Mysore
25
broken clouds

Social Media

ಸೋಮವಾರ, 22 ಡಿಸೆಂಬರ್ 2025
Light
Dark

ಅಂಜಲಿ ಕೊಲೆ ಪ್ರಕರಣ: ದಾವಣಗೆರೆಯಲ್ಲಿ ಆರೋಪಿ ಬಂಧನ

ಹುಬ್ಬಳ್ಳಿ: ಪ್ರೀತಿ ನಿರಾಕರಿಸಿದ ಕಾರಣಕ್ಕಾಗಿ ಯುವತಿಯ ಮನೆಗೆ ನುಗ್ಗಿ ಮಲಗಿದ್ದ ಯುವತಿಯನ್ನು ಹತ್ಯೆ ಮಾಡಿದ್ದ ಘಟನೆಗೆ ಸಂಬಂಧಿಸಿದಂತೆ ಆರೋಪಿಯನ್ನು ಹುಬ್ಬಳ್ಳಿ-ಧಾರವಾಡ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ವಿಶ್ವನಾಥ್‌ ಸಾವಂತ್‌ ಎಂಬ ಆರೋಪಿ ಯುವಕ ಹುಬ್ಬಳ್ಳಿಯಲ್ಲಿ ಅಂಜಲಿ ಅಂಬಿಗೇರ್‌ ಎಂಬ ಯುವತಿಯನ್ನು ಪ್ರೀತಿಸುತ್ತಿದ್ದು, ಯುವತಿ ಪ್ರೀತಿಯನ್ನು ನಿರಾಕರಿಸಿದಳು ಎಂಬ ಕಾರಣಕ್ಕೆ ಆಕೆಯ ಮನೆಗೆ ನುಗ್ಗಿ ಆಕೆಯನ್ನು ಚಾಕುವಿನಿಂದ ಮನಸೋಇಚ್ಛೆ ತಿವಿದು ಹತ್ಯೆ ಮಾಡಿ ಪರಾರಿಯಾಗದ್ದನು.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆರೋಪಿಗಾಗಿ ತೀವ್ರ ಹುಡುಕಾಟ ನಡೆಸುತ್ತಿದ್ದರು. ಈ ಸಂದರ್ಭದಲ್ಲಿ ಆರೋಪಿಯೊಂದಿಗೆ ಕೊಲೆ ನಡೆಯುವ ಕೆಲವು ಗಂಟೆಗಳ ಹಿಂದೆ ಮೊಬೈಲ್‌ ಮೂಲಕ ಸಂವಾದ ನಡೆಸಿದ ಆರೋಪಿಯ ಸ್ನೇಹಿತರನ್ನು ಬಂಧಿಸಿ ವಿಚಾರಣೆಗೊಳಪಡಿಸಿ ಅವರ ಸುಳಿವಿನ ಆಧಾರದ ಮೇಲೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

Tags:
error: Content is protected !!