ಅಪರಾಧ

ಫೇಸ್‌ಬುಕ್‌ ಜಾಹೀರಾತು ನಂಬಿ 86 ಲಕ್ಷ ಕಳೆದುಕೊಂಡ ವ್ಯಕ್ತಿ

ಮೈಸೂರು: ಲಾಭ ಗಳಿಸುವ ಆಸೆಯಿಂದ ಫೇಸ್‌ಬುಕ್‌ನಲ್ಲಿ ಬಂದ ಜಾಹೀರಾತನ್ನು ನಂಬಿ ಮೈಸೂರಿನ ವ್ಯಕ್ತಿಯೊಬ್ಬ ಬರೋಬ್ಬರಿ 86 ಲಕ್ಷ ಕಳೆದುಕೊಂಡು ಕಂಗಲಾಗಿದ್ದಾನೆ.

ಸಿಐಎನ್‌ವಿ ಎಂ/ಎಫ್‌ ಸಂಸ್ಥೆಯ ಸದಸ್ಯರಾಗಿರುವ ವಿಜಯ ನಗರ ನಿವಾಸಿ ಸತೀಶ್‌(61 ವರ್ಷ) ಹಣ ಕಳೆದುಕೊಂಡ ವ್ಯಕಿಯಾಗಿದ್ದಾರೆ. ಫೇಸ್‌ ಬುಕ್‌ನಲ್ಲಿ ಶೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿ ಹಣಗಳಿಸಬಹುದು ಎಂದು ಹೂಡಿಕೆ ಬಗ್ಗೆ ಫೇಸ್‌ಬುಕ್‌ನಲ್ಲಿ ನೀಡುತ್ತಿದ್ದ ತರಬೇತಿಯಿಂದ ಪ್ರೇರೇಪಿತರಾಗಿ ಅವರು ಹೇಳಿದ ಹಾಗೆ ಏಪ್ರಿಲ್‌ ತಿಂಗಳಿನಿಂದ ವಿವಿಧ ಹಂತಗಳಲ್ಲಿ 86 ಲಕ್ಷ ಹಣ ವರ್ಗಾವಣೆ ಮಾಡಿದ್ದಾರೆ.

ಲಾಭಾಂಶಗಳ ಬಗ್ಗೆ ಮಾಹಿತಿ ಪಡೆಯಲು ಮುಂದಾದಾಗ ತಾವು ವಂಚನೆಗೆ ಒಳಗಾಗಿರುವುದು ತಿಳಿದು ಬಂದಿದೆ. ಈ ಸಂಬಂಧ ಸೆನ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಕಾಶ್ಮೀರದಲ್ಲಿ ಭಾರೀ ಹಿಮಪಾತ: ವಿಮಾನಗಳು ರದ್ದು

ಶ್ರೀನಗರ: ಕಣಿವೆ ನಾಡು ಕಾಶ್ಮೀರದಲ್ಲಿ ಭಾರೀ ಹಿಮಪಾತ ಆಗುತ್ತಿದ್ದು, ಎಲ್ಲಾ ವಿಮಾನಗಳನ್ನು ರದ್ದುಗೊಳಿಸಲಾಗಿದೆ. ಹವಾಮಾನ ವೈಪರೀತ್ಯದ ಕಾರಣದಿಂದ ವಿಮಾನಗಳ ಹಾರಾಟವನ್ನು…

7 hours ago

ರಾಹುಲ್‌ ಗಾಂಧಿ ಹೇಳಿಕೆ ನಾಚಿಕೆಗೇಡು: ಬಿಜೆಪಿ ಕಿಡಿ

ನವದೆಹಲಿ: ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ಅವರ ಅಂತ್ಯಕ್ರಿಯೆ ವಿಚಾರದಲ್ಲಿ ಕೆಟ್ಟ ರಾಜಕೀಯ ಮಾಡಬೇಡಿ ಎಂದು ರಾಹುಲ್‌ ಗಾಂಧಿಗೆ ಬಿಜೆಪಿ…

7 hours ago

ಅಕ್ರಮವಾಗಿ ಗಾಂಜಾ ಮಾರುತ್ತಿದ್ದ ವ್ಯಕ್ತಿಯ ಬಂಧನ

ಹನೂರು: ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯೋರ್ವನನ್ನು ಬಂಧಿಸುವಲ್ಲಿ ಹನೂರು ಪೊಲೀಸರು ಯಶಸ್ವಿಯಾಗಿದ್ದಾರೆ. ಹನೂರು ತಾಲೂಕಿನ ಉದ್ದಟಿ ಗ್ರಾಮದ ಮನ್ನಾದ…

8 hours ago

ಹೊಸ ವರ್ಷಕ್ಕೆ ಸಜ್ಜಾದ ಮೈಸೂರು: ಯೋಗಾನರಸಿಂಹಸ್ವಾಮಿ ದೇವಾಲಯದಲ್ಲಿ 2 ಲಕ್ಷ ಲಡ್ಡು ವಿತರಣೆಗೆ ಸಿದ್ಧತೆ

ಮೈಸೂರು: ನೂತನ ವರ್ಷವನ್ನು ಬರಮಾಡಿಕೊಳ್ಳಲು ಜನರು ಕಾತುರದಿಂದ ಕಾಯುತ್ತಿದ್ದು, ಸಾಂಸ್ಕೃತಿಕ ನಗರಿ ಮೈಸೂರಿನಲ್ಲೂ ಜನತೆ ಎಲ್ಲಾ ಸಿದ್ಧತೆ ಕೈಗೊಂಡಿದ್ದಾರೆ. ಹೊಸ…

8 hours ago

ಜನವರಿ.1ರವರೆಗೂ ಕೆಆರ್‌ಎಸ್‌ ಸಂಗೀತ ಕಾರಂಜಿ ಪ್ರದರ್ಶನ ಬಂದ್‌

ಮಂಡ್ಯ: ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ವಿಧಿವಶರಾಗಿರುವ ಹಿನ್ನೆಲೆಯಲ್ಲಿ ಅವರಿಗೆ ರಾಜ್ಯದಾದ್ಯಂತ ಏಳು ದಿನಗಳ ಕಾಲ ಶೋಕಾಚರಣೆ ಮಾಡಲಾಗುತ್ತದೆ. ಈ…

9 hours ago

ನಾಳೆ ಬೆಳಿಗ್ಗೆ 11 ಗಂಟೆಗೆ ಪ್ರಧಾನಿ ಮೋದಿ ಮನ್‌ ಕಿ ಬಾತ್‌ ಕಾರ್ಯಕ್ರಮ

ನವದೆಹಲಿ: ನಾಳೆ ಆಕಾಶವಾಣಿಯ ಮನ್‌ ಕಿ ಬಾತ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಆಲೋಚನೆಗಳ್ನು ಹಂಚಿಕೊಳ್ಳಲಿದ್ದಾರೆ. ನಾಳೆ ಬೆಳಿಗ್ಗೆ…

9 hours ago