ಬೆಂಗಳೂರು : ಅಡುಗೆ ಮನೆಯನ್ನೇ ಕಾರ್ಖಾನೆಯನ್ನಾಗಿ ಮಾಡಿಕೊಂಡು ಡ್ರಗ್ಸ್ ತಯಾರಿಸುತ್ತಿದ್ದ ನೈಜೀರಿಯಾ ಪ್ರಜೆಯನ್ನು ಸಿಸಿಬಿ ( ಮಾದಕ ದ್ರವ್ಯ ನಿಗ್ರಹ ದಳ ) ಅಧಿಕಾರಿಗಳು ಬಂಧಿಸಿದ್ದಾರೆ.
ಆರೋಪಿ ಬೆಂಜಮಿನ್ ಬೆಂಗಳೂರಿನ ಅವಲಹಳ್ಳಿಯಲ್ಲಿರುವ ತನ್ನ ಮನೆಯಲ್ಲಿ ಕಚ್ಚಾ ವಸ್ತುಗಳನ್ನು ಬಳಸಿಕೊಂಡು ಎಂಡಿಎಂಎ ತಯಾರಿಸಿ ಮಾರಾಟ ಮಾಡುತ್ತಿದ್ದ.
ರಾಮಮೂರ್ತಿ ನಗರದಲ್ಲಿ ಎಂಡಿಎಂಎ ಅನ್ನು ಮಾರಾಟ ಮಾಡುತ್ತಿದ್ದ ವೇಳೆ ಸಿಸಿಬಿ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.
ಈ ವೇಳೆ ಆರೋಪಿ ಬೆಂಜಮಿನ್ ಬಳಿ 100 ಗ್ರಾಂ ಎಂಡಿಎಂಎ ಪತ್ತೆಯಾಗಿದೆ.ಈ ವೇಳೆ ಅಧಿಕಾರಿಗಳು ಆತನ್ನು ಪರಿಶೀಲನೆ ಮಾಡಿದ್ದಾರೆ. ಆಗ ಆತನೇ ತನ್ನ ಮನೆಯಲ್ಲಿ ಡ್ರಗ್ಸ್ ತಯಾರಿಸಿ ಅದನ್ನು ನೈಜೀರಿಯಾ ಹಾಗೂ ಆಫ್ರಿಕಾ ಮೂಲದವರಿಗೆ ಮಾರಾಟ ಮಾಡುತ್ತಿದ್ದ ಎಂಬ ವಿಚಾರ ಬೆಳಕಿಗೆ ಬಂದಿದೆ.
ಆರೋಪಿ ತಯಾರಿಸಿದ್ದ ಸುಮಾರು 10 ಕೋಟಿ ಮೌಲ್ಯದ 5 ಕೆಜಿ ಎಂಡಿಎಂಎ ಹಾಗೂ ಅದನ್ನು ತಯಾರಿಸಲು ಬಳಸುವ ಕಚ್ಚಾವಸ್ತುಗಳನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.