ಪ್ರವಾಸಿಗರಿಗೆ ಕೋವಿಡ್ ನೆಗೆಟಿವ್ ರಿಪೋರ್ಟ್ ಆದೇಶ ವಾಪಾಸ್

ಮಡಿಕೇರಿ: ಪ್ರವಾಸಿಗರಿಗೆ ಕೋವಿಡ್ ನೆಗೆಟಿವ್ ರಿಪೋರ್ಟ್ ಕಡ್ಡಾಯವೆಂದು ಬುಧವಾರ ಹೊರಡಿಸಲಾಗಿದ್ದ ಆದೇಶವನ್ನು ಜಿಲ್ಲಾಡಳಿತ ಗುರುವಾರ ವಾಪಾಸ್ ಪಡೆದಿದೆ.

ಆದರೆ ಮಹಾರಾಷ್ಟ್ರ, ಕೇರಳ ರಾಜ್ಯಗಳಿಂದ ಬರುವವರಿಗೆ ನೆಗೆಟಿವ್ ರಿಪೋರ್ಟ್ ಕಡ್ಡಾಯವಾಗಿರಲಿದೆ. ಜೊತೆಗೆ ಎಲ್ಲರೂ ಕೋವಿಡ್ ನಿಯಮವನ್ನು ಕಡ್ಡಾಯವಾಗಿ ಪಾಲಿಸಬೇಕೆಂದು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಆದೇಶದಲ್ಲಿ ತಿಳಿಸಿದ್ದಾರೆ.