ಮುಂಬೖೆ : ಟಿವಿಯ ಚರ್ಚೆ ಕಾರ್ಯಕ್ರಮವೊಂದರಲ್ಲಿ ಪ್ರವಾದಿ ಮಹಮ್ಮದ್ ಕುರಿತು ಅವಹೇಳನ ರೀತಿಯಾಗಿ ಮಾತನಾಡಿದ ನೂಪುರ್ ಶರ್ಮಾ ಗೆ ಇದೀಗ ಮುಂಬೈ ಪೊಲೀಸರು ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ಜಾರಿ ಮಾಡಿದ್ದಾರೆ.
ಹೌದು. ನೂಪುರ್ ಶರ್ಮಾಗೆ ವಿರುದ್ಧ ಮುಂಬೈನ ಪೈಧುನಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾದ ಹಿನ್ನೆಲೆ ಇದಕ್ಕೆ ಸಂಬಂಧಿಸಿದಂತೆ ಇದೇ ತಿಂಗಳ (ಜೂನ್) 25 ರ ಬೆಳಿಗ್ಗೆ 11 ಗಂಟೆಗೆ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ನೀಡಲಾಗಿದೆ.
ನೂಪುರ್ ಶರ್ಮಾ ಬಂಧನಕ್ಕೆ ಆಗ್ರಹಿಸಿ ಸಾಕಷ್ಟು ದೇಶಗಳಲ್ಲಿ ಪ್ರತಿಭಟನೆ ನಡೆಯುತ್ತಿದ್ದು, ಹಲವೆಡೆ ಹಿಂಸಾತ್ಮಕ ಸ್ವರೂಪವನ್ನು ಪಡೆದುಕೊಂಡಿದೆ.