Mysore
19
few clouds

Social Media

ಮಂಗಳವಾರ, 20 ಜನವರಿ 2026
Light
Dark

ಬೆಂಗಳೂರಲ್ಲಿ ಹಾಡಹಗಲೇ ಯುವತಿಯ ಬರ್ಬರ ಕೊಲೆ..!

Wife Murdered Over Suspected Infidelity: Husband Sentenced to Life Imprisonment

ಬೆಂಗಳೂರು : ಕತ್ತು ಕೂಯ್ದು ಕಾಲೇಜು ವಿದ್ಯಾರ್ಥಿನಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಗರದ ಮಲ್ಲೇಶ್ವರಂ ಮಂತ್ರಿ ಮಾಲ್ ಹಿಂಭಾಗ ರೈಲ್ವೆ ಟ್ರಾಕ್ ಬಳಿ ನಡೆದಿದೆ.

ಯಾಮಿನಿ‌ ಪ್ರಿಯಾ ಕೊಲೆಯಾದ ವಿದ್ಯಾರ್ಥಿನಿ. ಯಾಮಿನಿ‌ ಪ್ರಿಯಾ ಲವ್ ಮಾಡಲು ಒಪ್ಪದಿರುವುದಕ್ಕೆ ಕೊಲೆ ಮಾಡಿರುವ ಸಾಧ್ಯತೆಗಳಿದ್ದು, ವಿಘ್ನೇಶ್ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.

ಇದನ್ನೂ ಓದಿ:-ನಾಳೆ ತಲಕಾವೇರಿಯಲ್ಲಿ ಪವಿತ್ರ ತೀರ್ಥೋದ್ಭವ ; ಜಿಲ್ಲಾಡಳಿತದಿಂದ ಅಗತ್ಯ ಸಿದ್ಧತೆ

ಈ ಸಂಬಂಧ ಪೊಲೀಸರು ತನಿಖೆ ನಡೆಸಿದ್ದಾರೆ. ಬಿ.ಫಾರ್ಮ್ ವ್ಯಾಸಂಗ ಮಾಡುತ್ತಿದ್ದ ಪ್ರಿಯಾ, ಎಕ್ಸಾಮ್ ಇದೆ ಎಂದು ಇಂದು (ಅಕ್ಟೋಬರ್ 16) ಬೆಳಗ್ಗೆ ಏಳು ಗಂಟೆಗೆ ಮನೆಯಿಂದ ಕಾಲೇಜಿಗೆ ಹೋಗಿದ್ದು, ಮಧ್ಯಾಹ್ನ ಕಾಲೇಜ್ ಮುಗಿಸಿ ಮನೆಗೆ ವಾಪಸ್ಸಾಗುತ್ತಿದ್ದ ವೇಳೆ ಹಿಂದಿನಿಂದ ಬೈಕ್ ನಲ್ಲಿ ಬಂದ ದುಷ್ಕರ್ಮಿ, ಪ್ರಿಯಾಳ ಕತ್ತು ಕೊಯ್ದು ಪರಾರಿಯಾಗಿದ್ದಾನೆ. ಸ್ಥಳಕ್ಕೆ ಶ್ರೀರಾಮಪುರ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದು, ಲವ್ ವಿಚಾರಕ್ಕೆ ಈ ಕೊಲೆ ಮಾಡಿರುವ ಸಾಧ್ಯತೆಗಳಿವೆ ಎಂದು ಶಂಕೆ ವ್ಯಕ್ತಪಡಿಸಿದ್ದಾರೆ. ವಿಘ್ನೇಶ್ ಎಂಬಾತನ ಮೇಲೆ ಪೊಲೀಸರಿಗೆ ಅನುಮಾನ ಬಂದಿದ್ದು ತನಿಖೆ ನಡೆಸಿದ್ದಾರೆ.

ಪ್ರೀತಿ ನಿರಾಕರಿಸಿದ್ದ 20 ವರ್ಷದ ಯಾಮಿನಿ ಪ್ರಿಯಾ, ಕಾಲೇಜಿನಿಂದ ಮನೆಗೆ ಹೋಗುತ್ತಿದ್ದ ವೇಳೆ ರೈಲ್ವೆ ಟ್ರ್ಯಾಕ್ ಬಳಿ ಆಕೆ ಕಣ್ಣಿಗೆ ಖಾರದ ಪುಡಿ ಎರಚಿದ್ದಾನೆ. ಬಳಿಕ ಪ್ರಿಯಾ ಕುತ್ತಿಗೆ, ಮುಖಕ್ಕೆ ಹರಿತವಾದ ಆಯುಧದಿಂದ ಹಲ್ಲೆ ಮಾಡಿ ಪರಿಯಾಗಿದ್ದಾನೆ. ಪರಿಣಾಮ ತೀವ್ರ ರಕ್ತಸ್ರಾವವಾಗಿ ಪ್ರಿಯಾ ಸ್ಥಳದಲ್ಲೇ ಜೀವ ಬಿಟ್ಟಿದ್ದಾಳೆ ಎಂದು ತಿಳಿದುಬಂದಿದೆ.

Tags:
error: Content is protected !!