ಹಾಸನ್: ಕೆಎಸ್‌ಆರ್‌ಟಿಸಿ ಬಸ್ ಹಾಗೂ ಬೈಕ್ ಡಿಕ್ಕಿಯಾಗಿದ್ದು, ಈ ಡಿಕ್ಕಿಯಿಂದಾಗಿ ಬೈಕ್ ಹೊತ್ತಿ ಹುರಿದ ಪರಿಣಾಮ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಮೃತ ಪಟ್ಟಿದ್ದಾರೆ.
ಈ ಘಟನೆ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಬೇಡಿಗಹಳ್ಳಿ ಸರ್ಕಲ್ ಬಳಿ ಸಂಭವಿಸಿದೆ. ಬೆಂಗಳೂರು ಮಾರ್ಗದಿಂದ ಬರುತ್ತಿದ್ದ ಬೈಕ್‌ಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ರಸ್ತೆಯಲ್ಲಿಯೇ ಬಸ್ ಹೊತ್ತಿ ಉರಿದಿದೆ.
ಬಸ್ ಹೊತ್ತಿ ಉರಿಯುತ್ತಿದ್ದಂತೆ ಚಾಲಕ ಬಸ್‌ನ್ನು ರಸ್ತೆಲ್ಲಿಯೇ ನಿಲ್ಲಿಸಿದ್ದಾನೆ. ಬಳಿಕ ಪ್ರಯಾಣಿಕರೆಲ್ಲರೂ ಬಸ್‌ನಿಂದ ಕೆಳಗಿಳಿದಿದ್ದಾರೆ. ನಂತರ ಬಸ್ ಸಂಪೂರ್ಣವಾಗಿ ಹೊತ್ತಿ ಉರಿದಿದೆ. ಅದೃಷ್ಟವಷಾತ್ ಬಸ್‌ನಲ್ಲಿದ್ದ ಪ್ರಾಯಾಣಿಕರಿಗೆ ಯಾವುದೇ ಪ್ರಾಣಾಪಾಯ ಆಗಿಲ್ಲ. ಆದರೆ, ಬೈಕ್ ಸವಾರರಿಬ್ಬರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಸಿಬ್ಬಂದಿ ನಂದಿ ಆರಿಸಲುವ ಯಶಸ್ವಿಯಾಗಿದ್ದಾರೆ. ಈ ಸಂಬಂಧ ಚನ್ನರಾಯಪಟ್ಟಣ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.