ಮೈಸೂರು: ಅಕ್ರಮವಾಗಿ ಶ್ರೀಗಂಧ ಶೇಖರಣೆ ಮಾಡಿದ್ದ ಆರೋಪಿಯನ್ನು ಬಂಧಿಸುವಲ್ಲಿ ಮೈಸೂರಿನ ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಮೈಸೂರಿನ ಕೆಸರೆಯಲ್ಲಿ ಈ ಘಟನೆ ನಡೆದಿದ್ದು, ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಸಿಸಿಬಿ ಪೊಲೀಸರು, ಅಕ್ರಮವಾಗಿ ಶ್ರೀಗಂಧ ಶೇಖರಣೆ ಮಾಡಿದ್ದ ನವಾಜ್ ಷರೀಫ್ ಎಂಬಾತನನ್ನು ಬಂಧಿಸಿದ್ದಾರೆ.
ಬಂಧಿತ ಆರೋಪಿಯಿಂದ 30 ಕೆಜಿ ಶ್ರೀಗಂಧವನ್ನು ವಶಕ್ಕೆ ಪಡೆದುಕೊಂಡಿದ್ದು, ಎನ್.ಆರ್.ಪಿ.ಎಸ್ ಅರಣ್ಯ ಕಾಯ್ದೆಯಡಿ ಪ್ರಕರಣ ದಾಖಲು ಮಾಡಿದ್ದಾರೆ.





