ಅಪರಾಧ

ಕೆಎಸ್‌ಆರ್‌ಟಿಸಿ ಬಸ್‌-ಬೈಕ್‌ ಡಿಕ್ಕಿ: ಬೈಕ್‌ ಸವಾರರಿಬ್ಬರ ಮರಣ!

ಹಾಸನ್‌: ಕೆಎಸ್‌ಆರ್‌ಟಿಸಿ ಬಸ್‌ ಹಾಗೂ ಬೈಕ್‌ ಡಿಕ್ಕಿಯಾಗಿದ್ದು, ಈ ಡಿಕ್ಕಿಯಿಂದಾಗಿ ಬೈಕ್‌ ಹೊತ್ತಿ ಹುರಿದ ಪರಿಣಾಮ ಬೈಕ್‌ ಸವಾರರಿಬ್ಬರು ಸ್ಥಳದಲ್ಲೇ ಮೃತ ಪಟ್ಟಿದ್ದಾರೆ.

ಈ ಘಟನೆ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಬೇಡಿಗಹಳ್ಳಿ ಸರ್ಕಲ್‌ ಬಳಿ ಸಂಭವಿಸಿದೆ. ಬೆಂಗಳೂರು ಮಾರ್ಗದಿಂದ ಬರುತ್ತಿದ್ದ ಬೈಕ್‌ಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ರಸ್ತೆಯಲ್ಲಿಯೇ ಬಸ್‌ ಹೊತ್ತಿ ಉರಿದಿದೆ.

ಬಸ್‌ ಹೊತ್ತಿ ಉರಿಯುತ್ತಿದ್ದಂತೆ ಚಾಲಕ ಬಸ್‌ನ್ನು ರಸ್ತೆಲ್ಲಿಯೇ ನಿಲ್ಲಿಸಿದ್ದಾನೆ. ಬಳಿಕ ಪ್ರಯಾಣಿಕರೆಲ್ಲರೂ ಬಸ್‌ನಿಂದ ಕೆಳಗಿಳಿದಿದ್ದಾರೆ. ನಂತರ ಬಸ್‌ ಸಂಪೂರ್ಣವಾಗಿ ಹೊತ್ತಿ ಉರಿದಿದೆ. ಅದೃಷ್ಟವಷಾತ್‌ ಬಸ್‌ನಲ್ಲಿದ್ದ ಪ್ರಾಯಾಣಿಕರಿಗೆ ಯಾವುದೇ ಪ್ರಾಣಾಪಾಯ ಆಗಿಲ್ಲ. ಆದರೆ, ಬೈಕ್‌ ಸವಾರರಿಬ್ಬರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಸಿಬ್ಬಂದಿ ನಂದಿ ಆರಿಸಲುವ ಯಶಸ್ವಿಯಾಗಿದ್ದಾರೆ. ಈ ಸಂಬಂಧ ಚನ್ನರಾಯಪಟ್ಟಣ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಸಾಲ ಬಾಧೆ ; ದಂಪತಿ ಆತ್ಮಹತ್ಯೆ

ಮಂಡ್ಯ : ಸಾಲ ಬಾಧೆಯಿಂದ ದಂಪತಿಗಳಿಬ್ಬರು ಒಂದೇ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಬಿ.ಹಟ್ಟಣ ಗ್ರಾಮದಲ್ಲಿ…

6 hours ago

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

19 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

19 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

19 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

19 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

19 hours ago