ಅಪರಾಧ

ಪತ್ನಿಯೊಂದಿಗೆ ಅಕ್ರಮ ಸಂಬಂಧ ಶಂಕೆ : ಪತಿಯಿಂದ ವ್ಯಕ್ತಿಯ ಕೊಲೆ

ಮಡಿಕೇರಿ : ಅಕ್ರಮ ಸಂಬಂಧದ ಸಂಶಯದಿಂದ ಪತ್ನಿಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವುದಲ್ಲದೆ, ವ್ಯಕ್ತಿಯೊಬ್ಬರ ಮೇಲೆಯೂ ದೊಣ್ಣೆಯಿಂದ ಹಲ್ಲೆ ನಡೆಸಿ, ಕೊಲೆ ಮಾಡಿರುವ ಘಟನೆ ಕುಶಾಲನಗರ ಸಮೀಪದ ಗುಡ್ಡೆಹೊಸೂರು ಬಳಿಯ ಬಸವನಹಳ್ಳಿಯಲ್ಲಿ ನಡೆದಿದೆ.

ಬಸವನಹಳ್ಳಿಯ ಜಮೀನೊಂದರಲ್ಲಿ ಕಾವಲುಗಾರನಾಗಿ ಕೆಲಸ ಮಾಡುತ್ತಿದ್ದ ಕೇರಳ ರಾಜ್ಯದ ಕೊಟ್ಟಾಯಂ ಜಿಲ್ಲೆಯ ಮುರಳಿ(೪೮) ಕೊಲೆಗೀಡಾಗಿರುವ ವ್ಯಕ್ತಿ. ಬಸವನಹಳ್ಳಿಯ ನಿವಾಸಿ, ಕೂಲಿ ಕಾರ್ಮಿಕ ತೀರ್ಥ(೨೫) ಕೊಲೆ ಅರೋಪಿಯಾಗಿದ್ದು, ತೀರ್ಥನ ಪತ್ನಿ ಜ್ಯೋತಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ಬಸವನಹಳ್ಳಿ ಗ್ರಾಮದ ನಾಗೇಂದ್ರ ಎಂಬವರ ಜಮೀನನ್ನು ಶುಂಠಿ ಕೃಷಿ ಮಾಡಲು ಮಣಿಕಂಠ ಎಂಬವರು ಲೀಸ್‌ಗೆ ಪಡೆದಿದ್ದರು. ೩ ತಿಂಗಳುಗಳ ಹಿಂದೆ ಕೊಪ್ಪ ಬಳಿಯ ರಾಣಿಗೇಟ್‌ನಲ್ಲಿದ್ದ ಕೇರಳ ಮೂಲದ ಮುರಳಿ ಎಂಬವರನ್ನು ಮಣಿಕಂಠ ತಾವು ಲೀಸ್‌ಗೆ ಪಡೆದಿದ್ದ ಜಮೀನಿನಲ್ಲಿ ಒಂದು ಶೆಡ್ ನಿರ್ಮಿಸಿ ಕಾವಲಿಗೆ ನೇಮಿಸಿದ್ದರು.

ಸಮೀಪದಲ್ಲೇ ಆರೋಪಿ ತೀರ್ಥ ಪತ್ನಿ ಜ್ಯೋತಿಯೊಂದಿಗೆ ವಾಸವಿದ್ದನು. ಶುಕ್ರವಾರ ರಾತ್ರಿ ತೀರ್ಥ ಹಾಗೂ ಜ್ಯೋತಿ ನಡುವೆ ಗಲಾಟೆ ಆರಂಭವಾಗಿದೆ. ಗಲಾಟೆ ಕೇಳಿ ಮುರಳಿ, ತೀರ್ಥ ಅವರ ಮನೆಯ ಬಳಿ ಬಂದು ವಿಚಾರಿಸಿದ್ದಾರೆ. ಈ ಸಂದರ್ಭ ಜ್ಯೋತಿ ಹಾಗೂ ಮುರಳಿ ನಡುವೆ ಅಕ್ರಮ ಸಂಬಂಧವಿದೆ ಎಂದು ಅನುಮಾನಗೊಂಡ ತೀರ್ಥ ಇಬ್ಬರ ಮೇಲೂ ಮಾರಣಾಂತಿಕ ಹಲ್ಲೆ ನಡೆಸಿದ್ದಾನೆ. ಘಟನೆಯಿಂದ ಜ್ಯೋತಿ ಗಂಬೀರವಾಗಿ ಗಾಯಗೊಂಡಿದ್ದರೆ, ಮುರಳಿ ಕೊನೆಯುಸಿರೆಳೆದಿದ್ದಾರೆ.

ಸ್ಥಳಕ್ಕೆ ಎಸ್‌ಪಿ ಕೆ. ರಾಮರಾಜನ್ ಹಾಗೂ ಇತರ ಅಧಿಕಾರಿಗಳು, ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ತೀರ್ಥನನ್ನು ವಶಕ್ಕೆ ಪಡೆದು ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ. ಈ ಸಂಬಂಧ ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಐತಿಹಾಸಿಕ ಸಂಗತಿ!

ಐತಿಹಾಸಿಕ ಸಂಗತಿ! ಸರ್ಕಾರದ ನಿರ್ದೇಶನದ ಮೇರೆಗೆ ಬೆಳಗಾವಿ ನಗರಪಾಲಿಕೆ ‘ಗಡಿ ವಿಷಯದಲ್ಲಿ ಮಹಾಜನ್ ವರದಿಯೇ ಅಂತಿಮ’ಎಂಬ ನಿರ್ಣಯ ಅಂಗೀಕರಿಸಿರುವುದು ಐತಿಹಾಸಿಕ…

3 hours ago

ಓದುಗರ ಪತ್ರ: ಟ್ರಾಫಿಕ್ ದಂಡ: ಸುಪ್ರೀಂ ಸಲಹೆ ಸ್ವಾಗತಾರ್ಹ

ಟ್ರಾಫಿಕ್ ನಿಯಮ ಉಲ್ಲಂಘಿಸಿ ದಂಡ ಪಾವತಿಸದೆ ಬಾಕಿ ಉಳಿಸಿಕೊಂಡಿರುವವರಿಂದ ಹಣ ವಸೂಲಿ ಮಾಡಲು, ಆ ದಂಡದ ಮೊತ್ತವನ್ನು ಅವರ ಮನೆ…

3 hours ago

ಓದುಗರ ಪತ್ರ: ಆಕಾಶದಲ್ಲಿ ಶೌರ‍್ಯಪ್ರದರ್ಶನಕ್ಕೊಂದು ಸಲಾಂ

ತನ್ನ ಪ್ರಾಣವನ್ನೇ ಒತ್ತೆಯಿಟ್ಟು ದುಬೈನಿಂದ ಇಸ್ರೇಲ್‌ನ ಅವೀವ್‌ಗೆ ತೆರಳುತ್ತಿದ್ದ -ದುಬೈ ವಿಮಾನ ಹೈಜಾಕ್ ತಪ್ಪಿಸಿದ ಭಾರತೀಯ ಪೈಲಟ್ ಕ್ಯಾಪ್ಟನ್ ಸ್ಮಿತ್…

3 hours ago

ಬ್ರೇಕ್ ಕಿತ್ತ ಬಸ್ಸಿನಲ್ಲಿ ಇಳಿಜಾರಿನಲ್ಲಿ ಸಾಗುತ್ತಿದ್ದೇವೆ…

ಡಾ . ಚೇತನ ಗುರುರಾಜು, ಮುಖ್ಯ ಶಿಕ್ಷಕಿ, ಅರಿವು ವಿದ್ಯಾಸಂಸ್ಥೆ, ಮೈಸೂರು  ಸಾಮಾಜಿಕ ಮಾಧ್ಯಮಗಳ ಬಲೆಗೆ ಸಿಲುಕಿವೆ ಹಲವು ದೇಶಗಳು…

3 hours ago

ಮಕ್ಕಳ ಮನದಂಗಳದಲ್ಲಿ ಗಾಂಧಿ ಚಿಂತನೆಯ ಬೇರುಗಳು

ಸ್ವಾವಲಂಬನೆಯ ಸಂಕೇತ ಮಹಾತ್ಮ ಗಾಂಧೀಜಿ ಮಹಾತ್ಮ ಗಾಂಧೀಜಿ ಅವರು ಭಾರತದ ಸ್ವಾತಂತ್ರ್ಯ ಹೋರಾಟದ ಮಹಾನ್ ನಾಯಕ ಹಾಗೂ ರಾಷ್ಟ್ರಪಿತ ಎಂದು…

3 hours ago

ಜಗದ ಸೌಹಾರ್ದ ನದಿ ಗಾಂಧಿ

ಪರಶುರಾಮ್, ನಿರ್ದೇಶಕರು, ಒಡನಾಡಿ ಸೇವಾ ಸಂಸ್ಥೆ ಗಾಂಧಿ ವಿಚಾರಗಳನ್ನು ಸಂವಾದದ ಮೂಲಕ ಮುನ್ನಡೆಸಲು ಸಾಧ್ಯವೇ? ಅಥವಾ ಅನುಸರಿಸಲು ಸಾಧ್ಯವಾಗದಿರುವ ನಡೆಯನ್ನು…

4 hours ago