ಮೈಸೂರು: ದೇವಾಲಯದ ಬಾಗಿಲು ಮೀಟಿ ಒಳ ನುಗ್ಗಿರುವ ಖದೀಮರು ಹುಂಡಿ ಹಣವನ್ನು ಕಳವು ಮಾಡಿದ್ದಾರೆ. ಮೈಸೂರು ತಾಲ್ಲೂಕು ಇಲವಾಲ ಹೋಬಳಿಯ ಬೊಮ್ಮನಹಳ್ಳಿಯ ಮಹದೇಶ್ವರಸ್ವಾಮಿ ದೇವಾಲಯದಲ್ಲಿ ಕಳ್ಳತನ ನಡೆದಿದೆ. ಫೆ.20ರಂದು ರಾತ್ರಿ 8 ಗಂಟೆ ಸಮಯದಲ್ಲಿ ದೇವಾಲಯದ ಪೂಜಾರಿಯವರು ದೇವಸ್ಥಾನದ ಬಾಗಿಲಿಗೆ ಬೀಗ ಹಾಕಿಕೊಂಡು ಹೋಗಿದ್ದರು. ಮರು ದಿನ ಬೆಳಿಗ್ಗೆ 6 ಗಂಟೆಯ ಸಮಯದಲ್ಲಿ ದೇವಾಲಯಕ್ಕೆ ಬಂದು ನೋಡಿದಾಗ ದೇವಾಲಯದ ಬಾಗಿಲು ಮೀಟಿ ಒಳ ನುಗ್ಗಿರುವ ಖದೀಮರು ಗೋಲಕವನ್ನು ಹೊರಗೆ ತಂದು ಒಡೆದು ಅದರಲ್ಲಿದ್ದ ಹಣ ಕಳವು ಮಾಡಿರುವುದು ತಿಳಿದುಬಂದಿದೆ. ಈ ಸಂಬಂಧ ಇಲವಾಲ ಠಾಣೆಯಲ್ಲಿ ದೂರು ದಾಖಲಾಗಿದ್ದು, ಗೋಲಕದಲ್ಲಿ ಸುಮಾರು ೨೫ ಸಾವಿರ ರೂ. ಇತ್ತು ಎಂದು ದೂರಿನಲ್ಲಿ ತಿಳಿಸಲಾಗಿದೆ.
- ಮುಖಪುಟ
- ಮೈಸೂರು
- ಜಿಲ್ಲೆಗಳು
- ರಾಜ್ಯ
- ದೇಶ- ವಿದೇಶ
- ರಾಜಕೀಯ
- ಅಪರಾಧ
- ಮಹಿಳೆ
- ಕೃಷಿ
- ವಿಜ್ಞಾನ ತಂತ್ರಜ್ಞಾನ
- ಕ್ರೀಡೆ
- ವಾಣಿಜ್ಯ
- ಚಿತ್ರಸಂತೆ
- ವಿಶೇಷ
- ಆಂದೋಲನ ಪುರವಣಿ
- ಎಡಿಟೋರಿಯಲ್
- ಆಂದೋಲನ 50
- ಜಾಹೀರಾತು
- Cricket
Subscribe to Updates
Get the latest creative news from FooBar about art, design and business.