ಎರಡು ಕೋಟಿ ಮೌಲ್ಯದ ವಾಚ್ ಕಳ್ಳತನ ಮಾಡಿದ್ದ ಆರೋಪಿ ಅರೆಸ್ಟ್ ಮಾಡಿದ ಇಂದಿರಾನಗರ ಪೊಲೀಸರು

ಬೆಂಗಳೂರು: ಐಶಾರಾಮಿ ವಾಚ್ಗಳನ್ನು ಕಳ್ಳತನ ಮಾಡ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಇಂದಿರಾನಗರದಲ್ಲಿರುವ ವಾಚ್ ಅಂಗಡಿಗಳಲ್ಲಿ ಕೋಟ್ಯಾಂತರ ರೂ ಬೆಲೆ ಬಾಳುವ ವಾಚ್ಗಳನ್ನು ಕದ್ದು ಪರಾರಿಯಾಗುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ನೇಪಾಳ ಮೂಲದ ಓಸಿ ಅಖ್ತರ್ ಬಂಧಿತ ಆರೋಪಿ.

129 ರಾಡೋ ವಾಚ್, 29 ಲಾಂಜಿನ್, 13 ಒಮೇಗಾ ವಾಚ್ ಸೇರಿ ಎರಡು ಕೋಟಿ ಮೌಲ್ಯದ ವಾಚ್ಗಳನ್ನು ಆರೋಪಿಯಿಂದ ವಶಕ್ಕೆ ಪಡೆಯಲಾಗಿದೆ. ಇಂದಿರಾನಗರದ 100 ಫಿಟ್ ರಸ್ತೆಯಲ್ಲಿ ಶಾಮೋಯಿಲ್ ಎಂಬುವರು ಹಲವು ವರ್ಷಗಳಿಂದ ಸಿಮನ್ಸ್ ಟೈಮ್ಸ್ ಶಾಪ್ ಹೆಸರಿನಲ್ಲಿ‌ ದುಬಾರಿ ಮೌಲ್ಯದ ವಾಚ್ಗಳನ್ನು ಮಾರಾಟ ಮಾಡುತ್ತಿದ್ದರು. ಇದೇ ತಿಂಗಳ 4 ರಂದು ಅಂಗಡಿಗೆ ನುಗ್ಗಿದ್ದ ಅಖ್ತರ್ ರೋಲಿಂಗ್ ಶಟರ್ ಮುರಿದು ವಾಚ್ ದೋಚಿದ್ದ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡ ಪೊಲೀಸರು, ಇನ್‌ಸ್ಪೆಕ್ಟರ್ ಹರೀಶ್, ಸಬ್ಇನ್ಸ್ಪೆಕ್ಟರ್ ಅಮರೇಶ್ ಜೇಗರಕಲ್‌ ನೇತೃತ್ವದಲ್ಲಿ‌ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ.

× Chat with us