ಅಪರಾಧ

ಹುಬ್ಬಳ್ಳಿ: ಪ್ರೀತಿ ನಿರಾಕರಿಸಿದ ಯುವತಿಯ ಬರ್ಬರ ಹತ್ಯೆ; ಆರೋಪಿ ಪರಾರಿ

ಹುಬ್ಬಳ್ಳಿ: ನೇಹಾ ಹಿರೇಮಠ ಕೊಲೆ ಪ್ರಕರಣದ ಕಹಿ ನೆನಪು ಮಾಸುವ ಮುನ್ನವೇ ಅಂತಹದ್ದೇ ಮತ್ತೊಂದು ಭೀಕರ ಹತ್ಯೆಗೆ ಹುಬ್ಬಳ್ಳಿ ಸಾಕ್ಷಿಯಾಗಿದೆ. ಇಲ್ಲಿನ ಬೆಂಡಿಗೇರಿ ಪೊಲೀಸ್‌ ಠಾಣೆ ವ್ಯಾಪ್ತಿಯ ವೀರಾಪುರ ಓಣಿಯಲ್ಲಿ ಅಂಜಲಿ ಅಂಬಿಗೇರ ಎಂಬ ಯುವತಿಯನ್ನು ಪ್ರೀತಿ ನಿರಾಕರಿಸಿದ ಕಾರಣಕ್ಕೆ ವಿಶ್ವ ಅಲಿಯಾಸ್ ಗಿರೀಶ್‌ ಎಂಬಾತ ಬರ್ಬರವಾಗಿ ಹತ್ಯೆ ಮಾಡಿದ್ದಾನೆ.

ಇಂದು ( ಮೇ 15 ) ನಸುಕಿನ ಜಾವ ನಿದ್ರೆಯಲ್ಲಿದ್ದ ಅಂಜಲಿಯನ್ನು ವಿಶ್ವ ಎಂಬ ಆರೋಪಿ ಬೆಳಗ್ಗೆ 5.30ರ ಸಮಯಕ್ಕೆ ಮಲಗಿದ್ದಲ್ಲೇ ಚೂರಿಯಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿದ್ದಾನೆ. ಮನೆಯವರು ತಡೆಯಲು ಮುಂದಾದರೂ ಕೊಲೆ ಮಾಡಿ ಅಲ್ಲಿಂದ ಪರಾರಿಯಾಗಿ ಸದ್ಯ ತಲೆ ಮರೆಸಿಕೊಂಡಿದ್ದಾನೆ. ಇನ್ನು ವಿಶ್ವ ಅಂಜಲಿಯನ್ನು ಪ್ರೀತಿಸುತ್ತಿದ್ದ, ಆದರೆ ಅಂಜಲಿ ಆತನ ಪ್ರೀತಿಯನ್ನು ನಿರಾಕರಿಸಿದ್ದಳು ಎನ್ನಲಾಗಿದೆ.

ಈ ಹಿಂದೆ ಅಂಜಲಿಯನ್ನು ಮೈಸೂರಿಗೆ ಬರುವಂತೆ ಧಮ್ಕಿ ಹಾಕಿದ್ದ ವಿಶ್ವ ಒಂದುವೇಳೆ ಬಾರದೇ ಇದ್ದರೆ ನೇಹಾ ಹಿರೇಮಠ್‌ ಮಾದರಿಯಲ್ಲೇ ನಿನ್ನನ್ನೂ ಹತ್ಯೆ ಮಾಡುತ್ತೇನೆ ಎಂದು ಬೆದರಿಕೆ ಹಾಕಿದ್ದ ಎನ್ನಲಾಗಿದೆ. ವಿಶ್ವ ವಿರುದ್ಧ ಹಲವು ಕಳ್ಳತನಗಳಲ್ಲಿ ಶಾಮೀಲಾದ ಪ್ರಕರಣಗಳಿವೆ.

ಇನ್ನು ವಿಶ್ವ ಕೊಲೆ ಬೆದರಿಕೆ ಹಾಕಿರುವ ವಿಚಾರವನ್ನು ಅಂಜಲಿಯ ಅಜ್ಜಿ ಗಂಗಮ್ಮ ಪೊಲೀಸರ ಗಮನಕ್ಕೆ ತಂದಿದ್ದರು. ಆದರೆ ಇದನ್ನು ಗಂಭೀರವಾಗಿ ಪರಿಗಣಿಸದ ಪೊಲೀಸರು ಇದೆಲ್ಲಾ ಮೂಢನಂಬಿಕೆ ಎಂದು ಹೇಳಿದ್ದರು.

 

ಶ್ರೀನಿವಾಸ ಎ

ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ನನ್ನೂರು. ಡಿ ಬನುಮಯ್ಯ ಕಾಲೇಜಿನಲ್ಲಿ ಪದವಿ ಮುಗಿಸಿದ ನಾನು ಕಳೆದ ನಾಲ್ಕು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ತೊಡಗಿಸಿಕೊಂಡಿದ್ದೇನೆ. ಒನ್‌ಇಂಡಿಯಾ ಕನ್ನಡದಲ್ಲಿ ಸೋಷಿಯಲ್‌ ಮೀಡಿಯಾ ಎಕ್ಸಿಕ್ಯೂಟಿವ್‌ ಆಗಿ ಕೆಲಸ ಆರಂಭಿಸಿ ಮೈಖೇಲ್‌ ಕನ್ನಡ ಹಾಗೂ ಕನ್ನಡ ಫಿಲ್ಮಿಬೀಟ್‌ನಲ್ಲಿ ಮೂರು ವರ್ಷಗಳ ಕಾಲ ಸಬ್‌ಎಡಿಟರ್‌ ಆಗಿ ಕೆಲಸ ನಿರ್ವಹಿಸಿದ್ದೇನೆ. ಪ್ರಸ್ತುತ ಆಂದೋಲನ ದಿನಪತ್ರಿಕೆಯ ಡಿಜಿಟಲ್‌ ಟೀಮ್‌ ಲೀಡ್‌ ಆಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಕ್ರೀಡೆ ಹಾಗೂ ಸಿನಿಮಾ ನನ್ನ ಆಸಕ್ತಿ ಕ್ಷೇತ್ರಗಳಾಗಿದ್ದು, ಪ್ರವಾಸ ಮತ್ತು ಫೋಟೋಗ್ರಫಿ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಹನೂರು: ತಾಲ್ಲೂಕಿನ ಪ್ರತಿ ಗ್ರಾಮಗಳಿಗೂ ಬಸ್‌ ಸೌಲಭ್ಯ ಕಲ್ಪಿಸಲು ಡಿಪೋ ನಿರ್ಮಾಣ: ಶಾಸಕ ಎಂ.ಆರ್.‌ಮಂಜುನಾಥ್‌

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಪ್ರತಿ ಗ್ರಾಮಗಳಿಗೂ ಕೆಎಸ್‌ಆರ್‌ಟಿಸಿ ಸೌಲಭ್ಯ ಕಲ್ಪಿಸಲು ತಾಲೂಕು ಕೇಂದ್ರದಲ್ಲಿ…

9 hours ago

ಶ್ರೀರಂಗಪಟ್ಟಣ: ವಿದ್ಯುತ್ ಸ್ಪರ್ಶದಿಂದ ಕರ್ತವ್ಯ ನಿರತ ಲೈನ್‌ಮ್ಯಾನ್ ಸಾವು

‌ಶ್ರೀರಂಗಪಟ್ಟಣ: ವಿದ್ಯುತ್‌ ಸ್ಪರ್ಶದಿಂದ ಕರ್ತವ್ಯ ನಿರತ ಲೈನ್‌ಮ್ಯಾನ್‌ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಹೆಬ್ಬಾಡಿ ಗ್ರಾಮದಲ್ಲಿ ನಡೆದಿದೆ.…

9 hours ago

ರಾಜ್ಯದ ಹಲವೆಡೆ ಭಾರೀ ಗಾಳಿ ಮಳೆ: ಜನಜೀವನ ಅಸ್ತವ್ಯಸ್ತ

ಬೆಂಗಳೂರು: ರಾಜ್ಯದ ಹಲವೆಡೆ ಇಂದು ಧಾರಾಕಾರ ಮಳೆಯಾಗಿದ್ದು, ಭಾರೀ ಅವಾಂತರ ಸೃಷ್ಟಿ ಮಾಡಿದೆ. ಚಿಕ್ಕಮಗಳೂರು, ಶಿವಮೊಗ್ಗ ಸೇರಿದಂತೆ ರಾಜ್ಯದ ಹಲವೆಡೆ…

9 hours ago

ಹನೂರು: 153 ದಿನಗಳಿಂದ ರೈತರು ನಡೆಸುತ್ತಿದ್ದ ಅಹೋರಾತ್ರಿ ಧರಣಿ ಅಂತ್ಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಾರ್ಟಳ್ಳಿ, ಕೌದಳ್ಳಿ, ಶೆಟ್ಟಳ್ಳಿ, ಕುರಟ್ಟಿ ಹೊಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ…

10 hours ago

ಮೈಸೂರಿನಲ್ಲಿ ಅವೈಜ್ಞಾನಿಕ ಟ್ರಾಫಿಕ್‌ ಸಿಗ್ನಲ್‌ ಆರೋಪ: ಸಚಿವ ಮಹದೇವಪ್ಪ ಪ್ರತಿಕ್ರಿಯೆ

ಮೈಸೂರು: ಅರಮನೆಗಳ ನಗರಿ ಮೈಸೂರಿನಲ್ಲಿ ಅವೈಜ್ಞಾನಿಕವಾಗಿ ಟ್ರಾಫಿಕ್‌ ಸಿಗ್ನಲ್‌ ಅಳವಡಿಸಲಾಗಿದೆ ಎಂದು ಸಾರ್ವಜನಿಕರು ಕಿಡಿಕಾರುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಮಹದೇವಪ್ಪ…

10 hours ago

ದೀದಿ ಸರ್ಕಾರದ ವಿರುದ್ಧ ಅಮಿತ್‌ ಶಾ ಚಾರ್ಜ್‌ಶೀಟ್‌ ರಿಲೀಸ್‌

ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ದಿನಗಣನೆ ಶುರುವಾಗಿರುವ ಹಿನ್ನೆಲೆಯಲ್ಲಿ ಸಿಎಂ ಮಮತಾ ಬ್ಯಾನರ್ಜಿ ವಿರುದ್ಧ ಕೇಂದ್ರ ಗೃಹ ಸಚಿವ…

10 hours ago