ಸಕಲೇಶಪುರ (ಹಾಸನ) : ವ್ಯಕ್ತಿಯೊಬ್ಬರ ಶವ ಸಂಸ್ಕಾರಕ್ಕೆ ತೆರಳಿದ್ದ ವ್ಯಕ್ತಿ ಶವವಾಗಿ ಪತ್ತೆಯಾಗಿರುವ ಘಟನೆ ಸಕಲೇಶಪುರದ ಮಠ ಸಾಗರ ಗ್ರಾಮದ ಬಳಿ ನಡೆದಿದೆ.
ಮಠ ಸಾಗರ ಗ್ರಾಮದ ಸ್ವಾಮಿ (53 ವರ್ಷ) ಎಂಬ ವ್ಯಕ್ತಿಯೇ ಶವವಾಗಿ ಪತ್ತೆಯಾಗಿದ್ದು, ತಲೆಯ ಭಾಗಕ್ಕೆ ತೀವ್ರ ಗಾಯಗೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದು ದುಷ್ಕರ್ಮಿಗಳು ಕೊಲೆ ಮಾಡಲಾಗಿದೆ ಎನ್ನಲಾಗಿದೆ. ಮೃತ ಸ್ವಾಮಿ ಸುಮಾರು 20 ವರ್ಷಗಳಿಂದ ಮಂಡಳಿಯಲ್ಲಿ ನೌಕರರಾಗಿ ಕೆಲಸ ನಿರ್ವಹಿಸುತ್ತಿದ್ದು, ಇವರ ಸಾವು ಈಗ ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಈ ಸಂಬಂಧ ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.