ಮೈಸೂರು: ಕೋವಿಡ್ ಸಮಯದಲ್ಲಿ ನಂಜನಗೂಡು ತಾಲೂಕು ಆರೋಗ್ಯಾಧಿಕಾರಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿದ್ದ ಪ್ರಶಾಂತ್ ಕುಮಾರ್ ಮಿಶ್ರಾ ಅವರಿಗೆ ನ್ಯಾಯಾಲಯ ಕ್ಲೀನ್ ಚಿಟ್ ನೀಡಿದೆ.
ನಂಜನಗೂಡಿನ ಟಿಎಚ್‌ಓ ನಾಗೇಂದ್ರ ಅವರು ಕೋವಿಡ್ ವೇಳೆಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದರು. ಇವರು ಆತ್ಮಹತ್ಯೆಗೆ ಶರಣಾಗಲು ಜಿಪಂ ಸಿಇಒ ಕಾರಣ ಎಂಬ ಆರೋಪ ಬಲವಾಗಿ ಕೇಳಿಬಂದಿತ್ತು. ಸಿಇಒ ಪ್ರಶಾಂತ್ ಮಿಶ್ರಾ ಅವರ ಕಿರುಕುಳದಿಂದಲೇ ನಾಗೇಂದ್ರ ಅವರು ಮರಣ ಹೊಂದಿದ್ದಾರೆ ಎಂದು ಅವರ ಕುಟುಂಬ ಆರೋಪಿಸಿತ್ತು.
ಈ ಹಿನ್ನಲೆ ಮಿಶ್ರಾ ವಿರುದ್ಧ ಆತ್ಮಹತ್ಯೆ ಪ್ರಚೋದನೆ ಹಾಗೂ ಕಿರಿಕುಳ ಸಂಬಂಧ ಮೈಸೂರಿನ ಆಲನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕಣ ದಾಖಲಾಗಿತ್ತು.
ಈ ಪ್ರಕರಣ ತನಿಖೆ ನಡೆಸಿದ ಪೊಲೀಸರು ಬಿ-ರಿಪೋರ್ಟ್ ನೀಡಿದ್ದರು. ಅದರಲ್ಲಿ ಪ್ರಶಾಂತ್ ಮಿಶ್ರಾ ಅವರ ಪರವಾಗಿದ್ದರಿಂದ ಈ ವರದಿ ವಿರೋಧಿಸಿ ನಾಗೇಂದ್ರ ಅವರ ಮಡದಿ ನ್ಯಾಯಾಲಯದಲ್ಲಿ ಪ್ರೊಟೆಸ್ಟ್ ಅರ್ಜಿ ಸಲ್ಲಿಸಿದ್ದರು.
ಇನ್ನು ಈ ಅರ್ಜಿ ವಿಚಾರಣೆ ನಡೆಸಿದ ನಗರದ ಮೂರನೇ ಸಿವಿಲ್ ನ್ಯಾಯಲಯ, ಪೊಲೀಸರ ಬಿ-ರಿಪೋರ್ಟ್‌ನ್ನು ಎತ್ತಿ ಹಿಡಿಯಿತು ಹಾಗೂ ಪ್ರಶಾಂತ್ ಮಿಶ್ರಾ ಅವರ ಮೇಲಿನ ಆರೋಪಗಳು ನಿರಾಧಾರ ಎಂದು ಕೋರ್ಟ್ ಹೇಳಿತು.
ಎಚ್.ಡಿ.ಕೋಟೆ : ತಾಲೂಕಿನ ಚೌಡಹಳ್ಳಿ ಗ್ರಾಮದ ಪಕ್ಕದಲ್ಲೇ ಇರುವ ಜಮೀನೊಂದರಲ್ಲಿ ಹಸುವಿನ ಮೇಲೆ ದಾಳಿ ನಡೆಸಿರುವ ಹುಲಿ ಹಸುವನ್ನು ಕೊಂದು…
ಮೈಸೂರು : ಮೈಸೂರು ಮೂಲದ ಗೃಹಿಣಿಯೊಬ್ಬಳು ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಉತ್ತರ ಕರ್ನಾಟಕ ಮೂಲದ ಪೊಲೀಸ್ ಕಾನ್ಸ್ ಟೇಬಲ್ ನೊಂದಿಗೆ…
ಮೈಸೂರು : ಸಾಂಸ್ಕೃತಿಕ ರಾಜಧಾನಿ ಮೈಸೂರಿನಲ್ಲಿ ಹನುಮ ಜಯಂತ್ಯೋತ್ಸವ ಸಮಿತಿ ವತಿಯಿಂದ ಶನಿವಾರ ನಡೆದ ಏಳನೇ ವರ್ಷದ ಹನುಮೋತ್ಸವ ಮೆರವಣಿಗೆಯು…
ಮನೆಯಲ್ಲಿ ರಾತ್ರಿಯಿಡೀ ಕೂಡಿಹಾಕಿ ಹಲ್ಲೆ ನಡೆಸಿದ ಮೂವರು ಆರೋಪಿಗಳು; ಹನಿಟ್ರ್ಯಾಪ್ ಶಂಕೆ, ತನಿಖೆ ಚುರುಕು ಮಡಿಕೇರಿ : ಸಾಮಾಜಿಕ ಜಾಲತಾಣದಲ್ಲಿ…
ಮೈಸೂರು : ನಗರದಲ್ಲಿ ಯುನಿಟಿ ಮಾಲ್ ನಿರ್ಮಿಸಲು ನಮ್ಮ ವಿರೋಧ ಇಲ್ಲ. ಆದರೆ, ಸರ್ಕಾರ ಗೊಂದಲವಿಲ್ಲದ ಸ್ಥಳ ನೀಡದೆ ದಿಕ್ಕು…
ಮೈಸೂರು : ಚುಮು ಚುಮು ಚಳಿಯ ನಡುವೆ ನಗರದ ನಂಜರಾಜ ಬಹದ್ದೂರ್ ಛತ್ರದಲ್ಲಿ ಗ್ರಾಹಕರ ಆಕರ್ಷಿಸುವ ಹಾಗೂ ಗ್ರಾಮೀಣ ಸೊಗಡಿನ…