ಬೆಂಗಳೂರು: ನಗರದ ಚಾಮರಾಜಪೇಟೆಯ ಮೂರು ಗೋಡೌನ್ ಗಳಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಚಾಮರಾಜಪೇಟೆಯ ಗವಿಪುರಂ ಬಳಿಯ ಟಿಆರ್ ಮಿಲ್ ಆವರಣದಲ್ಲಿ ಘಟನೆ ನಡೆದಿದ್ದು, ಮೂರು ಗೋಡೌನ್ ಗಳಿಗೆ ಬೆಂಕಿ ಹಬ್ಬಿದೆ.
ಟೈಯರ್, ಪೈಪ್ ಗಳು, ಪ್ಲೇವುಡ್ ಸಂಗ್ರಹಿಸಿಟ್ಟಿದ್ದ ಗೋಡೌನ್ ಗಳಿಗೆ ಬೆಂಕಿ ತಗುಲಿದ್ದು, ಅಪಾರ ಪ್ರಮಾಣದ ಹಾನಿಯಾಗಿದೆ.
ಮುಂಜಾನೆ 4 ಗಂಟೆ ಸಮಯದಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಮಾಹಿತಿ ತಿಳಿದ ಕೂಡಲೇ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳ ಸಿಬ್ಬಂದಿ ಬೆಂಬೆಕಿ ನಂದಿಸಲು ಕಾರ್ಯಾಚರಣೆ ನಡೆಸಿದ್ದಾರೆ.
ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಕೋಟ್ಯಂತರ ರೂ. ಮೌಲ್ಯದ ವಸ್ತುಗಳು ಸುಟ್ಟು ಕರಕಲಾಗಿವೆ. ನಾಲ್ಕು ಅಗ್ನಿಶಾಮಕ ವಾಹನಗಳಿಂದ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.





