ವಿಷ ಸೇವಿಸಿ ಗ್ರಾಪಂ ಸದಸ್ಯೆ ಆತ್ಮಹತ್ಯೆ

ಮಡಿಕೇರಿ: ವಿರಾಜಪೇಟೆ ತಾಲ್ಲೂಕಿನ ಅರ್ವತೊಕ್ಲು ಗ್ರಾಮ ಪಂಚಾಯಿತಿ ಸದಸ್ಯೆಯೊಬ್ಬರು ಆತ್ಮಹತ್ಯೆಗೆ ಶರಣಾದ ಘಟನೆ ಕೈಕೇರಿಯಲ್ಲಿ ನಡೆದಿದೆ.

ಎಚ್.ಎಸ್.ರಮ್ಯಾ(೨೮) ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡವರು.

ನಾಲ್ಕು ದಿನಗಳ ಹಿಂದೆ ವಿಷ ಸೇವಿಸಿದ್ದ ಗ್ರಾಪಂ ಸದಸ್ಯೆ ರಮ್ಯಾ ಹೆಚ್ಚಿನ ಚಿಕಿತ್ಸೆಗೆ ಮೈಸೂರು ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಪಡೆದು ಮನೆಗೆ ಮರಳಿದ್ದ ರಮ್ಯಾಗೆ ಇದ್ದಕ್ಕಿದ್ದಂತೆ ಹೊಟ್ಟೆನೋವು ಉಲ್ಬಣಿಸಿ ಕೊನೆಯುಸಿರೆಳೆದಿದ್ದಾರೆ. ಆತ್ಮಹತ್ಯೆಗೆ ಸಂಸಾರಿಕ ಕಲಹವೇ ಕಾರಣ ಎಂಬ ಶಂಕೆ ವ್ಯಕ್ತವಾಗಿದೆ. ಈ ಕುರಿತು ಗೋಣಿಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

× Chat with us