Mysore
19
broken clouds

Social Media

ಗುರುವಾರ, 19 ಡಿಸೆಂಬರ್ 2024
Light
Dark

ಕೆಎಎಸ್‌ ಅಧಿಕಾರಿ ಪತ್ನಿ ನೇಣಿಗೆ ಶರಣು: ಮೂರು ತಿಂಗಳ ಹಿಂದಿನ ಡೆತ್‌ ನೋಟ್‌ನಲ್ಲಿತ್ತು ಸತ್ಯಾಂಶ!

ಬೆಂಗಳೂರು: ಕೆಎಎಸ್‌ ಅಧಿಕಾರಿ ಪತ್ನಿ ನೇಣು ಬಿಗಿದುಕೊಂಡು ಆತ್ನಹತ್ಯೆಗೆ ಶರಣಾಗರುವ ಘಟನೆ ನಗರದ ಸಂಜಯ್‌ ನಗರದಲ್ಲಿ ನಡೆದಿದೆ.

ಮೃತ ಮಹಿಳೆ ಚೈತ್ರಾಗೌಡ ಕೆಐಎಡಿಬಿ ಸಹಾಯಕ ಆಯುಕ್ತರಾದ ಶಿವಕುಮಾರ್‌ ಅವರ ಪತ್ನಿಯಾಗಿದ್ದು, ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಅವರ ಮೃತದೇಹ ಪತ್ತೆಯಾಗಿದೆ.

ಇದೇ ವೇಳೆ ಅವರು ಮೂರು ತಿಂಗಳ ಹಿಂದೆ ಬರೆದಿಟ್ಟಿದ್ದ ಡೆತ್‌ ನೋಟ್‌ ಒಂದು ಸಿಕ್ಕಿದ್ದು, ಅದರಲ್ಲಿ ಚೈತ್ರಗೌಡ ಅವರ ಆತ್ಮಹತ್ಯೆ ಸಂಬಂಧ ಮಾಹಿತಿ ಲಭ್ಯವಾಗಿದೆ.

ಇದೇ ಮಾರ್ಚ್‌ 11 ರಂದು ಈ ಡೆತ್‌ ನೋಟ್‌ ಬರೆದಿದ್ದಾರೆ. ಇದರಲ್ಲಿ ನನ್ನ ಗಂಡ ಒಳ್ಳೆಯವರು, ಜೀವನವನ್ನು ಚೆನ್ನಾಗಿ ಎಂಜಾಯ್‌ ಮಾಡಿ, ಮಗಳನ್ನು ಚೆನ್ನಾಗಿ ನೋಡಿಕೊಳ್ಳಿ ಎಂದಿದ್ದಾರೆ.

ನಾನು ಡಿಪ್ರೆಷನ್‌ನಿಂದ ಬಳಲುತ್ತಿದ್ದು, ಅದರಿಂದ ಹೊರಬರಲು ಸಾಕಷ್ಟು ಬಾರಿ ಪ್ರಯತ್ನಿಸಿದರು ಅದರಿಂದ ಹೊರ ಬರಲು ಸಾಧ್ಯವಾಗುತ್ತಿಲ್ಲ. ಇದಕ್ಕೆಲ್ಲಾ ಆತ್ಮಹತ್ಯೆ ಮಾಡಿಕೊಳ್ಳುವುದು ತಪ್ಪು ಎಂಬುದು ಗೊತ್ತಿದೆ ಆದರೂ ನನ್ನ ಜೀವನವನ್ನು ಅಂತ್ಯ ಮಾಡುತ್ತಿದ್ದೇನೆ. ಮಗುವನ್ನು ಚೆನ್ನಾಗಿ ನೋಡಿಕೊಂಡು ಲೈಫ್‌ ಎಂಜಾಯ್‌ ಮಾಡಿ ಎಂದು ಮೂರು ತಿಂಗಳ ಹಿಂದೆ ಡೆತ್‌ ನೋಟ್‌ನಲ್ಲಿ ಬರೆದಿಟ್ಟಿರುವುದು ಕಂಡು ಬಂದಿದೆ.

ಈ ಸಂಬಂಧ ಸಂಜಯ್‌ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Disclaimer: ಯಾವುದೇ ಸಮಸ್ಯೆಗೂ ಅತ್ಮಹತ್ಯೆ ಒಂದೇ ಪರಿಹಾರವಲ್ಲ. ನಿಮ್ಮ ತೊಂದರೆಗಳನ್ನು ಆತ್ಮೀಯರ ಜತೆ ಹಂಚಿಕೊಳ್ಳಿ. ಇಲ್ಲವಾದರೆ ಈ ಸಹಾಯವಾಣಿಗೆ ಕರೆಮಾಡಿ ಮಾತನಾಡಿ: 9152987821

Tags: