ಹನೂರು: ಅಕ್ರಮವಾಗಿ ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಪ್ರತ್ಯೇಕ ಪ್ರಕರಣಗಳಲ್ಲಿ ಬಂಧಿಸುವಲ್ಲಿ ಹನೂರು ಪೊಲೀಸರು ಯಶಸ್ವಿಯಾಗಿದ್ದಾರೆ.
ಹನೂರು ತಾಲೂಕಿನ ಶಾಗ್ಯ ಗ್ರಾಮದ ರಾಚನಾಯಕ( 75)ಅಲಿಯಾಸ್ ಸಿಂಗಿರಾಚಯ್ಯ, ಹುತ್ತೂರು ಗ್ರಾಮದ ರಂಗಸ್ವಾಮಿ (55) ಬಂಧಿತ ಆರೋಪಿಗಳಾಗಿದ್ದಾರೆ.
ಘಟನೆಯ ವಿವರ: ಹನೂರು ಪಟ್ಟಣ ವ್ಯಾಪ್ತಿಯ ಆರ್ ಎಸ್ ದೊಡ್ಡಿ ಗ್ರಾಮದ ಮಹದೇಶ್ವರ ದೇವಾಲಯದ ಬಳಿ ಶಾಖೆ ಗ್ರಾಮದ ರಾಚನಾಯಕ ಅಕ್ರಮವಾಗಿ ಗಾಂಜಾ ಮಾರಾಟ ಮಾಡಲು ಬಸ್ ನಿಲ್ದಾಣದ ಬಳಿ ನಿಂತಿರುವುದಾಗಿ ದೊರೆತ ಖಚಿತ ಮಾಹಿತಿ ಮೇರೆಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಬಿ ಟಿ ಕವಿತಾ, ಡಿವೈಎಸ್ಪಿ ಧರ್ಮೇಂದ್ರ, ಇನ್ಸ್ಪೆಕ್ಟರ್ ಆನಂದ್ ಮೂರ್ತಿ ಮಾರ್ಗದರ್ಶನದಲ್ಲಿ ಸಬ್ ಇನ್ಸ್ಪೆಕ್ಟರ್ ಮಂಜುನಾಥ್ ಪ್ರಸಾದ್ ಹಾಗೂ ಸಿಬ್ಬಂದಿಗಳು ದಾಳಿ ನಡೆಸಿದಾಗ ಅಕ್ರಮವಾಗಿ ಮಾರಾಟ ಮಾಡಲು ಶೇಖರಣೆ ಮಾಡಿಕೊಂಡಿದ್ದ ಸುಮಾರು 39 ಸಾವಿರ ಮೌಲ್ಯದ 780 ಗ್ರಾಂ ಒಣಗಾಂಜಾ ವನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.
ಮತ್ತೊಂದು ಪ್ರಕರಣದಲ್ಲಿ ಹುತ್ತೂರು ಗ್ರಾಮದ ರಂಗಸ್ವಾಮಿ ಲೊಕ್ಕನಹಳ್ಳಿ ಗ್ರಾಮದಿಂದ ಒಡೆಯರ ಪಾಳ್ಯ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಮಾರ್ಗ ಮಧ್ಯದ ಆಂಡಿ ಪಾಳ್ಯ ಬಸ್ ನಿಲ್ದಾಣದ ಬಳಿ ಗಾಂಜಾ ಮಾರಾಟ ಮಾಡಲು ನಿಂತಿರುವ ಬಗ್ಗೆ ದೊರೆತ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ 8 ಸಾವಿರ ಮೌಲ್ಯದ 159 ಗ್ರಾಂ ಗಾಂಜಾವನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ.
ದಾಳಿಯಲ್ಲಿ ಎಎಸ್ಐ ಶಿವಮೂರ್ತಿ, ಮುಖ್ಯಪೇದೆ ದೊಡ್ಡವೀರ ಶೆಟ್ಟಿ, ನಾಗೇಂದ್ರ, ಚಂದ್ರು ಪೇದೆಗಳಾದ ವಿಶ್ವನಾಥ್, ಶಿವಕುಮಾರ್, ರಾಘವೇಂದ್ರ ಪಾಲ್ಗೊಂಡಿದ್ದರು.
ಬೆಂಗಳೂರು: ಅರಬ್ಬಿ ಸಮುದ್ರದ ಮೇಲೆ ತೇವಾಂಶ ಭರಿತ ಮೋಡಗಳು ಹಾದು ಹೋಗಿರುವ ಹಿನ್ನೆಲೆಯಲ್ಲಿ ರಾಜ್ಯದ ಹಲವೆಡೆ ಸೋಮವಾರ ಮಳೆಯಾಗಿದೆ. ರಾಜಧಾನಿ…
ದಾವಣಗೆರೆ: 2028ಕ್ಕೆ ಎಚ್.ಡಿ.ಕುಮಾರಸ್ವಾಮಿ ಸಿಎಂ ಎಂಬ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಜಮೀರ್ ಅಹಮ್ಮದ್ ಖಾನ್ ವ್ಯಂಗ್ಯವಾಡಿದ್ದಾರೆ. ಈ ಕುರಿತು…
ಗದಗ: ಲಕ್ಕುಂಡಿಯಲ್ಲಿ ಮನೆ ಪಾಯ ಅಗೆಯುವ ವೇಳೆ ಚಿನ್ನದ ನಿಧಿ ಪತ್ತೆಹಚ್ಚಿ ಪ್ರಾಮಾಣಿಕವಾಗಿ ಸರ್ಕಾರಕ್ಕೆ ಒಪ್ಪಿಸಿದ ಪ್ರಜ್ವಲ್ ರಿತ್ತಿ ಕುಟುಂಬಕ್ಕೆ…
ಉಡುಪಿ: ಅರಬ್ಬಿ ಸಮುದ್ರದಲ್ಲಿ ಟೂರಿಸ್ಟ್ ಬೋಟ್ ಮುಳುಗಿ ಇಬ್ಬರು ಪ್ರವಾಸಿಗರು ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು…
ಬೆಂಗಳೂರು: ಬ್ಯಾಂಕಿಂಗ್ ಕ್ಷೇತ್ರದ ನೌಕರರಿಗೆ ವಾರಕ್ಕೆ ಐದು ದಿನ ಮಾತ್ರ ಕೆಲಸದ ದಿನವಾಗಿಸಬೇಕೆಂಬುದು ಸೇರಿದಂತೆ ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ…
ಉಡುಪಿ: ಇಲ್ಲಿನ ಮಲ್ಪೆ ಕೋಡಿಬೆಂಗ್ರೆ ಬೀಷಚ್ ಸಮೀಪ ಪ್ರವಾಸಿ ದೋಣಿ ಮುಗುಚಿದ ಪರಿಣಾಮ ತೀವ್ರ ಅಸ್ವಸ್ಥಗೊಂಡಿದ್ದ ಮೈಸೂರಿನ ಇಬ್ಬರು ಮೃತಪಟ್ಟಿರುವ…