ಮಳವಳ್ಲಿ: ಕಾರು ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಸಾವನ್ನಪ್ಪಿದ್ದ ಘಟನೆ ಹಲಗೂರು ಗ್ರಾಮದ ಗೌರಿ ಶಂಕರ ಕಲ್ಯಾಣ ಮಂಟಪದ ಬಳಿ ಭಾನುವಾರ ನಡೆದಿದೆ
ಕುಂಟನದೊಡ್ಡಿ ಗ್ರಾಮದ ನಿವಾಸಿ ಶಿವರಾಜ್ (25)ಮೃತಪಟ್ಟ ದುರ್ದೈವಿ. ಹಲಗೂರು ನಿಂದ ಮಳವಳ್ಳಿ ಕಡೆಗೆ ಬರುತ್ತಿದ್ದ ವೇಳೆ ಕಾರು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಬೈಕ್ ಸವಾರ ಸಾವನ್ನಪ್ಪಿದ್ದಾನೆ. ಶವವನ್ನು ಮಳವಳ್ಳಿ ಸಾರ್ವಜನಿಕ ಆಸ್ಪತ್ರೆಯ ಶವಗಾರಕ್ಕೆ ಸಾಗಿಸಲಾಗಿದೆ.
ಸ್ಥಳಕ್ಕೆ ಹಲಗೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದದರು. ಈ ಸಂಬಂಧ ಹಲಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.