ಮೈಸೂರು : ನಗರದ ಜಿಲ್ಲಾ ಮಕ್ಕಳ ರಕ್ಷಣಾ ಘಟಕಕ್ಕೆ ಬಾಂಬ್ ಬೆದರಿಕೆ ಹಾಕಿದ್ದರ ಬಗ್ಗೆ ವಿಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಗರದ ಡಿಸಿಪಿಯು ಕಚೇರಿಯ ಇ-ಮೇಲ್ ವಿಳಾಸಕ್ಕೆ ಗುರುವಾರ ಬೆಳಗ್ಗೆ ೭.೩೦ಕ್ಕೆ ಈ ಮೇಲ್ ಮೂಲಕ ದುಷ್ಕರ್ಮಿ, ನಿಮ್ಮ ಕಚೇರಿಯಲ್ಲಿ ಬಾಂಬ್ ಇಡಲಾಗಿದ್ದು, ಮಧ್ಯಾಹ್ನ ೧.೪೫ ರೊಳಗೆ ಎಲ್ಲರನ್ನೂ ಖಾಲಿ ಮಾಡಿಸಿ ಎಂದು ಬೆದರಿಸಿದ್ದಾನೆ.
ಈ ಬಗ್ಗೆ ಘಟಕದ ಸಿಬ್ಬಂದಿ ವಿಶೇಷ ಬಾಲ ಪೊಲೀಸ್ ಘಟಕಕ್ಕೆ ಮಾಹಿತಿ ನೀಡಿದ್ದಾರೆ. ಬಳಿಕ ಪೊಲೀಸ್ ಕಂಟ್ರೋಲ್ ರೂಂ ಮೂಲಕ ವಿಜಯನಗರ ಪೊಲೀಸ್ ಠಾಣೆಗೆ ವಿಷಯ ತಿಳಿಸಲಾಗಿದೆ. ಕೂಡಲೇ ದೌಡಾಯಿಸಿದ ಪೊಲೀಸರು ಪರಿಶೀಲನೆ ನಡೆಸಿದಾಗ ಯಾವುದೇ ಸ್ಛೋಟಕ ಪತ್ತೆಯಾಗಿಲ್ಲ.
ಘಟಕದಲ್ಲಿ ಕಾನೂನು ಮತ್ತು ಪರಿವೀಕ್ಷಣಾಧಿಕಾರಿ ಚಂದ್ರಕುಮಾರ್ ನೀಡಿದ ದೂರಿನನ್ವಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಮುಂದಿನ ಕ್ರಮ ಕೈಗೊಂಡಿದ್ದಾರೆ.





