ಬೆಂಗಳೂರು: ಕ್ಲಾಸ್ ಟೆಸ್ಟ್ನಲ್ಲಿಕಾಪಿ ಹೊಡೆಯುವಾಗ ಸಿಕ್ಕಿಬಿದ್ದಿದ್ದು ತರಗತಿಯಿಂದ ಹೊರಗೆ ಕಳುಹಿಸಿದ ಕಾರಣಕ್ಕೆ ನೊಂದ ಎಸ್ಎಸ್ಎಲ್ಸಿ ವಿದ್ಯಾರ್ಥಿ ಅಪಾರ್ಟ್ಮೆಂಟ್ನ 14ನೇ ಮಹಡಿಯಿಂದ ಕೆಳಗಡೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಹೆಗಡೆ ನಗರದಲ್ಲಿ ಮಂಗಳವಾರ ನಡೆದಿದೆ. ಮೊಯಿನ್ ಖಾನ್ (16) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ.
ಮಂಗಳವಾರ ಶಾಲೆಯಲ್ಲಿ ಕ್ಲಾಸ್ಟೆಸ್ಟ್ ನಡೆದಿತ್ತು. ಈ ವೇಳೆ ವಿದ್ಯಾರ್ಥಿ ಮೊಯಿನ್ ಕಾಪಿ ಹೊಡೆಯುತ್ತಿದ್ದಾಗ ಟೀಚರ್ ಕೈಗೆ ಸಿಕ್ಕಿಬಿದ್ದಿದ್ದ. ಹೀಗಾಗಿ, ಆತನನ್ನು ತರಗತಿಯಿಂದ ಹೊರಗಡೆ ಕಳುಹಿಸಲಾಗಿತ್ತು. ಇದರಿಂದ ನೊಂದ ಮೊಯಿನ್ ಶಾಲೆಯಿಂದ ಹೊರಬಂದು ತನ್ನ ಸ್ನೇಹಿತನ ಮನೆಯಿದ್ದ ಅಪಾರ್ಟ್ಮೆಂಟ್ಗೆ ಬಂದು ಆತ್ಮಹತ್ಯೆ ಮಾಡಿಕೊಂಡಿರುವುದು ಪ್ರಾಥಮಿಕ ತನಿಖೆಯಲ್ಲಿ ಗೊತ್ತಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮೊಯಿನ್ ಖಾನ್ ಪೋಷಕರು, ಮೊಯಿನ್ಖಾನ್ ಸಾವಿಗೆ ಆತ ವ್ಯಾಸಂಗ ಮಾಡುತ್ತಿದ್ದ ಹೆಗಡೆ ನಗರ ಪಬ್ಲಿಕ್ ಸ್ಕೂಲ್ ಆಡಳಿತ ಮಂಡಳಿಯ ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿಸಿದ್ದಾರೆ.