Mysore
30
scattered clouds

Social Media

ಶನಿವಾರ, 22 ಮಾರ್ಚ್ 2025
Light
Dark

ಪತಿಯಿಂದಲೇ ಕಾಂಗ್ರೆಸ್ ಮುಖಂಡೆ, ಕಿರುತೆರೆ ನಟಿ ಕೊಲೆ

ಮೈಸೂರು: ಪತಿಯೇ ತನ್ನ ಪತ್ನಿಯನ್ನು ಭೀಕರವಾಗಿ ಕೊಲೆಗೈದ ಘಟನೆ ಜಿಲ್ಲೆಯ ಬನ್ನೂರಿನ ತುರಗನೂರಿನಲ್ಲಿ ನಡೆದಿದೆ. ಕಾಂಗ್ರೆಸ್ ಪಕ್ಷದಲ್ಲಿ ಸಕ್ರಿಯರಾಗಿದ್ದ ವಿದ್ಯಾ ಹತ್ಯೆಯಾಗಿದ್ದು, ಕೌಟುಂಬಿಕ ಕಲಹ ಹಿನ್ನೆಲೆ ಕೊಲೆ ನಡೆದಿದೆ ಎನ್ನಲಾಗಿದೆ.

ವಿದ್ಯಾ ಮೈಸೂರಿನ ಶ್ರೀರಾಂಪುರ ನಿವಾಸಿಯಾಗಿದ್ದು, ಎರಡು ಮಕ್ಕಳ ತಾಯಿ ಆಗಿದ್ದಾರೆ. ಕಾಂಗ್ರೆಸ್ ಪಕ್ಷದ ಮೈಸೂರು ನಗರ ಪ್ರಧಾನ ಕಾರ್ಯದರ್ಶಿಯಾಗಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಜವಾಬ್ದಾರಿ ನಿರ್ವಹಿಸಿದ ಅನುಭವ ಇರುವ ಅವರು ಹಲವಾರು ಕನ್ನಡ ಚಿತ್ರಗಳಲ್ಲಿ ನಟಿಸಿದ್ದಾರೆ.

ದಂಪತಿ ನಡುವೆ ಸಾಮರಸ್ಯ ಇರಲಿಲ್ಲವೆಂದು ಎನ್ನಲಾಗುತ್ತಿದ್ದು, ನಿನ್ನೆ ತಡರಾತ್ರಿಯಲ್ಲಿ ವಿದ್ಯಾ ಬನ್ನೂರಿನ ತುರಗನೂರಿನಲ್ಲಿದ್ದ ಪತಿ ಮನೆಗೆ ತೆರಳಿದಾಗ ದಂಪತಿ ನಡುವೆ ಮಾತಿಗೆ ಮಾತು ಬೆಳೆದು ಪರಿಸ್ಥಿತಿ ವಿಕೋಪಕ್ಕೆ ತಿರುಗಿದೆ. ಈ ವೇಳೆ ಪತ್ನಿ ತಲೆಗೆ ನಂದೀಶ್ ಹಲ್ಲೆ ನಡೆಸಿ ಹತ್ಯೆಗೈದು ಪರಾರಿಯಾಗಿದ್ದಾನೆ. ಸ್ಥಳಕ್ಕೆ ಎಸ್‌ಪಿ ಸೀಮಾ ಲಾಟ್ಕರ್, ಹೆಚ್ಚುವರಿ ಎಸ್‌ಪಿ ನಂದಿನಿರವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೊಲೆ ಮಾಡಿದ ಪತಿ ನಂದೀಶ್ ಬಂಧನಕ್ಕೆ
ಬನ್ನೂರು ಪೊಲೀಸರು ಬಲೆ ಬೀಸಿದ್ದಾರೆ.

Tags: