ಕೊಡಗು ಮೆಡಿಕಲ್ ಕಾಲೇಜಿನ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿ ಆತ್ಮಹತ್ಯೆ

ಮಡಿಕೇರಿ: ಮಡಿಕೇರಿಯ ಮೆಡಿಕಲ್ ಕಾಲೇಜಿನಲ್ಲಿ ವಿದ್ಯಾರ್ಥಿನಿಲಯದಲ್ಲಿ ವಿದ್ಯಾರ್ಥಿಯೊಬ್ಬ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ.

ಮೂಲತಃ ಬೀದರ್ ಜಿಲ್ಲೆಯ ಔರಾದ್ ನಿವಾಸಿ ಪ್ರದೀಪ್ (23) ಆತ್ಮಹತ್ಯೆ ಮಾಡಿಕೊಂಡವರು.

ದ್ವಿತೀಯ ವರ್ಷದ ವೈದ್ಯಕೀಯ ವ್ಯಾಸಂಗ ಮಾಡುತ್ತಿದ್ದ ಪ್ರದೀಪ್, ಹಾಸ್ಟೆಲ್‌ನಲ್ಲಿ ಭಾನುವಾರ ಸಂಜೆ ಆತ್ಮಹತ್ಯೆಗೆ ಶರಣಾಗಿದ್ದಾನೆ. ಖಿನ್ನತೆಗೆ ಒಳಗಾಗಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಈ ಸಂಬಂಧ ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

× Chat with us