ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಭಾರತೀಯ ಚುನಾವಣಾ ಆಯೋಗ ನಿಯಮ ಉಲ್ಲಂಘಿಸಿ ಪೋಸ್ಟರ್ ಒಂದನ್ನು ಬಿಜೆಪಿ ಪ್ರಕಟಿಸಿದೆ ಎಂದು ಆರೋಪಿಸಿ ಬೆಂಗಳೂರಿನ ಹೈಗ್ರೌಂಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಹಾಗೂ ಅಮಿತ್ ಮಾಳವೀಯ ವಿರುದ್ಧ ಪ್ರಕರಣ ದಾಖಲಾಗಿದೆ.
ಕಾಂಗ್ರೆಸ್‌ನಿಂದಾಗಿ ಎಸ್ಸಿ, ಎಸ್ಟಿ ಸಮುದಾಯಕ್ಕೆ ಸೇರಬೇಕಿರುವ ಅನುದಾನ ಮುಸ್ಲಿಂರಿಗೆ ಸೇರುತ್ತಿದೆ ಎಂಬ ಕಾಮಿಕ್ ವೀಡಿಯೋ ವೊಂದನ್ನು ರಾಜ್ಯ ಬಿಜೆಪಿ ತನ್ನ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿತ್ತು. ಅದರಲ್ಲಿ ರಾಹುಲ್ ಗಾಂಧಿ ಹಾಗೂ ಸಿದ್ದರಾಮಯ್ಯ ಅವರು ಎಂಬಂತೆ ಬಂಬಿಸಿರುವ ಚಿತ್ರದಲ್ಲಿ ಮೊಟ್ಟೆಗಳ ಮೇಲೆ ವಿವಿಧ ಸಮುದಾಯಗಳನ್ನು ಉಲ್ಲೇಖಿಸಿ ಹೋಲಿಕೆ ಮಾಡಿ ಪೋಸ್ಟರ್ ಹಂಚಿಕೊಂಡಿದೆ. ಇದು ಚುನಾವಣಾ ಆಯೋಗದ ನಿಯಮಕ್ಕೆ ಉಲ್ಲಂಘಿಸಿದ್ದು, ಈ ಮೂವರ ವಿರುದ್ಧ ಪ್ರಕರಣ ದಾಖಲಿಸುವಂತೆ ಕಾಂಗ್ರೆಸ್ ಮನವಿ ಮಾಡಿದೆ.