ಮುಂಬೈ : ಷೇರು ಮಾರುಕಟ್ಟೆಯಲ್ಲಿ ಸತತ ನಾಲ್ಕನೇ ದಿನವೂ ಏರಿಕೆ ಮುಂದುವರೆದಿದ್ದು ಮುಂಬೈ ಷೇರುಪೇಟೆ ಸೂಚ್ಯಂಕ(ಬಿಎಸ್‌ಇ) ಸೆನ್ಸೆಕ್ಸ್ 449 ಅಂಕಗಳೊಂದಿಗೆ ಸಾರ್ವಕಾಲಿಕ ಗರಿಷ್ಠ ಮಟ್ಟ 65,000ಕ್ಕೆ ತಲುಪಿದೆ.
30 ಷೇರುಗಳ ಬಿಎಸ್‌ಇ ಸೆನ್ಸೆಕ್ಸ್ ಆರಂಭಿಕ ವಹಿವಾಟಿನಲ್ಲಿ 449.46 ಪಾಯಿಂಟ್‌ಗಳ ಏರಿಕೆ ಕಂಡು ಸಾರ್ವಕಾಲಿಕ ಗರಿಷ್ಠ ಮಟ್ಟವಾದ 65,168.02 ತಲುಪಿದೆ. ಎನ್‌ಎಸ್‌ಇ ನಿಫ್ಟಿ 128.95 ಪಾಯಿಂಟ್‌ಗಳ ಏರಿಕೆ ಕಂಡು ತನ್ನ ಜೀವಮಾನದ ಗರಿಷ್ಠ 19,318ಕ್ಕೆ ತಲುಪಿದೆ. ಜಾಗತಿಕ ಮಾರುಕಟ್ಟೆಯಲ್ಲಿ ಉತ್ತಮ ವಹಿವಾಟು ಮತ್ತು ವಿದೇಶಿ ಬಂಡವಾಳದ ಒಳಹರಿವಿನ ಪ್ರಭಾವದಿಂದ ಈ ಏರಿಕೆ ಕಂಡುಬಂದಿದೆ.
ಸೆನ್ಸೆಕ್ಸ್ ಪ್ಯಾಕ್‌ನಿಂದ, ಎಚ್‌ಡಿಎಫ್‌ಸಿ, ಎಚ್‌ಡಿಎಫ್‌ಸಿ ಬ್ಯಾಂಕ್, ಮಹೀಂದ್ರಾ ಮತ್ತು ಮಹೀಂದ್ರಾ, ಅಲ್ಟ್ರಾಟೆಕ್ ಸಿಮೆಂಟ್, ಟಾಟಾ ಸ್ಟೀಲ್, ಬಜಾಜ್ ಫೈನಾನ್ಸ್, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ರಿಲಯನ್ಸ್ ಇಂಡಸ್ಟ್ರೀಸ್, ಬಜಾಜ್ ಫಿನ್‌ಸರ್ವ್ ಮತ್ತು ಐಸಿಐಸಿಐ ಬ್ಯಾಂಕ್ ಪ್ರಮುಖ ಲಾಭ ಗಳಿಸಿದ ಸಂಸ್ಥೆಗಳಾದರೆ,
ಪವರ್ ಗ್ರಿಡ್, ಮಾರುತಿ, ಟೆಕ್ ಮಹೀಂದ್ರಾ, ಇಂಡಸ್‌ಇಂಡ್ ಬ್ಯಾಂಕ್, ಎಚ್‌ಸಿಎಲ್ ಟೆಕ್ನಾಲಜೀಸ್ ಮತ್ತು ಆಕ್ಸಿಸ್ ಬ್ಯಾಂಕ್ ನಷ್ಟ ಅನುಭವಿಸಿದೆ.
ಮಂಡ್ಯ : ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ (ಏಪ್ರಿಲ್ 15) ಜಿಲ್ಲೆಯ ನಾಗಮಂಗಲ ತಾಲ್ಲೂಕಿನ ಆದಿಚುಂಚನಗಿರಿ ಶ್ರೀಕ್ಷೇತ್ರಕ್ಕೆ ಮೊದಲ…
ವಾಷಿಂಗ್ಟನ್ : ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿ ನಡೆದ ಅಮೆರಿಕ-ಇರಾನ್ ಮಾತುಕತೆ ವಿಫಲವಾದ ನಂತರ, ಎರಡು ವಾರಗಳ ಕದನ ವಿರಾಮ ಕೊನೆಗೊಳ್ಳುವ ಮೊದಲು,…
ಬೆಂಗಳೂರು : ಅಸ್ಪೃಶ್ಯತೆ ಆಚರಣೆ, ಅಸಮಾನತೆ ವಿರುದ್ಧದ ಹೋರಾಟಗಳಲ್ಲಿ ಪಾಲ್ಗೊಂಡು, ಸಮ ಸಮಾಜ ನಿರ್ಮಾಣದ ಹಾದಿಯಲ್ಲಿ ಛಾಪು ಮೂಡಿಸಿದ ಐವರು…
ಟೆಹ್ರಾನ್ : ಅಮೆರಿಕ ಸರ್ಕಾರ ಹೇರಿದ ನೌಕಾ ದಿಗ್ಬಂಧನ ಎದುರಿಸಿ ಇರಾನ್‌ನ ಹಡಗುಗಳು ಹಾರ್ಮುಜ್ ಜಲಸಂಧಿ ದಾಟುವುದನ್ನು ಮುಂದುವರಿಸಿವೆ. ಕನಿಷ್ಠ…
ಮೈಸೂರು : ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಹೋರಾಟದ ಬದುಕು ಮತ್ತು ಅವರು ಪ್ರತಿಪಾದಿಸಿದ ಸಮಾನತೆಯ ತತ್ವಗಳನ್ನು ಪ್ರತಿಯೊಬ್ಬರೂ ತಮ್ಮ…
ಚಾಮರಾಜನಗರ : ತಾಲ್ಲೂಕಿನ ವಿ.ಸಿ.ಹೊಸೂರು ಗ್ರಾಮಸ್ಥರು ತಮ್ಮ ಊರಿಗೆ ಇನ್ನೂ ಪೂರ್ವ ಮುಂಗಾರು ಮಳೆ ಪ್ರವೇಶ ಆಗದ ಹಿನ್ನೆಲೆಯಲ್ಲಿ ಮಳೆಗಾಗಿ…