ಕೋವಿಡ್‌ ಎರಡನೇ ಅಲೆ: ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಮುಂದೂಡಿಕೆ

ಜೂನ್ 21 ರಿಂದ ಪ್ರಾರಂಭವಾಗಬೇಕಿದ್ದ ಎಸ್.ಎಸ್‌.ಎಲ್.ಸಿ ಪರೀಕ್ಷೆಗಳ ಮುಂದೂಡಲಾಗಿದೆ.
ಕೋವಿಡ್‌ ಸೋಂಕಿನ ಎರಡನೇ ಅಲೆ ಹಿನ್ನೆಲೆಯಲ್ಲಿ ಈ ಕಠಿಣ ಕ್ರಮ ಕೈಗೊಳ್ಳಲಾಗಿದ್ದು ಮುಂದಿನ ಆದೇಶದವರೆಗೆ ಮುಂದೂಡಲಾಗಿದೆ ಎಂದು ಸಚಿವ ಸುರೇಶ್ ಕುಮಾರ್ ಪ್ರಕಟಿಸಿದರು.
ಕೊರೋನಾ ಪ್ರಕರಣಗಳು, ವಿದ್ಯಾರ್ಥಿ-ಪೋಷಕರ, ವಿವಿಧ ಶಾಲಾ ಸಂಘಟನೆಗಳ ಆತಂಕಗಳನ್ನು ಗಮನದಲ್ಲಿರಿಸಿ ಈ ನಿರ್ಣಯ ಕೈಗೊಳ್ಳಲಾಗಿದೆ.  ಮೊದಲೇ ದಿನಾಂಕ ಪ್ರಕಟಿಸಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.
× Chat with us