ಚಾ.ನಗರ: ಕೃಷಿ ಸಚಿವರ ಭೇಟಿಯಲ್ಲಿ ಜನಜಾತ್ರೆ, ಕೋವಿಡ್‌ ನಿಯಮ ಮಾಯ!

ಚಾಮರಾಜನಗರ: ಕೃಷಿ ಸಚಿವ ಬಿ.ಸಿ.ಪಾಟೀಲ್‌ ಅವರು ಮಂಗಳವಾರ ನಗರಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಜನಜಂಗುಳಿ ನೆರೆದಿತ್ತು.

ಸಚಿವರು, ಜನಪ್ರತಿನಿಧಿಗಳು, ಅಧಿಕಾರಿಗಳು, ಬಿಜೆಪಿ ಕಾರ್ಯಕರ್ತರು ಕೋವಿಡ್‌ ನಿಯಮ ಉಲ್ಲಂಘಿಸಿದ ಚಿತ್ರಣಗಳು ಕಂಡುಬಂದಿತು. ಸಮಗ್ರ ಕೃಷಿ ಅಭಿಯಾನ ಪ್ರಚಾರ ವಾಹನಕ್ಕೆ ಜಿಲ್ಲಾಧಿಕಾರಿ ಕಚೇರಿ ಮುಂದೆ ಚಾಲನೆ ಸಂದರ್ಭದಲ್ಲಿ ಜನಜಾತ್ರೆ ನೆರೆದಿತ್ತು.

ಕೋವಿಡ್‌ ಎರಡನೇ ಅಲೆ ವ್ಯಾಪಕವಾಗಿ ಹರಡುತ್ತಿರುವ ಈ ಸಂದರ್ಭದಲ್ಲಿ ಯಾರೊಬ್ಬರೂ ನಿಯಮಗಳನ್ನು ಪಾಲಿಸಲಿಲ್ಲ. ಸಾರ್ವಜನಿಕ ಅಂತರ ಕಾಯ್ದುಕೊಳ್ಳದೇ ಜನರು ನೂಕುನುಗ್ಗಲಲ್ಲಿ ನೆರೆದಿದ್ದರು.