ಮಂಡ್ಯ: ಕ್ರಾಂತಿ ಸಿನಿಮಾ ಕಾರ್ಯಕ್ರಮದಲ್ಲಿ ಗಣರಾಜ್ಯೋತ್ಸವದಂದು ‘ಕ್ರಾಂತಿ ಉತ್ಸವ ಮಾಡಿ’ ಎಂದು ನಟಿ ರಚಿತಾ ರಾಮ್ ಹೇಳಿಕೆ ಕೊಟ್ಟಿದ್ದ ಹಿನ್ನೆಲೆಯಲ್ಲಿ ಸಕ್ಕರೆ ನಾಡು ಮಂಡ್ಯದಲ್ಲಿ ನಟಿ ರಚಿತಾ ರಾಮ್ ವಿರುದ್ದ ಆಕ್ರೋಶ ಭುಗಿಲೆದ್ದಿದೆ. ಭಾರತದ ಸಂವಿಧಾನದ ದಿನಕ್ಕೆ ಅಪಮಾನ ಮಾಡಿದ್ದಾರೆ ಎಂದು ಆರೋಪಿಸಿ ನಟಿ ರಚಿತಾ ರಾಮ್ ವಿರುದ್ಧ ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ ನಿಂದ ಮದ್ದೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ .ನಟಿ ರಚಿತಾ ರಾಮ್ ಸಂವಿಧಾನ ದಿನಕ್ಕೆ ಅಪಮಾನ ಮಾಡಿದ್ದಾರೆ, ಕ್ರಾಂತಿ ಉತ್ಸವ ಮಾಡಿ ಅಂತ ಹೇಳಿದ್ದಾರೆ. ಕನ್ನಡ ಚಿತ್ರರಂಗದಲ್ಲಿ ನಟನೆ ಮಾಡಲು ರಚಿತಾ ರಾಮ್ ಗೆ ಯೋಗ್ಯತೆ ಇಲ್ಲ. ಕನ್ನಡ ಚಿತ್ರರಂಗದಿಂದ ಅವರನ್ನು ಬ್ಯಾನ್ ಮಾಡಿ. ರಚಿತಾ ರಾಮ್ ವಿರುದ್ದ ದೇಶ ದ್ರೋಹದ ಪ್ರಕರಣ ದಾಖಲಿಸಿ, ಈ ದೇಶದಿಂದ ಗಡಿ ಪಾರು ಮಾಡಿ ಅವರ ವಿರುದ್ಧ ತಕ್ಷಣವೇ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ ನ ಸದಸ್ಯ ಎಂ.ಸಿ.ಬಸವರಾಜು ಮದ್ದೂರಿನ ಪ್ರವಾಸಿ ಮಂದಿರದಲ್ಲಿ ನಡೆದ ಸುದ್ದಿಗೋಷ್ಠಿ ಯಲ್ಲಿ ಆಗ್ರಹಿಸಿದ್ದಾರೆ.
- ಮುಖಪುಟ
- ಮೈಸೂರು
- ಜಿಲ್ಲೆಗಳು
- ರಾಜ್ಯ
- ದೇಶ- ವಿದೇಶ
- ರಾಜಕೀಯ
- ಅಪರಾಧ
- ಮಹಿಳೆ
- ಕೃಷಿ
- ವಿಜ್ಞಾನ ತಂತ್ರಜ್ಞಾನ
- ಕ್ರೀಡೆ
- ವಾಣಿಜ್ಯ
- ಚಿತ್ರಸಂತೆ
- ವಿಶೇಷ
- ಆಂದೋಲನ ಪುರವಣಿ
- ಎಡಿಟೋರಿಯಲ್
- ಆಂದೋಲನ 50
- ಜಾಹೀರಾತು
- Cricket
Subscribe to Updates
Get the latest creative news from FooBar about art, design and business.