ಅಪರಾಧ

ಕಾಲ್ ಗರ್ಲ್ ಎಂದು ಫೇಸ್‌ಬುಕ್‌ ನಲ್ಲಿ ಪತ್ನಿ ಫೋಟೊ ಪೊಸ್ಟ್ ಮಾಡಿದ ಪತಿ!

ಬೆಂಗಳೂರು: ಕಾಲ್ ಗರ್ಲ್ ಬೇಕಿದ್ದರೆ ಕರೆ ಮಾಡಿ ಎಂದು ಪತ್ನಿಯ ಫೋಟೋ ಹಾಗೂ ದೂರವಾಣಿ ಸಂಖ್ಯೆಯನ್ನು ವ್ಯಕ್ತಿಯೊಬ್ಬ ಫೇಸ್ಬುಕ್​ನಲ್ಲಿ ಪೋಸ್ಟ್ ಮಾಡಿದ ವಿಲಕ್ಷಣ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ದಾಂಪತ್ಯದಲ್ಲಿ ಜಗಳವಾಗಿ ಈ ರೀತಿ ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದೆ. ಈ ಬಗ್ಗೆ ಬೆಂಗಳೂರಿನ ನಂದಿನಿ ಲೇಔಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

2019 ರಲ್ಲಿ ಮದುವೆಯಾಗಿದ್ದ ‌ದಂಪತಿಗಳು ಸದ್ಯ ಬೆಂಗಳೂರಿನ‌ನಂದಿನಿ ಲೇಔಟ್ ವ್ಯಾಪ್ತಿಯಲ್ಲಿ ವಾಸವಾಗಿದ್ದರು. ಪತಿ ಸತ್ಯನಾರಾಯಣ ರೆಡ್ಡಿ ಮತ್ತು ಆತನ ಪತ್ನಿ ಮಧ್ಯೆ ದಾಂಪತ್ಯ ಕಲಹವಿತ್ತು.

ಈ ದಂಪತಿ ಒಂದು ವರ್ಷದಿಂದ ಬೇರೆ ಬೇರೆಯಾಗಿದ್ದಾರೆ. ಕಳೆದ ಒಂದು ವರ್ಷದಿಂದ ಪತಿಯು ದೈಹಿಕ ಮತ್ತು ಮಾನಸಿಕ ಹಿಂದು ನೀಡುತ್ತಿದ್ದುದರಿಂದ ಪತ್ನಿ ಆತನಿಂದ ದೂರವಾಗಿದ್ದಳು. ಇದನ್ನೇ ನೆಪ ಮಾಡಿಕೊಂಡಿದ್ದ ಪತಿ, ಪತ್ನಿ ವಿರುದ್ಧ ಸೇಡು ತೀರಿಸಲು ಸಾಮಾಜಿಕ ಮಾಧ್ಯಮ ಫೇಸ್​​ಬುಕ್‌ನಲ್ಲಿ ಪೋಸ್ಟ್ ಮಾಡಿದ್ದ ಎನ್ನಲಾಗಿದೆ.

ಕಲಾ ಶಶಿ ಎಂದು ಫೇಸ್ಬುಕ್ ಪೇಜ್ ಕ್ರಿಯೇಟ್ ಮಾಡಿದ್ದ ಆರೋಪಿ ಅದರಲ್ಲಿ ಪತ್ನಿಯ ದೂರವಾಣಿ ಸಂಖ್ಯೆ, ಫೋಟೋ ಮತ್ತು ಆಕೆಯ ಸಹೋದರನ ಮೊಬೈಲ್ ಸಂಖ್ಯೆ ಕೂಡ ಪೋಸ್ಟ್ ಮಾಡಿದ್ದ. ಇಷ್ಟೇ ಅಲ್ಲದೆ, ಕಾಲ್ ಗರ್ಲ್ ಬೇಕಿದ್ದಲ್ಲಿ ಸಂಪರ್ಕಿಸಿ ಎಂದು ಪೋಸ್ಟ್ ಹಾಕಿದ್ದ. ಇದರಿಂದಾಗಿ ಸಂತ್ರಸ್ತೆ ಮತ್ತು ಆಕೆಯ ಸಹೋದರನಿಗೆ ಸಿಕ್ಕಾಪಟ್ಟೆ ಫೋನ್ ಕರೆಗಳು ಬರಲು ಆರಂಭವಾಗಿದ್ದವು.

ಇದರಿಂದ ಬೇಸತ್ತ ಸಂತ್ರಸ್ತೆ ಮತ್ತು ಆಕೆಯ ಸಹೋದರ ನಂದಿನಿ ಲೇಔಟ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಇದರ ಆಧಾರದಲ್ಲಿ ಪ್ರಕರಣ ದಾಖಲಿಸಿರುವ ಪೊಲೀಸರು, ತನಿಖೆ ನಡೆಸುತ್ತಿದ್ದಾರೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಸಿಜೆಪಿ ನಾಯಕ ಅಭಿಜಿತ್ ದೀಪ್ಕೆ ಅಜ್ಜಿ ನಿಧನ

ಮುಂಬೈ: ಸಿಜೆಪಿ ಸಂಸ್ಥಾಪಕ ಅಭಿಜಿತ್‌ ದೀಪ್ಕೆ ಅವರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದ ಗಂಟೆಗಳಲ್ಲಿ ಅವರ ಅಜ್ಜಿ ನಿಧನರಾಗಿದ್ದಾರೆ. ದೀರ್ಘಕಾಲದ…

11 hours ago

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ: ನಾಳೆ ಅಧಿಕೃತ ಚಾಲನೆ

ಮೈಸೂರು: ಮೈಸೂರಿನ ದಸರಾ ಮಹೋತ್ಸವದ ಉದ್ಘಾಟನೆಗೆ ಚಾಮುಂಡಿಬೆಟ್ಟದಲ್ಲಿ ಭರ್ಜರಿ ಸಿದ್ಧತೆಗಳು ನಡೆಯುತ್ತಿವೆ. ಉದ್ಘಾಟನಾ ಸಮಾರಂಭಕ್ಕಾಗಿ ಬೃಹತ್ ವೇದಿಕೆ ನಿರ್ಮಾಣ ಕಾರ್ಯ…

13 hours ago

ಮಲೆ ಮಹದೇಶ್ವರ ಬೆಟ್ಟದಲ್ಲಿ ಮಹಾಲಯ ಅಮಾವಾಸ್ಯೆ ಪ್ರಯುಕ್ತ ವಿಶೇಷ ಪೂಜೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಲಯ ಅಮಾವಾಸ್ಯೆ ಪ್ರಯುಕ್ತ ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ…

13 hours ago

ಅಭಿಜಿತ್ ದೀಪ್ಕೆ ಪೊಲೀಸ್ ವಶಕ್ಕೆ: ಜಂತರ್ ಮಂತರ್‌ನಲ್ಲಿ ಪ್ರತಿಭಟನೆಗೆ ಅಜಿಂಕ್ಯ ಶಿಂಧೆ ಸಾರಥ್ಯ

ನವದೆಹಲಿ: ಅಭಿಜಿತ್ ದೀಪ್ಕೆ ಪೊಲೀಸ್ ವಶದಲ್ಲಿರುವ ಹಿನ್ನೆಲೆಯಲ್ಲಿ, ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಸಿಜೆಪಿಯ ಸಂಘಟನಾ ಉಸ್ತುವಾರಿ ಅಜಿಂಕ್ಯ ಶಿಂಧೆ…

14 hours ago

ಓದುಗರ ಪತ್ರ: ಹೋರಾಟಗಳು ರಚನಾತ್ಮಕವಾಗಿರಲಿ, ಗಂಭೀರವಾಗಿರಲಿ

ಚುನಾವಣಾ ಆಯೋಗದ ವಿರುದ್ಧ ವಿಪಕ್ಷಗಳು ಹಾಗೂ ಕೆಲವು ಸಂಘಟನೆಗಳು ಪ್ರತಿಭಟನೆಗಳನ್ನು ಮಾಡುತ್ತಿರುವುದು ಪ್ರಸ್ತುತ ರಾಜಕೀಯ ಮತ್ತು ಸಾಮಾಜಿಕ ವಾತಾವರಣ ದಲ್ಲಿ…

18 hours ago

ಓದುಗರ ಪತ್ರ: ಒಂದು ವರ್ಷ ಅಲೆದಾಡಿಸಿದ ನಂತರ… !

ಮೈಸೂರಿನಲ್ಲಿ ಇ-ಖಾತಾ ಹಾಗೂ ಸಿ ಆರ್ ವಿತರಣೆ ಸಂಬಂಧ ಸಾರ್ವಜನಿಕರಿಂದ ಕುಂದು ಕೊರತೆ ಆಲಿಸಿದ ನಂತರ ಮೈಸೂರು ನಗರ ಪಾಲಿಕೆಯ…

18 hours ago