ಮೈಸೂರು: ಪತಿಯೇ ತನ್ನ ಪತ್ನಿಯನ್ನು ಭೀಕರವಾಗಿ ಕೊಲೆಗೈದ ಘಟನೆ ಜಿಲ್ಲೆಯ ಬನ್ನೂರಿನ ತುರಗನೂರಿನಲ್ಲಿ ನಡೆದಿದೆ. ಕಾಂಗ್ರೆಸ್ ಪಕ್ಷದಲ್ಲಿ ಸಕ್ರಿಯರಾಗಿದ್ದ ವಿದ್ಯಾ ಹತ್ಯೆಯಾಗಿದ್ದು, ಕೌಟುಂಬಿಕ ಕಲಹ ಹಿನ್ನೆಲೆ ಕೊಲೆ ನಡೆದಿದೆ ಎನ್ನಲಾಗಿದೆ.
ವಿದ್ಯಾ ಮೈಸೂರಿನ ಶ್ರೀರಾಂಪುರ ನಿವಾಸಿಯಾಗಿದ್ದು, ಎರಡು ಮಕ್ಕಳ ತಾಯಿ ಆಗಿದ್ದಾರೆ. ಕಾಂಗ್ರೆಸ್ ಪಕ್ಷದ ಮೈಸೂರು ನಗರ ಪ್ರಧಾನ ಕಾರ್ಯದರ್ಶಿಯಾಗಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಜವಾಬ್ದಾರಿ ನಿರ್ವಹಿಸಿದ ಅನುಭವ ಇರುವ ಅವರು ಹಲವಾರು ಕನ್ನಡ ಚಿತ್ರಗಳಲ್ಲಿ ನಟಿಸಿದ್ದಾರೆ.
ದಂಪತಿ ನಡುವೆ ಸಾಮರಸ್ಯ ಇರಲಿಲ್ಲವೆಂದು ಎನ್ನಲಾಗುತ್ತಿದ್ದು, ನಿನ್ನೆ ತಡರಾತ್ರಿಯಲ್ಲಿ ವಿದ್ಯಾ ಬನ್ನೂರಿನ ತುರಗನೂರಿನಲ್ಲಿದ್ದ ಪತಿ ಮನೆಗೆ ತೆರಳಿದಾಗ ದಂಪತಿ ನಡುವೆ ಮಾತಿಗೆ ಮಾತು ಬೆಳೆದು ಪರಿಸ್ಥಿತಿ ವಿಕೋಪಕ್ಕೆ ತಿರುಗಿದೆ. ಈ ವೇಳೆ ಪತ್ನಿ ತಲೆಗೆ ನಂದೀಶ್ ಹಲ್ಲೆ ನಡೆಸಿ ಹತ್ಯೆಗೈದು ಪರಾರಿಯಾಗಿದ್ದಾನೆ. ಸ್ಥಳಕ್ಕೆ ಎಸ್‌ಪಿ ಸೀಮಾ ಲಾಟ್ಕರ್, ಹೆಚ್ಚುವರಿ ಎಸ್‌ಪಿ ನಂದಿನಿರವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೊಲೆ ಮಾಡಿದ ಪತಿ ನಂದೀಶ್ ಬಂಧನಕ್ಕೆ
ಬನ್ನೂರು ಪೊಲೀಸರು ಬಲೆ ಬೀಸಿದ್ದಾರೆ.
ಸ್ವಾವಲಂಬನೆಗೆ ಸಹಕಾರಿಯಾದ ನಿಯೋಬೋಲ್ಟ್ ಸ್ಕೂಟರ್ ಗಾಲಿಕುರ್ಚಿ 2010ರ ಆಗಸ್ಟ್ ತಿಂಗಳಿನಲ್ಲಿ ನಾಗ್ಪುರದ ನಿವಾಸಿ ನಿತೀನ್‌ರ ಜನ್ಮ ದಿನಾಚರಣೆಯ ಸಂಭ್ರಮ ಆಚರಿಸಲು…
ನವೀನ್ ಡಿಸೋಜ ಮಡಿಕೇರಿ ಪ್ರಾದೇಶಿಕ ಸಾರಿಗೆ ಕಚೇರಿ ಅಧಿಕಾರಿಗಳ ಸಾಧನೆ ಜಿಲ್ಲೆಯಾದ್ಯಂತ ನಿರಂತರ ವ್ಯಾಪಕ ತಪಾಸಣಾ ಕ್ರಮ ಮಡಿಕೇರಿ: ಪ್ರಾದೇಶಿಕ…
ನಾಗರಹೊಳೆ ಅರಣ್ಯದ ಮಧ್ಯಭಾಗದಲ್ಲಿರುವ ದೇವಸ್ಥಾನಕ್ಕೆ ವಿವಿಧೆಡೆಯಿಂದ ಸಾವಿರಾರು ಮಂದಿ ಭೇಟಿ ಪಿರಿಯಾಪಟ್ಟಣ: ತಾಲ್ಲೂಕಿನ ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ಆನೆಚೌಕೂರು ಮೀಸಲು…
ಎಂ.ಗೂಳೀಪುರ ನಂದೀಶ್ ಕೆಸ್ತೂರು ಪ್ರೌಢಶಾಲೆಯ ಸುತ್ತುಗೋಡೆಯಲ್ಲಿ ಕನ್ನಡ ಸಾಹಿತಿಗಳ, ಸಾಧಕರ ಸೊಗಸಾದ ಚಿತ್ರಗಳ ಚಿತ್ತಾರ ಯಳಂದೂರು: ಶಾಲೆಯ ಸುತ್ತುಗೋಡೆಯಲ್ಲಿ ರಾರಾಜಿಸುತ್ತಿರುವ…
ಎಂ.ಬಿ.ರಂಗಸ್ವಾಮಿ ಮೂಗೂರಿನ ತ್ರಿಪುರ ಸುಂದರಿ ದೇಗುಲದ ನೂತನ ಕಲ್ಯಾಣಿಯಲ್ಲಿ ೪ ವರ್ಷಗಳಿಂದ ನಡೆಯದ ತೆಪ್ಪೋತ್ಸವ ಮೂಗೂರು: ಐತಿಹಾಸಿಕ ಹಿನ್ನೆಲೆಯುಳ್ಳ ಧಾರ್ಮಿಕ…