Mysore
24
overcast clouds

Social Media

ಶನಿವಾರ, 16 ಮೇ 2026
Light
Dark

ಗೂಡ್ಸ್‌ ವಾಹನ-ಬೈಕ್‌ ನಡುವೆ ಅಪಘಾತ : ಯುವಕ ಸಾವು

ಮಳವಳ್ಳಿ : ತಾಲೂಕಿನ ಹಲಗೂರು ಸಮೀಪದ ದಳವಾಯಿ ಕೋಡಿಹಳ್ಳಿ ಗ್ರಾಮದ ಪೈಪ್ ಲೈನ್ ಬಳಿ ಬೈಕ್ ಮತ್ತು ಗೂಡ್ಸ್ ವಾಹನ ನಡುವೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಬೈಕ್ ಹಿಂಬದಿ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಶುಕ್ರವಾರ ಸಂಜೆ ನಡೆದಿದೆ.

ಹಲಗೂರು ಸಮೀಪದ ಚಿಕ್ಕ ಎಲಚಗೆರೆ ಗ್ರಾಮದ ರಾಚಾಪ್ಪಾಜಿ ರವರ ಪುತ್ರ ಸೂರ್ಯ ಪ್ರಕಾಶ್ (19) ಮೃತ ಯುವಕ. ಸ್ವಗ್ರಾಮದಿಂದ ಕಾರ್ಯ ನಿಮಿತ್ತ ಬೈಕ್ ನಲ್ಲಿ ಸಾತನೂರಿಗೆ ತೆರಳುತ್ತಿದ್ದಾಗ ಎದುರುಗಡೆಯಿಂದ ಬಂದ ಗೂಡ್ಸ್ ವಾಹನ ಡಿಕ್ಕಿಯಾಗಿದೆ. ಬೈಕ್ ಸವಾರ ಸಿ.ಎನ್.ಕೆಂಪೇಗೌಡ ತೀವ್ರ ಗಾಯಗೊಂಡಿದ್ದು, ಮಂಡ್ಯ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

ಈ ಸಂಬಂಧ ಹಲಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:
error: Content is protected !!