ಮೈಸೂರು| ರಾತ್ರಿ ಮನೆಯಿಂದ ಹೊರ ಹೋಗಿದ್ದ ವ್ಯಕ್ತಿ ಪಾರ್ಕ್‌ ಬಳಿ ಶವವಾಗಿ ಪತ್ತೆ: ಕೊಲೆ ಶಂಕೆ!

ಮೈಸೂರು: ಇಲ್ಲಿನ ಉದಯಗಿರಿಯ ಪಾರ್ಕ್‌ವೊಂದರ ಬಳಿ ವ್ಯಕ್ತಿಯ ಮೃತದೇಹ ಪತ್ತೆಯಾಗಿದ್ದು, ಕೊಲೆ ಶಂಕೆ ವ್ಯಕ್ತವಾಗಿದೆ.

ಹಮೀದ್ (40) ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ. ಈತ ಗುಜರಿ ಕೆಲಸ ಮಾಡಿಕೊಂಡಿದ್ದ ಎನ್ನಲಾಗಿದೆ.

ವ್ಯಕ್ತಿಯನ್ನು ಕೊಲೆ ಮಾಡಿ ಪಾರ್ಕ್‌ ಪಕ್ಕದ ಖಾಲಿ ಜಾಗದಲ್ಲಿ ಬಿಸಾಡಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಉದಯಗಿರಿ ಪೊಲೀಸರು, ಶ್ವಾನ ದಳ, ಬೆರಳಚ್ಚು ತಜ್ಞರು ಭೇಟಿ ಪರಿಶೀಲನೆ ನಡೆಸಿದ್ದಾರೆ. ಕಳೆದ ರಾತ್ರಿ ಮನೆಯಿಂದ ಹೋಗಿದ್ದ ಹಮೀದ್ ಬೆಳಿಗ್ಗೆ ಶವವಾಗಿ ಪತ್ತೆಯಾಗಿದ್ದಾನೆ. ಕತ್ತು ಕೊಯ್ದು ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.

× Chat with us