ಎರಡು ಮಾದರಿಗಳು ಸೆಪ್ಟೆಂಬರ್ ಅವಧಿಯಲ್ಲಿ ಒಟ್ಟು 2,831 ಯುನಿಟ್ ಮಾರಾಟಗೊಂಡಿದ್ದವು. ಈ ಕಾರುಗಳ ಮಾರಾಟವು ಕಳೆದ ವರ್ಷದ ಸೆಪ್ಟೆಂಬರ್ ಅವಧಿಗಿಂತ ಶೇ. 271ರಷ್ಟು ಹೆಚ್ಚಳವಾಗಿತ್ತು. ನೆಕ್ಸಾನ್ ಇವಿಯಲ್ಲಿ ಮ್ಯಾಕ್ಸ್ ಎಡಿಷನ್ ಭರ್ಜರಿ ಬೇಡಿಕೆ ಪಡೆದುಕೊಳ್ಳುತ್ತಿದೆ ಎಂದು ಇತ್ತೀಚೆಗೆ ವರದಿಯಾಗಿತ್ತು.

ಇತ್ತೀಚೆಗೆ ಪ್ರಕಟಗೊಂಡಿದ್ದ ವಿಶ್ವದ ಅತ್ಯಂತ ಮೌಲ್ಯಯುತ 100 ಬ್ರ್ಯಾಂಡ್​ಗಳ ಪಟ್ಟಿಯಲ್ಲಿ ಕೂಡ ಟಾಟಾ ಗ್ರೂಪ್ ಸ್ಥಾನ ಗಳಿಸಿತ್ತು. ಪಟ್ಟಿಯಲ್ಲಿ ಕಂಪನಿಯು 77ನೇ ಸ್ಥಾನದಲ್ಲಿ ಗುರುತಿಸಿಕೊಂಡಿತ್ತು. ಆಟೊಮೊಬೈಲ್ ಉದ್ಯಮದಲ್ಲಿ ವಿಶೇಷ ಪ್ರಗತಿ ಸಾಧಿಸುವ ಮೂಲಕ ಟಾಟಾ ಗ್ರೂಪ್ ಇತ್ತೀಚೆಗೆ ಭಾರತದಲ್ಲಿ ಭಾರಿ ಪ್ರಸಿದ್ಧಿ ಪಡೆದಿದೆ. ವಿವಿಧ ಮಾದರಿಯ ಕಾರುಗಳನ್ನು ಮಾರುಕಟ್ಟೆಗೆ ಬಿಡುಗಡೆ ಮಾಡುವ ಮೂಲಕ ಗ್ರಾಹಕರ ಗಮನ ಸೆಳೆದಿದೆ. ಎಲೆಕ್ಟ್ರಿಕ್ ಕಾರುಗಳ ಮಾರಾಟದಲ್ಲಿಯೂ ಕಂಪನಿ ಮುಂಚೂಣಿಯಲ್ಲಿದೆ. ಟಾಟಾ ಗ್ರೂಪ್​ನ ಬ್ರ್ಯಾಂಡ್ ಆಗಿರುವ ಟಾಟಾ ಮೋಟಾರ್ಸ್ ಎಲೆಕ್ಟ್ರಿಕ್ ಕಾರು ಮಾರಾಟದಲ್ಲಿ ಅಗ್ರ ಸ್ಥಾನ ಕಾಯ್ದುಕೊಂಡಿದೆ.

andolana

Recent Posts

ಭಾರೀ ಮಳೆಗೆ ಕೊಚ್ಚಿ ಹೋದ ಚೆಕ್ ಡ್ಯಾಂ: 15 ಅಡಿಗೂ ಹೆಚ್ಚು ಪ್ರವಾಹ

ಹನೂರು: ತಾಲ್ಲೂಕಿನ ಶಾಗ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಲಾಜರ್ ದೊಡ್ಡಿ ಗ್ರಾಮದಲ್ಲಿ ಒಡಿಪಿ ಸಂಸ್ಥೆಯಿಂದ ನಿರ್ಮಾಣ ಮಾಡಿದ್ದ ಚೆಕ್ ಡ್ಯಾಂ…

15 hours ago

ಭಾರೀ ಮಳೆಗೆ ಮನೆ ಕುಸಿತ: ಲಕ್ಷಾಂತರ ರೂ. ನಷ್ಟ

ಹನೂರು: ತಾಲ್ಲೂಕಿನ ಎಲ್ಲೇಮಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವೈಶಂಪಾಳ್ಯ ಗ್ರಾಮದಲ್ಲಿ ಭಾನುವಾರ ರಾತ್ರಿ ಸುರಿದ ಭಾರೀ ಮಳೆಗೆ ಮನೆ ಸಂಪೂರ್ಣ…

15 hours ago

ಧರ್ಮಸ್ಥಳ ಸೌಜನ್ಯ ಪ್ರಕರಣ: ಮರು ತನಿಖೆಗೆ ಸುಪ್ರೀಂಕೋರ್ಟ್ ಮಹತ್ವದ ಆದೇಶ

ನವದೆಹಲಿ: ಧರ್ಮಸ್ಥಳ ಸೌಜನ್ಯ ಪ್ರಕರಣದ ಮರು ತನಿಖೆಗೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ. ನವದೆಹಲಿಯಲ್ಲಿ ನಡೆದ ವಿಚಾರಣೆಯಲ್ಲಿ, ಹಲವು…

17 hours ago

ಕಾಡಾನೆ ದಾಳಿ: ವ್ಯಕ್ತಿ ಸಾವು

ಸರಗೂರು: ಆಸ್ಪತ್ರೆಗೆ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಸರಗೂರು ತಾಲ್ಲೂಕಿನ ಕಾಡಗೆರೆ ಗ್ರಾಮದ…

19 hours ago

ಗಣೇಶ ವಿಸರ್ಜನೆ ಮೆರವಣಿಗೆ ರಾಜಕೀಯ ದಾಳವಾಗದಿರಲಿ…

ಬ್ರಿಟೀಷರ ವಿರುದ್ಧ ಸಮಾಜವನ್ನು ಅದರಲ್ಲೂ ಯುವಜನರನ್ನು ಸಂಘಟಿಸಿ, ದೇಶಭಕ್ತಿಯನ್ನು ಜಾಗೃತಿಗೊಳಿಸುವ ಮೂಲಕ ಅವರನ್ನು ಸ್ವಾತಂತ್ರ್ಯಸಂಗ್ರಾಮಕ್ಕೆ ಸಜ್ಜುಗೊಳಿಸುವ ಉದ್ದೇಶದಿಂದ ಆರಂಭವಾದ ಸಾರ್ವಜನಿಕ…

22 hours ago

ಕಾಂಗ್ರೆಸ್‌ನಲ್ಲೀಗ ಆತಂಕದ ಕಾರ್ಮೋಡ…

ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕಳೆದ ಮೂರು ವರ್ಷಗಳಿಂದ ಅಧಿಕಾರ ಹಂಚಿಕೆಯ ಸಂಘರ್ಷದಲ್ಲಿ ಮುಳುಗಿದ್ದ ಆಡಳಿತಾರೂಢ ಕಾಂಗ್ರೆಸ್…

22 hours ago