ಬೆಂಗಳೂರು: ಕಾಲ್ ಗರ್ಲ್ ಬೇಕಿದ್ದರೆ ಕರೆ ಮಾಡಿ ಎಂದು ಪತ್ನಿಯ ಫೋಟೋ ಹಾಗೂ ದೂರವಾಣಿ ಸಂಖ್ಯೆಯನ್ನು ವ್ಯಕ್ತಿಯೊಬ್ಬ ಫೇಸ್ಬುಕ್ನಲ್ಲಿ ಪೋಸ್ಟ್ ಮಾಡಿದ ವಿಲಕ್ಷಣ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ದಾಂಪತ್ಯದಲ್ಲಿ ಜಗಳವಾಗಿ ಈ ರೀತಿ ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದೆ. ಈ ಬಗ್ಗೆ ಬೆಂಗಳೂರಿನ ನಂದಿನಿ ಲೇಔಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
2019 ರಲ್ಲಿ ಮದುವೆಯಾಗಿದ್ದ ದಂಪತಿಗಳು ಸದ್ಯ ಬೆಂಗಳೂರಿನನಂದಿನಿ ಲೇಔಟ್ ವ್ಯಾಪ್ತಿಯಲ್ಲಿ ವಾಸವಾಗಿದ್ದರು. ಪತಿ ಸತ್ಯನಾರಾಯಣ ರೆಡ್ಡಿ ಮತ್ತು ಆತನ ಪತ್ನಿ ಮಧ್ಯೆ ದಾಂಪತ್ಯ ಕಲಹವಿತ್ತು.
ಈ ದಂಪತಿ ಒಂದು ವರ್ಷದಿಂದ ಬೇರೆ ಬೇರೆಯಾಗಿದ್ದಾರೆ. ಕಳೆದ ಒಂದು ವರ್ಷದಿಂದ ಪತಿಯು ದೈಹಿಕ ಮತ್ತು ಮಾನಸಿಕ ಹಿಂದು ನೀಡುತ್ತಿದ್ದುದರಿಂದ ಪತ್ನಿ ಆತನಿಂದ ದೂರವಾಗಿದ್ದಳು. ಇದನ್ನೇ ನೆಪ ಮಾಡಿಕೊಂಡಿದ್ದ ಪತಿ, ಪತ್ನಿ ವಿರುದ್ಧ ಸೇಡು ತೀರಿಸಲು ಸಾಮಾಜಿಕ ಮಾಧ್ಯಮ ಫೇಸ್ಬುಕ್ನಲ್ಲಿ ಪೋಸ್ಟ್ ಮಾಡಿದ್ದ ಎನ್ನಲಾಗಿದೆ.
ಕಲಾ ಶಶಿ ಎಂದು ಫೇಸ್ಬುಕ್ ಪೇಜ್ ಕ್ರಿಯೇಟ್ ಮಾಡಿದ್ದ ಆರೋಪಿ ಅದರಲ್ಲಿ ಪತ್ನಿಯ ದೂರವಾಣಿ ಸಂಖ್ಯೆ, ಫೋಟೋ ಮತ್ತು ಆಕೆಯ ಸಹೋದರನ ಮೊಬೈಲ್ ಸಂಖ್ಯೆ ಕೂಡ ಪೋಸ್ಟ್ ಮಾಡಿದ್ದ. ಇಷ್ಟೇ ಅಲ್ಲದೆ, ಕಾಲ್ ಗರ್ಲ್ ಬೇಕಿದ್ದಲ್ಲಿ ಸಂಪರ್ಕಿಸಿ ಎಂದು ಪೋಸ್ಟ್ ಹಾಕಿದ್ದ. ಇದರಿಂದಾಗಿ ಸಂತ್ರಸ್ತೆ ಮತ್ತು ಆಕೆಯ ಸಹೋದರನಿಗೆ ಸಿಕ್ಕಾಪಟ್ಟೆ ಫೋನ್ ಕರೆಗಳು ಬರಲು ಆರಂಭವಾಗಿದ್ದವು.
ಇದರಿಂದ ಬೇಸತ್ತ ಸಂತ್ರಸ್ತೆ ಮತ್ತು ಆಕೆಯ ಸಹೋದರ ನಂದಿನಿ ಲೇಔಟ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಇದರ ಆಧಾರದಲ್ಲಿ ಪ್ರಕರಣ ದಾಖಲಿಸಿರುವ ಪೊಲೀಸರು, ತನಿಖೆ ನಡೆಸುತ್ತಿದ್ದಾರೆ.
ಮೈಸೂರು: ದೇಶ-ವಿದೇಶಗಳಲ್ಲಿ ಜನ ಸಮೂಹವನ್ನು ಹೊಂದಿರುವ ಅವಧೂತ ಶ್ರೀ ಗಣಪತಿ ಸಚ್ಚಿದಾನಂದ ಆಶ್ರಮದ ನೂತನ ಶಾಖೆಯನ್ನು ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ…
ಕುಲಪತಿ ಲೋಕನಾಥ್ ಅಧ್ಯಕ್ಷತೆಯಲ್ಲಿ ನಡೆದ ಸಿಂಡಿಕೇಟ್ ಸಭೆಯಲ್ಲಿ ತೀರ್ಮಾನ ಮೈಸೂರು: ಮೈಸೂರು ವಿಶ್ವವಿದ್ಯಾನಿಲಯದ ೧೦೬ನೇ ಘಟಿಕೋತ್ಸವವನ್ನು ಜ.೫ರಂದುನಡೆಸಲು ತೀರ್ಮಾನಿಸಲಾಗಿದ್ದು, ಘಟಿಕೋತ್ಸವ…
ಲಕ್ಷ್ಮೀಕಾಂತ್ ಕೊಮಾರಪ್ಪ ಶೀತಗಾಳಿಯಿಂದ ಪಾರಾಗಲು ಬೆಚ್ಚನೆಯ ಬಟ್ಟೆ, ಹೊದಿಕೆ, ಬೆಂಕಿಯ ಮೊರೆ ಸೋಮವಾರಪೇಟೆ: ಶೀತಗಾಳಿಯಿಂದ ಚಳಿಯ ಪ್ರಮಾಣ ಹೆಚ್ಚಾಗಿದ್ದು, ಕಳೆದೆರಡು…
ಕೊಳ್ಳೇಗಾಲ: ಶಾಸಕರು ಮೊದಲಿದ್ದ ಡಾಂಬರು ರಸ್ತೆಯನ್ನು ಕಿತ್ತು ಕಾಂಕ್ರೀಟ್ ರಸ್ತೆಯನ್ನಾಗಿ ಅಭಿವೃದ್ಧಿಪಡಿಸಲು ಮುಂದಾದರೆ ಗುತ್ತಿಗೆದಾರ ನಡೆಸಿದ ಕಳಪೆಕಾಮಗಾರಿಯಿಂದ ಜಲ್ಲಿಕಲ್ಲುಗಳು ಮೇಲೆದ್ದು…
ಹನಗೋಡು ಹೋಬಳಿ ವ್ಯಾಪ್ತಿಯ ಗ್ರಾಮಗಳಲ್ಲಿ ಆತಂಕ; ಜಮೀನಿಗೆ ತೆರಳಲು ಹಿಂದೇಟು ವೀರನಹೊಸಹಳ್ಳಿ: ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ ಹುಣಸೂರು ಬಫರ್…