ಬೆಂಗಳೂರು: ಇಸಿಎ-ಪಿಎಂ ಆರ್ಥಿಕ ಸಲಹಾ ಮಂಡಳಿ ಬಿಡುಗಡೆಗೊಳಿಸಿದ್ದ ಧರ್ಮಾದಾರಿತ ಜನಸಂಖ್ಯೆ ಮಾಹಿತಿಯನ್ನು ತೋರಿಸುವ ವೇಳೆ ಮುಸ್ಲಿಮರ ಜನಸಂಖ್ಯೆ ತಿಳಿಸುವ ವೇಳೆ ಪಾಕಿಸ್ತಾನ ಧ್ವಜ ಬಳಿಸಿದ ಅರೋಪದಡಿ ಖಾಸಗಿ ಸುದ್ದಿ ವಾಹಿನಿ ಸುವರ್ಣ ನ್ಯೂಸ್ ಹಾಗೂ ನಿರೂಪಕ್ ಅಜಿತ್ ಹನುಮಕ್ಕನವರ್ ಮೇಲೆ ಎಫ್‌ಐಆರ್ ದಾಖಲಾಗಿದೆ.
ಆರೋಪಿ ವಿರುದ್ಧ ಐಪಿಸಿ ಸೆಕ್ಷನ್ 505(2) ದ್ವೇಷವನ್ನು ಉತ್ತೇಜಿಸಲು ಪ್ರಯತ್ನಿಸಿದ ಆರೋಪದಡಿ ಪ್ರಕರಣ ದಾಖಲಿಸಲಾಗಿದೆ.
ಪ್ರಧಾನ ಮಂತ್ರಿ ಆರ್ಥಿಕ ಸಲಹಾ ಮಂಡಳಿ ಧರ್ಮಾದಾರಿತ ಜನಸಂಖ್ಯಾ ವರದಿಯನ್ನು ಬಿಡುಗಡೆ ಮಾಡಿದ್ದು, ಈ ಸುದ್ದಿಯನ್ನು ಭಿತ್ತರಿಸುವಾಗ ಕನ್ನಡದ ಖಾಸಗಿ ಸುದ್ದಿ ವಾಹಿನಿ ಸುವರ್ಣ ನ್ಯೂಸ್ ತನ್ನ ಕಾರ್ಯಕ್ರಮದಲ್ಲಿ ಹಿಂದೂ ಜನಸಂಖ್ಯೆಯನ್ನು ಗುರುತಿಸಲು ಭಾರತ ಧ್ವಜ ಹಾಗೂ ಮುಸ್ಲಿಮರ ಜನಸಂಖ್ಯೆ ತಿಳಿಸಲು ಪಾಕಿಸ್ತಾನ ಧ್ವಜ ಬಳಸಿತ್ತು. ಈ ಕಾರ್ಯಕ್ರಮವನ್ನು ಅಜಿತ್ ಹನುಮಕ್ಕನವರ್ ನಿರ್ವಹಿಸುತ್ತಿದ್ದರು.
ಈ ವರದಿಯನ್ನು ಆಲ್ಟ್ ನ್ಯೂಸ್ ಸಹ ಸಂಪಾದಕ ಮಹಮ್ಮದ್ ಝುಬೇರ್ ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂಡು ಆಕ್ರೋಶ ಹೊರ ಹಾಕಿದ್ದರು.
ಈ ಬಗ್ಗೆ ಎಲ್ಲೆಡೆ ವ್ಯಾಪಕವಾಗಿ ಟೀಕೆಗಳು ವ್ಯಕ್ತವಾಗತ್ತಿರುವ ಬೆನ್ನಲ್ಲೇ ಚಾನೆಲ್, “ಇದೊಂದು ದುರುದ್ದೇಶ ಇಲ್ಲದ, ಕಣ್ತಪ್ಪಿನಿಂದ ಆದ ಅಚಾತುರ್ಯವಾಗಿದ್ದು, ಈ ಪ್ರಮಾದಕ್ಕೆ ಏಷ್ಯಾನೆಟ್ ಸುವರ್ಣ ನ್ಯೂಸ್ ವಿಷಾದ ವ್ಯಕ್ತಪಡಿಸುತ್ತದೆ” ಎಂದು ಸ್ಪಷ್ಟನೆ ನೀಡಿದ್ದರು. ಆಗಿದ್ದರೂ ಅವರ ಮೇಲೆ ಪ್ರಕರಣ ದಾಖಲಾಗಿದೆ.
ಮೈಸೂರು : ಸಾಂಸ್ಕ ತಿಕ ನಗರಿಯ ಜನತೆಯ ಅನುಕೂಲಕ್ಕಾಗಿ ಮೈಸೂರಿನಿಂದ ಮುತ್ತಿನ ನಗರಿ ಹೈದರಾಬಾದ್‌ಗೆ ಮತ್ತೊಂದು ವಿಮಾನ ಸಂಚಾರ ಅತಿ…
ನವದೆಹಲಿ : ಲೋಕಸಭೆಯಲ್ಲಿ ಮಹಿಳೆಯರಿಗೆ ಶೇ.33 ಮೀಸಲಾತಿ ನೀಡುವ ಮಹಿಳಾ ಮೀಸಲಾತಿ ತಿದ್ದುಪಡಿ ಮಸೂದೆ (Women’s Reservation Bill) ಭಾರೀ…
ಟೆಹ್ರಾರ್ : ಇರಾನ್ ಹೊರ್ಮುಜ್ ಜಲಸಂಧಿಯಲ್ಲಿ ವಾಣಿಜ್ಯ ಹಡಗುಗಳ ಸಂಚಾರಕ್ಕೆ ಪೂರ್ಣ ಮುಕ್ತಿ ನೀಡಿದೆ ಎಂದು ಮಹತ್ವದ ಘೋಷಣೆ ಮಾಡಿದೆ.…
ಹನೂರು : ಕುಡಿಯುವ ನೀರು, ಇ-ಸ್ವತ್ತು, ಪೋಡಿ ಹಾಗೂ ಹೆಚ್ಚುವರಿ ಬಸ್ ವ್ಯವಸ್ಥೆ ಕಲ್ಪಿಸುವಂತೆ ಸೇರಿ ಹಲವು ಬೇಡಿಕೆಗಳನ್ನು ಈಡೇರಿಸುವಂತೆ…
ಮೈಸೂರು : ನಗರದಲ್ಲಿರುವ ರೈಲ್ವೇ ಗೂಡ್ಸ್ ಶೆಡನ್ನು ಪಾಂಡವಪುರಕ್ಕೆ ಸ್ಥಳಾಂತರಿಸಲು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹಾಗೂ ವಿ.ಸೋಮಣ್ಣ ಅವರು ಹುನ್ನಾರ…
ಕಾನೂನು ಸಚಿವಾಲಯದಿಂದ ಅಧಿಸೂಚನೆ ಪ್ರಕಟ ನವದೆಹಲಿ: ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ.33ರಷ್ಟು ಸ್ಥಾನ ಒದಗಿಸುವ ಮಹಿಳಾ ಮೀಸಲಾತಿ…