ಅಪರಾಧ

ಮೈಸೂರು | ಗಣೇಶ ವಿಸರ್ಜನೆ ವೇಳೆ ಪಟಾಕಿ ಸಿಡಿತ : ವ್ಯಕ್ತಿ ಕಣ್ಣಿಗೆ ಗಾಯ

ಮೈಸೂರು : ಗಣೇಶ ಮೂರ್ತಿಗಳ ಸಾಮೂಹಿಕ ವಿಸರ್ಜನಾ ಮೆರವಣಿಗೆ ವೇಳೆ ಪಟಾಕಿ ಸಿಡಿಸುತ್ತಿದ್ದ ವ್ಯಕ್ತಿಯೊಬ್ಬರ ಕಣ್ಣಿಗೆ ಪಟಾಕಿ ಹಾರಿದ ಪರಿಣಾಮ ಅವರು ತೀವ್ರ ಗಾಯವಾಗಿರುವ ಘಟನೆ ನಡೆದಿದೆ.

ನಗರದ ಶ್ರೀರಾಮ ಸೇನೆ ಮೈಸೂರು ಜಿಲ್ಲಾಧ್ಯಕ್ಷ ಸಂಜಯ್(೫೨) ಗಾಯಗೊಂಡವರು. ಮೈಸೂರು ಸಾರ್ವಜನಿಕ ಗಣೇಶ ವಿಸರ್ಜನಾ ಸಮಿತಿಯಿಂದ ಭಾನುವಾರ ಹಮ್ಮಿಕೊಂಡಿದ್ದ ಬೃಹತ್ ಮೆರವಣಿಗೆಯು
ನಗರದ ಡಿ.ದೇವರಾಜ ಅರಸು ರಸ್ತೆಯಲ್ಲಿ ಸಾಗುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ.

ಇದೇ ರಸ್ತೆಯಲ್ಲಿರುವ ಆಂಜನೇಯ ಸ್ವಾಮಿ ದೇವಸ್ಥಾನ ಮುಂಭಾಗ ಇವರು ಪಟಾಕಿ ಸಿಡಿಸುತ್ತಿದ್ದಾಗ, ಬೆಂಕಿಯ ಕಿಡಿ ತಗುಲಿದ ಪರಿಣಾಮ ಇವರ ಬಲಗಣ್ಣಿಗೆ ತೀವ್ರ ಗಾಯವಾಗಿದೆ. ಸ್ಥಳದಲ್ಲಿದ್ದ ಪೊಲೀಸರು, ಕೂಡಲೇ ಆಟೋ ವ್ಯವಸ್ಥೆ ಮಾಡಿ ಅವರನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ಕಳುಹಿಸಿಕೊಟ್ಟರು.

ಪ್ರಾಥಮಿಕ ಚಿಕಿತ್ಸೆ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಬೆಂಗಳೂರಿನ ಮಿಂಟೋ ಕಣ್ಣಿನ ಆಸ್ಪತ್ರೆಗೆ ಕರೆ ದೊಯ್ಯಲಾಯಿತು. ಇದೀಗ ಅವರು ಚೇತರಿಸಿಕೊಳ್ಳುತ್ತಿದ್ದಾರೆ. ಮಾಜಿ ಸಂಸದ ಪ್ರತಾಪ್‌ಸಿಂಹ ಅವರು ಗಾಯಾಳುವನ್ನು ಬೇಟಿ ಮಾಡಿ ಆರೋಗ್ಯ ವಿಚಾರಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ‘ಪ್ರತಾಪ’ಕ್ಕೆ ಸವಾಲು ಈ ನೀಲಿ

‘ಪ್ರತಾಪ’ಕ್ಕೆ ಸವಾಲು ಈ ನೀಲಿ ಇದು ನಮ್ಮ ಸೂರು ಆಕಾಶದ ನೀಲಿ ಇದು ನನ್ನವ್ವ ಸುತ್ತಿಕೊಂಡ ಸೀರೆಯ ನೀಲಿ ನನಗೆ…

50 mins ago

ಓದುಗರ ಪತ್ರ: ಟೆಲಿಕಾಂ ಕಂಪೆನಿಗಳ ಹಗಲು ದರೋಡೆ ನಿಯಂತ್ರಿಸಿ

ಪ್ರಸ್ತುತ ಆಂಡ್ರಾಯ್ಡ ಮೊಬೈಲ್‌ನಿಂದಲೇ ದಿನನಿತ್ಯದ ಕೆಲಸಗಳು ಆರಂಭವಾಗಿ ಅವುಗಳಿಂದಲೇ ದಿನ ಮುಕ್ತಾಯ ಅನ್ನುವಷ್ಟರ ಮಟ್ಟಿಗೆ ಅನಿವಾರ್ಯತೆ ನಿರ್ಮಾಣವಾಗಿದೆ. ಮೊಬೈಲ್ ಇಲ್ಲದೆ…

52 mins ago

ಓದುಗರ ಪತ್ರ: ಸರ್ಕಾರಿ ಕಚೇರಿಗಳ ಅನಗತ್ಯ ಬಾಡಿಗೆ ವೆಚ್ಚಗಳನ್ನು ತಪ್ಪಿಸಿ

ಹೆಚ್. ಡಿ. ಕೋಟೆ ತಾಲ್ಲೂಕು ಕೇಂದ್ರ ಸ್ಥಳದಲ್ಲಿ ಕೆಲವು ಸರ್ಕಾರಿ ಇಲಾಖೆಗಳು ಹಾಗೂ ಹಾಸ್ಟೆಲ್‌ಗಳು ಖಾಸಗಿ ಕಟ್ಟಡಗಳಲ್ಲಿ ಕಾರ್ಯನಿರ್ವಣೆ ಮಾಡುತ್ತಿವೆ.…

54 mins ago

ರಂಗದ ಮೇಲೆ ಜಿನುಗಿದ ಜೀವಸೆಲೆ

ಜಿ.ಪಿ.ಬಸವರಾಜು ಯಾಂತ್ರಿಕ ಬದುಕಿನ ಹಲವು ಪ್ರಶ್ನೆಗಳಿಗೆ ಉತ್ತರಗಳನ್ನು ತೋರಿಸುವ ನಾಟಕ ‘ಅಮೃತಬಳ್ಳಿ ಕಷಾಯ’ ಮಾಯಾ ನಗರಿಯಂತೆ ಕಾಣುವ ಮುಂಬೈ ನಗರ…

57 mins ago

ಸಮವಸ್ತ್ರದ ಆತ್ಮಸಾಕ್ಷಿ ಮತ್ತು ಮೂರು ಪ್ರಜ್ಞೆಗಳು

ಎಸ್.ಎಲ್.ಚನ್ನಬಸವಣ್ಣ , ಉಪನಿರ್ದೇಶಕರು ಕರ್ನಾಟಕ ಪೊಲೀಸ್‌ ಅಕಾಡೆಮಿ ಮೈಸೂರು  ಸದಾ ಜಾಗೃತವಾಗಿರುವ ಸಮಯಪಾಲನೆಯ ವಿವೇಚನೆ ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು…

1 hour ago

ದಸರಾ ಕಾರ್ಯಕ್ರಮಕ್ಕೆ ಸವಾಲಾದ ಬಸ್ ಸೇವೆ

ಕೆ.ಬಿ.ರಮೇಶನಾಯಕ ಉತ್ತನಹಳ್ಳಿ ಗ್ರಾಮದ ಬಳಿ ಯುವ ದಸರಾ, ಸಾತಗಳ್ಳಿ ವಿಟಿಯು ಸಮೀಪ ಕಂಬಳ ಕ್ರೀಡೆ ಆಯೋಜನೆ; ವೀಕ್ಷಕರ ಬೇಡಿಕೆಗೆ ತಕ್ಕಂತೆ…

1 hour ago